Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಕೇಂದ್ರೀಯ ವಿದ್ಯಾಲಯದ ಸ್ವಂತ...

ಉಡುಪಿ: ಕೇಂದ್ರೀಯ ವಿದ್ಯಾಲಯದ ಸ್ವಂತ ಕಟ್ಟಡಕ್ಕೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ25 Sept 2023 8:35 PM IST
share
ಉಡುಪಿ: ಕೇಂದ್ರೀಯ ವಿದ್ಯಾಲಯದ ಸ್ವಂತ ಕಟ್ಟಡಕ್ಕೆ ಶಿಲಾನ್ಯಾಸ

ಉಡುಪಿ, ಸೆ.25: ರಾಷ್ಟ್ರಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯೊಂದನ್ನು ್ನ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿನಗರದಲ್ಲಿ 10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ವನ್ನು ಒಂದೂವರೆ ವರ್ಷದ ಒಳಗಾಗಿ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಸೋಮವಾರ ನಗರದ ಅಲೆವೂರು ಗ್ರಾಮದ ಪ್ರಗತಿನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಎದುರು ಉಡುಪಿಯ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡುತಿದ್ದರು.

ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯ ಬರಬೇಕೆನ್ನುವುದು ಜನರ ಅಪೇಕ್ಷೆಯಾಗಿತ್ತು. ಈ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ 2015ರಲ್ಲಿ ಉಡುಪಿ ಜಿಲ್ಲೆಯಲ್ಲಿ ಕೇಂದ್ರೀಯ ವಿದ್ಯಾಲಯ ಪ್ರಾರಂಭಗೊಂಡಿದ್ದು, ಇದಕ್ಕೆ ಸ್ವಂತ ಕಟ್ಟಡದ ಅವಶ್ಯಕತೆ ಇತ್ತು. ಈಗ ಕಟ್ಟಡ ನಿರ್ಮಾಣಕ್ಕೆ ಇದ್ದಂತಹ ಸ್ಥಳಾವಕಾಶ ಹಾಗೂ ಇತರೆ ಅಡೆತಡೆ ಗಳು ನಿವಾರಣೆ ಗೊಂಡಿದ್ದು, ಕಟ್ಟಡದ ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.

ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಕೊರತೆ ಇದ್ದು, ನಾಳೆ ಮೈಸೂರಿನಲ್ಲಿ ನಡೆಯುವ ರೋಜ್‌ಗಾರ್ ಮೇಳದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಅಗತ್ಯ ವಿರುವ ಶಿಕ್ಷಕರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇಲ್ಲಿ ನಿರ್ಮಾಣವಾಗುವ ಕೇಂದ್ರೀಯ ವಿದ್ಯಾಲಯವು ಸುಸಜ್ಜಿತ ಕಟ್ಟಡ, ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ಬಳಿಕವಷ್ಟೇ ಉದ್ಘಾಟನೆಗೊಳ್ಳಲಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಿ ಸಿದಂತೆ ಸಮಸ್ಯೆಗಳಿದ್ದಲ್ಲಿ ಅದನ್ನು ಬಗೆಹರಿಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದ ಶೋಭಾ, ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿ ಗಳು ಉನ್ನತ ಮಟ್ಟದ ಹುದ್ದೆಗಳನ್ನು ಪಡೆಯುವಂತೆ ಶುಭ ಹಾರೈಸಿದರು.

ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯತೀಶ್ ಕುಮಾರ್, ಕೇಂದ್ರೀಯ ವಿದ್ಯಾಲಯದ ಅಧ್ಯಾಪಕರುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಬೆಂಗಳೂರು ಕೇಂದ್ರೀಯ ವಿದ್ಯಾಲಯ ಸಂಘಟನೆ ಪ್ರಾದೇಶಿಕ ಕಚೇರಿಯ ಉಪ ಆಯುಕ್ತ ಧರ್ಮೇಂದ್ರ ಪಟ್ಲೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಡುಪಿಯ ಬಿಇಓ ಡಾ.ಅಶೋಕ್ ಕಾಮತ್ ಮತ್ತು ಶಿಕ್ಷಕಿ ಮಾರ್ಗರೇಟ್ ಅಬ್ರಹಾಂ ಕಾರ್ಯಕ್ರಮ ನಿರೂಪಿಸಿದರೆ, ಪ್ರಾಂಶುಪಾಲ ನಾರಾಯಣ ರಾವ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X