Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಸಂಪೂರ್ಣ ಸಾಕ್ಷರ ಜಿಲ್ಲೆ: ರಾಜ್ಯ...

ಉಡುಪಿ ಸಂಪೂರ್ಣ ಸಾಕ್ಷರ ಜಿಲ್ಲೆ: ರಾಜ್ಯ ಸರಕಾರದಿಂದ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ13 Oct 2026 7:33 PM IST
share
ಉಡುಪಿ ಸಂಪೂರ್ಣ ಸಾಕ್ಷರ ಜಿಲ್ಲೆ: ರಾಜ್ಯ ಸರಕಾರದಿಂದ ಘೋಷಣೆ

ಉಡುಪಿ, ಅ.13: ಉಡುಪಿ ಜಿಲ್ಲೆಯು ಶೇ.95ಕ್ಕಿಂತ ಹೆಚ್ಚಿನ ಸಾಕ್ಷರರನ್ನು ಹೊಂದಿರುವುದರಿಂದ ಉಡುಪಿ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರ ಜಿಲ್ಲೆ ಎಂಬುದಾಗಿ ರಾಜ್ಯ ಸರಕಾರ ಘೋಷಿಸಿದೆ.

ಕೇಂದ್ರ ಸರಕಾರದ ಮಾರ್ಗಸೂಚಿಯ ಅನ್ವಯ ಉಡುಪಿ ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್‌ಗಳು, 7 ತಾಲೂಕು ಪಂಚಾಯತ್‌ಗಳು ಮತ್ತು 8 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾಕ್ಷರತೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಕೇಂದ್ರ ಸರಕಾರದ ಮಾರ್ಗ ಸೂಚಿಯನ್ವಯ ಮಾನದಂಡಗಳನ್ನು ಅನುಸರಿಸಿ ಸಂಪೂರ್ಣ ಸಾಕ್ಷರತೆಯ ದೃಢೀಕರಣಗಳನ್ನು ಹೊಂದಿದೆ.

ಉಡುಪಿ ಜಿಲ್ಲೆಯು ಶೇ.95ಕ್ಕಿಂತ ಹೆಚ್ಚು ಸಾಕ್ಷರರನ್ನು ಹೊಂದಿರುವ ಜಿಲ್ಲೆಯಾಗುವುದರಿಂದ ಕೆಲವೊಂದು ಷರತ್ತು ಹಾಗೂ ನಿಬಂಧನೆಗಳಂತೆ ಉಡುಪಿ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರ ಜಿಲ್ಲೆಯೆಂದು ಘೋಷಿಸಲು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಅನುಮತಿ ನೀಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಹಾಗೂ ಪದನಿಮಿತ್ತ ಸರಕಾರದ ಅಧೀನ ಕಾರ್ಯದರ್ಶಿ(ಯೋಜನೆ) ಶುಭಮಂಗಳ ಆರ್.ವಿ. ಆದೇಶಿಸಿದ್ದಾರೆ.

ಜಿಪಂ ಸಿಇಓ ಪ್ರಸ್ತಾಪ: 2021-2022ರ ಸಾಲಿನಲ್ಲಿ ನವಭಾರತ ಸಾಕ್ಷರತಾ ಕಾರ್ಯಕ್ರಮದಡಿ ಯಲ್ಲಿ 5885 ಕಲಿಕಾರ್ಥಿಗಳನ್ನು ಹುಡುಕಿ ಅಂಗನವಾಡಿ ಕಾರ್ಯಕರ್ತರು, ಶಿಕ್ಷಕರ ಮೂಲಕ ತರಬೇತಿ ನೀಡಲಾಗಿತ್ತು. ಕನಿಷ್ಠ 200 ಗಂಟೆಗಳ ತರಬೇತಿಯಲ್ಲಿ ಬಾಳಿಗೆ ಬೆಳಕು, ಸವಿ ಬರಹ, ಓದು, ಬರೆಯುವುದು, ಸರಳ ಲೆಕ್ಕಾಚಾರವನ್ನು ಕಲಿಸಲಾಗಿತ್ತು. ಆ ಬಳಿಕ ಪರೀಕ್ಷೆಯನ್ನು ಮಾಡಲಾಗಿತ್ತು.

ಶೇ.95ಕ್ಕೂ ಅಧಿಕ ಸಾಕ್ಷರತೆಯನ್ನು ಹೊಂದಿರುವ ಕಾರಣಕ್ಕೆ ಉಡುಪಿಯನ್ನು 2026-2027ನೇ ಸಾಲಿನಲ್ಲಿ ಸಂಪೂರ್ಣ ಸಾಕ್ಷರತಾ ಜಿಲ್ಲೆಯೆಂದು ಘೋಷಿಸುವ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಪ್ರತೀಕ್ ಬಾಯಲ್ ಅವರು ಎಲ್ಲರಿಂದಲೂ ದೃಢೀಕರಣ ಪಡೆದು ಪ್ರಸ್ತಾವನೆಯನ್ನು ಕಳುಹಿಸಿದ್ದರು. ಇದೀಗ ಅಧೀಕೃತವಾಗಿ ಘೋಷಿಸುವ ಬಗ್ಗೆ ರಾಜ್ಯ ಸರಕಾರದಿಂದ ಆದೇಶ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಷರತ್ತು -ನಿಬಂಧನೆಗಳು: ಈ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಷರತ್ತು ಮತ್ತು ನಿಬಂಧನೆಗಳನ್ನು ಪಾಲಿಸುವಂತೆ ಪದನಿಮಿತ್ತ ಸರಕಾರದ ಅಧೀನ ಕಾರ್ಯದರ್ಶಿ(ಯೋಜನೆ) ಶುಭಮಂಗಳ ಆರ್.ವಿ. ಸೂಚಿಸಿದ್ದಾರೆ.

ಉಡುಪಿ ಜಿಲ್ಲೆಯು ಸಂಪೂರ್ಣ ಸಾಕ್ಷರ ಜಿಲ್ಲೆ ಎಂದು ಘೋಷಿಸುವಾಗ ಲಭ್ಯವಿರುವ 2011ರ ಸಾಕ್ಷರತಾ ಅಂಕಿ-ಅಂಶಗಳು ನಂತರದ ಸಾಕ್ಷರತಾ ಕಾರ್ಯಕ್ರಮಗಳ ಪ್ರಗತಿಯ ದತ್ತಾಂಶಗಳನ್ನು ಮರುಪರಿಶೀಲಿಸಿ ಶೇ.95ಕ್ಕಿಂತ ಹೆಚ್ಚು ಸಾಕ್ಷರತೆಯ ಪ್ರಮಾಣವನ್ನು ಮತ್ತೊಮ್ಮೆ ಖಚಿತಪಡಿಸಿಕೊಳ್ಳಬೇಕು.

ಖಚಿತಪಡಿಸಿಕೊಂಡ ನಂತರ ಸಂಪೂರ್ಣ ಸಾಕ್ಷರತೆಯ ಜಿಲ್ಲೆಯನ್ನಾಗಿ ಘೋಷಿಸಲು ಪ್ರಮುಖವಾದ ದಿನಗಳನ್ನು (ಸ್ವಾತಂತ್ರ್ಯ ದಿನಾಚರಣೆಯಂತಹ ರಾಷ್ಟ್ರೀಯ ದಿನಗಳು, ಕನ್ನಡ ರಾಜ್ಯೋತ್ಸವ) ಜಿಲ್ಲೆಯ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ನಿಗದಿಪಡಿಸಬೇಕು. ನಿಗದಿಯಾದ ದಿನದಂದು ಜಿಲ್ಲೆಯ ಜನಪ್ರತಿನಿಧಿಗಳು, ಸಚಿವರು, ಶಾಸಕರು, ಅಧಿಕಾರಿಗಳ ಸಮ್ಮುಖದಲ್ಲಿ ಪ್ರಮುಖ ಕಾರ್ಯಕ್ರಮದಲ್ಲಿ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯನ್ನಾಗಿ ಘೋಷಿಸಲು ಸಾಕಷ್ಟು ಪ್ರಚಾರ ಮಾಡಬೇಕು.

ಇತರೆ ಜಿಲ್ಲೆಗಳಿಗೆ ಪ್ರೇರಣೆಯಾಗುವಂತೆ ಈ ಪ್ರಕ್ರಿಯೆಯ ದಾಖಲೀಕರಣ ವನ್ನು ಮಾಡಿಕೊಂಡು ಜಾಲತಾಣ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಬೇಕು. ಸಂಪೂರ್ಣ ಸಾಕ್ಷರತೆ ಜಿಲ್ಲೆಯನ್ನಾಗಿ ಘೋಷಿಸಿದ ನಂತರವೂ ಉಳಿಕೆಯಾದ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ, ನವ ಸಾಕ್ಷರರಿಗೆ ಅಭ್ಯಾಸ ಮಾಡಿಸುವ ಕ್ರಮಗಳು, ವಲಸೆ ಬರುವ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿಸುವ ಕ್ರಮಗಳನ್ನು ಜಾರಿಯಲ್ಲಿಸಬೇಕೆಂದು ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X