Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಮಲ್ಲಿಗೆ, ಮಟ್ಟುಗುಳ್ಳ ರಫ್ತು...

ಉಡುಪಿ ಮಲ್ಲಿಗೆ, ಮಟ್ಟುಗುಳ್ಳ ರಫ್ತು ಅವಕಾಶ; ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ27 Jan 2026 8:54 PM IST
share
ಉಡುಪಿ ಮಲ್ಲಿಗೆ, ಮಟ್ಟುಗುಳ್ಳ ರಫ್ತು ಅವಕಾಶ; ಕಾರ್ಯಾಗಾರ

ಉಡುಪಿ, ಜ.27: ಉಡುಪಿ ಜಿಲ್ಲೆಯದೇ ಆದ ಎರಡು ವಿಶಿಷ್ಟ ಬೆಳೆಗಳಾದ ಉಡುಪಿ (ಶಂಕರಪುರ) ಮಲ್ಲಿಗೆ ಹಾಗೂ ಮಟ್ಟುಗುಳ್ಳ (ಬದನೆ)ವನ್ನು ರಫ್ತು ಮಾಡಲು ಇರುವ ಅವಕಾಶಗಳ ಕುರಿತಂತೆ ಕಾರ್ಯಾಗಾರವೊಂದು ಉಡುಪಿಯ ದೊಡ್ಡಣಗುಡ್ಡೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ನಡೆದಿ ರುವ ಫಲಪುಷ್ಪ ಪ್ರದರ್ಶನ-2026ರಲ್ಲಿ ಇಂದು ಆಯೋಜಿಸಲಾಗಿತ್ತು.

ಉಡುಪಿ ಜಿಲ್ಲೆಯಲ್ಲಿ ಉಡುಪಿ ಮಲ್ಲಿಗೆ ಹಾಗೂ ಮಟ್ಟುಗುಳ್ಳಗಳು ಭೌಗೋಳಿಕ ಗುರುತಿಸುವಿಕೆ (ಜಿಐ) ಮಾನ್ಯತೆ ಯನ್ನು ಪಡೆದಿವೆ. ಇವುಗಳನ್ನು ಹಾಳಾಗದಂತೆ ಹೊರರಾಜ್ಯ, ಹೋರದೇಶಗಳಿಗೆ ಕಳುಹಿಸಲು ಇರುವ ಅವಕಾಶ ಗಳ ಕುರಿತು ಅಪೇಡಾ ಸಂಸ್ಥೆಯ ಸಹಯೋಗದಲ್ಲಿ ಈ ಕಾರ್ಯಾ ಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್ ಅವರು, ಜಿಲ್ಲೆಯ ಉಡುಪಿ ಮಲ್ಲಿಗೆ ಮತ್ತು ಮಟ್ಟು ಗುಳ್ಳ ಬದನೆ ಬೆಳೆಗಳು ಜಿ.ಐ. ಮಾನ್ಯತೆ ಹೊಂದಿದ್ದು, ಈ ಬೆಳೆಗಳಡಿ ರೈತ ಉತ್ಪಾದಕರ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಈ ಸಂಸ್ಥೆಗಳ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಿ ಬೆಳೆಗಾರರು ಬೆಳೆದ ಉತ್ಪನ್ನ ಗಳನ್ನು ರಫ್ತು ಮಾಡುವ ಬಗ್ಗೆ ಆಯೋಜಿಸಿರುವ ಕಾರ್ಯಾಗಾರದ ಪ್ರಯೋಜನೆ ಪಡೆಯುವಂತೆ ಕೋರಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಂಗಳೂರಿನ ಅಪೇಡಾ ಸಂಸ್ಥೆಯ ವ್ಯವಸ್ಥಾಪಕರಾದ ಮಧುಮತಿ ಹಾಗೂ ಕಾರಂತ, ಉಡುಪಿ ಮಲ್ಲಿಗೆ ಹಾಗೂ ಮಟ್ಟುಗುಳ್ಳ ಬದನೆ ಬೆಳೆಗಳನ್ನು ರಫ್ತು ಮಾಡಲು ಇರುವ ಅವಕಾಶಗಳು ಹಾಗೂ ರಫ್ತು ಮಾಡಲು ಅಪೇಡಾ ಸಂಸ್ಥೆಯಿಂದ ಸಿಗುವ ವಿವಿಧ ಸವಲತ್ತುಗಳ ಕುರಿತಂತೆ ಸಮಗ್ರ ಮಾಹಿತಿ ನೀಡಿ ಈ ಬಗ್ಗೆ ಬೆಳೆ ಬೆಳೆಯುವ ರೈತರು ಗಮನ ಹರಿಸುವಂತೆ ತಿಳಿಸಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸಕ್ತ ಜಿಲ್ಲೆ ಯಿಂದ ರಫ್ತಾಗುವ ಉತ್ಪನ್ನಗಳಲ್ಲಿ ಜಲೋತ್ಪನ್ನಗಳೇ ಪ್ರಮುಖವಾಗಿದ್ದು, ರಪ್ತು ಗುಣಮಟ್ಟದ ಮಟ್ಟುಗುಳ್ಳ ಮತ್ತು ಉಡುಪಿ ಮಲ್ಲಿಗೆ ಬೆಳೆಗಳನ್ನು ಉತ್ಪಾದನೆ ಮಾಡಿ ಅವಕಾಶದ ಸದುಪಯೋಗ ಪಡೆಯುವಂತೆ ಕೋರಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಉಪಕುಲಪತಿ ಎಂ.ಕೆ.ನಾಯಕ್, ಮಟ್ಟು ಗುಳ್ಳ ಬೆಳೆಗಾರರ ಸಂಘದ ಅಧ್ಯಕ್ಷ ಸುನಿಲ್ ಬಂಗೇರಾ ಅಲ್ಲದೇ ವಿವಿಧ ಬೆಳೆಗಾರರು ಉಪಸ್ಥಿತರಿದ್ದರು. ಹೇಮಂತ ಕುಮಾರ್ ಎಲ್ ಕಾರ್ಯಕ್ರಮ ನಿರೂಪಿಸಿ, ಗುರುಪ್ರಸಾದ್ ವಂದಿಸಿದರು.

Tags

Udupi jasminemattugullaexportopportunities
share
ವಾರ್ತಾಭಾರತಿ
ವಾರ್ತಾಭಾರತಿ
Next Story
X