ಉಡುಪಿ | ದೀರ್ಘಕಾಲದವರೆಗೆ ವಾರಸುದಾರರಿಲ್ಲದ ಬ್ಯಾಂಕ್ ಠೇವಣಿ ಹಸ್ತಾಂತರ : ವಿಶೇಷ ಶಿಬಿರ
ಉಡುಪಿ, ನ.12: ಜಿಲ್ಲೆಯ ಬ್ಯಾಂಕ್ ಗಳಲ್ಲಿ ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲಕರು ಅಥವಾ ಕಾನೂನು ಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರ ನ.14ರಂದು ಅಪರಾಹ್ನ 2:00ರಿಂದ ಸಂಜೆ 5:00 ಗಂಟೆಯವರೆಗೆ ಮಣಿಪಾಲ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
ಈ ಶಿಬಿರವು ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಅನುಸಾರ ಎಲ್ಲಾ ಬ್ಯಾಂಕಿಂಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬಂಧಿಸಿದ ಕಚೇರಿ ಶಾಖೆಗಳಲ್ಲಿ ಡಿ.31ರವರೆಗೆ ನಡೆಯಲಿದೆ.
ಸೂಕ್ತ ವಾರಸುದಾರರ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ಸಾರ್ವಜನಿಕರು ಅಗತ್ಯ ಸಲಹೆಯನ್ನು ಮತ್ತು ಹಕ್ಕು ಪಡೆಯದ ಮೊತ್ತವನ್ನು ಮರುಪಡೆಯಲು ಶಿಬಿರವು ಸಹಕಾರಿಯಾಗಲಿದೆ ಎಂದು ಲೀಡ್ ಬ್ಯಾಂಕ್ ಪ್ರಕಟಣೆ ತಿಳಿಸಿದೆ.
Next Story





