ಉಡುಪಿ | ನಶಾಮುಕ್ತ ಭಾರತ: ಪ್ರತಿಜ್ಞಾವಿಧಿ ಬೋಧನೆ

ಉಡುಪಿ, ನ.18: ನಶಾ ಮುಕ್ತ ಭಾರತ ಅಂಗವಾಗಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಕೊಠಡಿಯಲ್ಲಿ ಇಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಸೆಟ್ಟಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಲತಾ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.
Next Story





