ಉಡುಪಿ | ಡಿ.17ರಂದು ಉದ್ಯಮಶೀಲರಿಗೆ ಮಾಹಿತಿ ಕಾರ್ಯಾಗಾರ

ಉಡುಪಿ, ಡಿ.6: ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ (ಎಂಎಸ್ಎಂಇ) ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಹಾಗೂ ಅವುಗಳ ಕಾರ್ಯಚಟುವಟಿಕೆಗಳನ್ನು ವೇಗಗೊಳಿಸಲು ಭಾರತ ಸರ್ಕಾರದ ರ್ಯಾಂಪ್ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ ಡಿ.10ರಂದು ಉಡುಪಿಯ ಹೋಟೆಲ್ ಚಿತ್ತಾರ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ಮಾಹಿತಿ ಕಾರ್ಯಗಾರವನ್ನು ಕಾರಣಾಂತರಗಳಿಂದ ಮುಂದೂಡಿ ಡಿ.17ರಂದು ಬೆಳಗ್ಗೆ 10 ಗಂಟೆಗೆ ನಗರದ ಕಡಿಯಾಳಿ ಜಂಕ್ಷನ್ ಸಮೀಪದ ದಿ ಓಷಿಯನ್ ಪರ್ಲ್ ನಲ್ಲಿ ಮರು ನಿಗದಿಪಡಿಸಲಾಗಿದೆ
ಕಾರ್ಯಕ್ರಮದಲ್ಲಿ ಪ್ರತಿಷ್ಠಿತ ಕಂಪೆನಿಗಳಿಂದ ಆಗಮಿಸುವ ಪರಿಣಿತ ಬೋಧಕರು ಎಂಎಸ್ಎಂಇ ಉದ್ಯಮಶೀಲರಿಗೆ ಉಪಯುಕ್ತ ಮಾಹಿತಿ ನೀಡಲಿದ್ದು, ನೋಂದಾಯಿತ ಎಂ.ಎಸ್.ಎಂ.ಇ ಉದ್ಯಮಶೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಉಡುಪಿ ದೂರವಾಣಿ ಸಂಖ್ಯೆ: 0820-2575650ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







