Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಮಿಷನ್ ಆಸ್ಪತ್ರೆಗೆ ಗ್ಲೋಬಲ್...

ಉಡುಪಿ| ಮಿಷನ್ ಆಸ್ಪತ್ರೆಗೆ ಗ್ಲೋಬಲ್ ಗ್ರೀನ್ - ಹೆಲ್ತಿ ಹಾಸ್ಪಿಟಲ್ಸ್ ನೆಟ್‌ವರ್ಕ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ7 Nov 2024 7:43 PM IST
share
ಉಡುಪಿ| ಮಿಷನ್ ಆಸ್ಪತ್ರೆಗೆ ಗ್ಲೋಬಲ್ ಗ್ರೀನ್ - ಹೆಲ್ತಿ ಹಾಸ್ಪಿಟಲ್ಸ್ ನೆಟ್‌ವರ್ಕ್ ಪ್ರಶಸ್ತಿ

ಉಡುಪಿ, ನ.7: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ(ಮಿಷನ್) ಆಸ್ಪತ್ರೆಯ ಸುಸ್ಥಿರ ಆರೋಗ್ಯ ಸೇವೆಯನ್ನು ಉತ್ತೇಜಿಸುವಲ್ಲಿನ ಪ್ರವರ್ತಕ ಪ್ರಯತ್ನಗಳಿಗಾಗಿ ಗ್ಲೋಬಲ್ ಗ್ರೀನ್ ಮತ್ತು ಹೆಲ್ತಿ ಹಾಸ್ಪಿಟಲ್ಸ್ (ಜಿಜಿಎಚ್‌ಎಚ್) ನೆಟ್‌ವರ್ಕ್ ವಿಶೇಷ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಅ.30ರಿಂದ ನ.1ರವರೆಗೆ ವಿಯೆಟ್‌ನಾಮ್‌ನ ಹೈಫಾಂಗ್ ಪಟ್ಟಣದಲ್ಲಿ ನಡೆದ ಹವಾಮಾನ ಬದಲಾವಣೆ ಮತ್ತು ಆರೋಗ್ಯದ ಕುರಿತಾದ ಅಂತಾ ರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನ ಮತ್ತು 6ನೇ ಏಷ್ಯಾ-ಪೆಸಿಫಿಕ್ ಗ್ರೀನ್ ಹೆಲ್ತ್‌ಕೇರ್ ಸಿಸ್ಟಮ್ ಸಮ್ಮೇಳನದಲ್ಲಿ ಲೊಂಬಾರ್ಡ್ ಆಸ್ಪತ್ರೆಯ ನಿರ್ದೇಶಕ ಡಾ.ಸುಶಿಲ್ ಜತನ್ನ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಆಗ್ನೇಯ ಏಷ್ಯಾದ ಹಾನಿಯಿಲ್ಲದ ಆರೋಗ್ಯ ರಕ್ಷಣೆ ಸಂಸ್ಥೆ, ಆರೋಗ್ಯ ಪರಿಸರದ ಸಂಶೋಧನೆ ಮತ್ತು ಅಭಿವದ್ಧಿ ಕೇಂದ್ರ, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್(ಎಡಿಬಿ), ಎಫ್‌ಎಚ್‌ಐ 360, ಯುನಿಸೆಫ್ ಮತ್ತು ಯುಎನ್‌ಡಿಪಿ ಈ ಸಮ್ಮೇಳನವನ್ನು ವಿಯೆಟ್‌ನಾಮ್‌ನ ಆರೋಗ್ಯ ಸಚಿವಾಲಯ, ಹೈಫಾಂಗ್ ಯೂನಿವರ್ಸಿಟಿ ಆಫ್ ಮೆಡಿಸಿನ್ ಅಂಡ್ ಫಾರ್ಮಸಿ ಮತ್ತು ವಿಯೆಟ್ ನಾಮ್ ಆರೋಗ್ಯ ಪರಿಸರ ನಿರ್ವಹಣಾ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಿತ್ತು.

‘ಲೊಂಬಾರ್ಡ್ ಆಸ್ಪತ್ರೆಗೆ ಈ ಪ್ರತಿಷ್ಠಿತ ಅಂತರರಾಷ್ಟ್ರೀಯ ಗೌರವವು ಮಹತ್ವದ ಮೈಲಿಗಲ್ಲು ಮತ್ತು ನಾವು ಕರಾವಳಿ ಕರ್ನಾಟಕದಲ್ಲಿ ಪರಿಸರ ಸ್ನೇಹಿ, ಸುಸ್ಥಿರ ಆರೋಗ್ಯ ಸೇವೆಯತ್ತ ನಮ್ಮ ಪ್ರಯಾಣವನ್ನು ಮುಂದುವರಿಸುವಲ್ಲಿ ಸ್ಪೂರ್ತಿ ದಾಯಕವಾಗಿದೆ ಎಂದು ಡಾ.ಸುಶಿಲ್ ಜತನ್ನ ತಿಳಿಸಿದ್ದಾರೆ.

1923ರ ಜೂ.15ರಂದು ಯುವ ಸ್ವಿಸ್ ಮಿಷನರಿ ಡಾ.ಇವಾ ಲೊಂಬಾರ್ಡ್ ಸ್ಥಾಪಿಸಿದ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯು ಕರಾವಳಿ ಕರ್ನಾಟಕದ ಅತ್ಯಂತ ಹಳೆಯ ಆಸ್ಪತ್ರೆಗಳಲ್ಲಿ ಒಂದಾಗಿದೆ. 2024ರಲ್ಲಿ ತನ್ನ 101ನೇ ವಾರ್ಷಿಕೋತ್ಸವದಂದು ಆಸ್ಪತ್ರೆಯು ಪರಿಸರ ಸವಾಲುಗಳನ್ನು ಎದುರಿಸುವ ಮಹತ್ವಾಕಾಂಕ್ಷೆಯ ‘ಇನ್ಸಪಾಯರ್’ ಗ್ರೀನ್ ಹಾಸ್ಪಿಟಲ್ ಯೋಜನೆ ಯನ್ನು ಪ್ರಾರಂಭಿಸಿತು.

ನವೀಕರಿಸಬಹುದಾದ ಇಂಧನ ಮೂಲಗಳ ಬಳಕೆ, ನೀರಿನ ಕೊರತೆ ನಿರ್ವಹಣೆ, ತ್ಯಾಜ್ಯ ನಿರ್ವಹಣೆ, ವಾಯು ಮಾಲಿನ್ಯ ವನ್ನು ನಿಭಾಯಿಸುವುದು, ಕ್ಯಾಂಪಸ್‌ನಲ್ಲಿ ಜೀವವೈವಿಧ್ಯವನ್ನು ಉತ್ತೇಜಿಸುವುದು ಮತ್ತು ಹವಾಮಾನದ ಬಗ್ಗೆ ಸಾರ್ವಜನಿಕ ಜಾಗತಿ ಮೂಡಿಸುವುದರ ಮೂಲಕ ಆಸ್ಪತ್ರೆಯ ಪರಿಸರ ಹೆಜ್ಜೆಗುರುತನ್ನು ಪರಿಹರಿವುದು ಇನ್ಸಪಾಯರ್ ಯೋಜನೆಯ ಸಮಗ್ರ ಕಾರ್ಯತಂತ್ರವಾಗಿದೆ.

ನವದೆಹಲಿಯ ರಾಷ್ಟ್ರೀಯ ಆಸ್ಪತ್ರೆಗಳು ಮತ್ತು ಆರೋಗ್ಯ ಸೇವೆ ಒದಗಿಸುವವರ ಮಾನ್ಯತಾ ಮಂಡಳಿಯಿಂದ ಪ್ರತಿಷ್ಠಿತ ಎನ್‌ಎಬಿಹೆಚ್ ಪ್ರಮಾಣಿಕರಣ ಪಡೆದಿರುವ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯು ಭಾರತ ದಾದ್ಯಂತ ಪರಿಸರ ಸ್ನೇಹಿ ಮತ್ತು ಸುಸ್ಥಿರ ಆಸ್ಪತ್ರೆಗಳನ್ನು ಪ್ರೋತ್ಸಾಹಿಸುವ ಪಬ್ಲಿಕ್ ಹೆಲ್ತ್ ಫೌಂಡೇಶನ್ ಆಫ್ ಇಂಡಿಯಾ(ಪಿಎಚ್‌ಎಫ್‌ಐ)ದ ಅಂಗ ಸಂಸ್ಥೆಯಾದ ಆರೋಗ್ಯ ಮತ್ತು ಪರಿಸರ ನಾಯಕತ್ವ ವೇದಿಕೆಯ ಭಾಗವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X