ಉಡುಪಿ| ರೈಲಿನಲ್ಲಿ ಮಹಿಳೆಯ ಬ್ಯಾಗ್‌ನಲ್ಲಿದ್ದ 45.80ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಮಣಿಪಾಲ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆಗಿರುವ ಬಗ್ಗೆ ವರದಿಯಾಗಿದೆ.
ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್, ತಮ್ಮ ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ ಡಿ.26ರಂದು ಮಧ್ಯಾಹ್ನ ಮತ್ಸ್ಯಗಂಧ ರೈಲಿನಲ್ಲಿ ಒಡವೆಗಳಿದ್ದ ಒಂದು ವ್ಯಾನಿಟಿ ಬ್ಯಾಗ್, ಬಟ್ಟೆಗಳಿದ್ದ ಹ್ಯಾಂಡ್ ಬ್ಯಾಗ್ ಮತ್ತು ಸೂಟ್ಕೇಸ್ ಗಳೊಂದಿಗೆ ಉಡುಪಿಗೆ ಪ್ರಯಾಣಿಸುತಿದ್ದರು. ಹೆಲ್ಮೀನಾ ಸಾಲಿನ್ಸ್ ಒಡವೆಗಳಿದ್ದ ವ್ಯಾನಿಟಿ ಬ್ಯಾಗನ್ನು ತನ್ನ ತಲೆಯ ಬಳಿ ಇರಿಸಿ ರಾತ್ರಿ ಮಲಗಿದ್ದರು.
ಡಿ.27ರಂದು ಬೆಳಗ್ಗೆ 6.10ರ ಸುಮಾರಿಗೆ ಮುರ್ಡೇಶ್ವರ ರೈಲು ನಿಲ್ದಾಣ ಬಳಿ ಹೆಲ್ಮೀನಾ ಅವರ ಮಗಳು ಬ್ಯಾಗ್ ನೋಡಿದಾಗ ಅದರಲ್ಲಿದ್ದ 45,80,000ರೂ. ಮೌಲ್ಯದ 408 ಗ್ರಾಂ ಚಿನ್ನದ ಆಭರಣಗಳು ಹಾಗೂ 15,000ರೂ. ನಗದು ಕಳವಾಗಿರುವುದು ಕಂಡುಬಂದಿದೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





