Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನಿಷೇಧಾಜ್ಞೆ ಉಲ್ಲಂಘಿಸಿ ಉಡುಪಿ ಕಂಬಳಕ್ಕೆ...

ನಿಷೇಧಾಜ್ಞೆ ಉಲ್ಲಂಘಿಸಿ ಉಡುಪಿ ಕಂಬಳಕ್ಕೆ ಶಂಕುಸ್ಥಾಪನೆ: ಸಂಸದರು, 8 ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ28 Feb 2026 8:22 PM IST
share
ನಿಷೇಧಾಜ್ಞೆ ಉಲ್ಲಂಘಿಸಿ ಉಡುಪಿ ಕಂಬಳಕ್ಕೆ ಶಂಕುಸ್ಥಾಪನೆ: ಸಂಸದರು, 8 ಶಾಸಕರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಮಣಿಪಾಲ, ಫೆ.28: ಉಡುಪಿ ಜಿಲ್ಲಾಧಿಕಾರಿ ಹೊರಡಿಸಿದ ನಿಷೇಧಾಜ್ಞೆ ಆದೇಶವನ್ನು ಉಲ್ಲಂಘಿಸಿ 80 ಬಡಗುಬೆಟ್ಟು ಗ್ರಾಮದ ಕಬ್ಯಾಡಿ, ತಟ್ಟೂರು ಎಂಬಲ್ಲಿ ಅಕ್ರಮಕೂಟ ಸೇರಿಕೊಂಡು ಉಡುಪಿ ಕಂಬಳ ಇದರ ಶಂಕುಸ್ಥಾಪನೆ ಮತ್ತು ಪೊಸ್ಟರ್ ಬಿಡುಗಡೆ ಕಾರ್ಯಕ್ರಮ ಮಾಡಿರುವ ಆರೋಪದಲ್ಲಿ ಸಂಸದರು, ಎಂಟು ಶಾಸಕರು ಸೇರಿದಂತೆ ಹಲವು ಮಂದಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ, ವಿಧಾನ ಪರಿಷತ್ ಸದಸ್ಯ ಧನಂಜಯ್ ಸರ್ಜಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಬಿಜೆಪಿ ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ ಕಟಪಾಡಿ, ನಂದಳಿಕೆ ಶ್ರೀಕಾಂತ್ ಭಟ್, ಶುಭಕರ ಶೆಟ್ಟಿ, ಸಂದೀಪ್ ಶೆಟ್ಟಿ, ಜಿಯಾನಂದ ಹೆಗ್ಡೆ ಬೈರಂಪಳ್ಳಿ, ವೀಣಾ ಶೆಟ್ಟಿ, ಸಾಯಿಶ ಸುಧಾಕರ ಶೆಟ್ಟಿ ಪೆರ್ಡೂರು, ಬೆಳಪು ದೇವಿಪ್ರಸಾದ್ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಶ್ರೀನಿಧಿ ಹೆಗ್ಡೆ ಉಡುಪಿ, ಹರಿಕೃಷ್ಣ ಬಂಟ್ವಾಳ, ರವೀಂದ್ರ ಮಡಿವಾಳ್, ಅಂತೋನಿ ಡಿಸೋಜಾ ನಕ್ರೆ, ವಿಜಯ್ ಕುಮಾರ್, ಶ್ಯಾಮಲಾ ಕುಂದರ್, ಲೋಕೇಶ್ ಶೆಟ್ಟಿ ಕಾರ್ಕಳ, ಮೋಹನ್ ಭಟ್ ಹಿರಿಯಡ್ಕ, ದಿಲ್ಲೇಶ್ ಶೆಟ್ಟಿ ಕುಕ್ಕೆಹಳ್ಳಿ, ಶಾಂತಾರಾಮ ಶೆಟ್ಟಿ, ರವೀಂದ್ರ ನಾಯ್ಕ, ಗೋಪಾಲಕೃಷ್ಣ ಮಟ್ಟು, ಸುಭಾಷ್ ಬಲ್ಲಾಳ್ ಕಟಪಾಡಿ, ಮೋಹನ್ ಶೆಟ್ಟಿ ಕಬ್ಯಾಡಿ, ಕೃಷ್ಣ ಕುಲಾಲ್ ವರ್ವಾಡಿ ಹಾಗೂ ಇತರರ ವಿರುದ್ಧ ಉಡುಪಿ ತಾಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಪಿ.ಆರ್ ಗುರುರಾಜ್ ನೀಡಿದ ದೂರಿನಂತೆ ಕಲಂ:189(2), 191(2), 329(3) ಜೊತೆಗೆ 190 ಬಿಎನ್‌ಎಸ್ 37, 109 ಕೆಪಿ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿದೆ.

ತಟ್ಟೂರಿನಲ್ಲಿ 6.30 ಎಕರೆ ಸರಕಾರಿ ಸ್ಥಳವನ್ನು ಕಂಬಳದ ಜೊತೆಗೆ ಕಂಬಳದ ಕೋಣಗಳನ್ನು ಸಾಗಿಸುವ ವಾಹನಗಳ ನಿಲುಗಡೆ ಹಾಗೂ ಪ್ರಾಣಿಗಳ ಚಿಕಿತ್ಸೆಗಾಗಿ ಚಿಕಿತ್ಸಾ ಕೇಂದ್ರ ನಿರ್ಮಾಣದ ಉದ್ದೇಶಕ್ಕಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಸರಿನಲ್ಲಿ ಉಡುಪಿ ಜಿಲ್ಲಾಧಿಕಾರಿ ಅವರ ನಡಾವಳಿ ಆದೇಶದಂತೆ ಕಾಯ್ದಿರಿಸಲಾಗಿತ್ತು.

ಕರ್ನಾಟಕ ರಾಜ್ಯ ಕಂಬಳ ಅಸೋಷಿಯೇಶನ್ ವತಿಯಿಂದ ಮಾನ್ಯತೆ ಇರುವ ಉಡುಪಿ ಜಿಲ್ಲಾ ಮಟ್ಟದ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯವರು ಕಾನೂನಿಗೆ ವಿರುದ್ಧವಾಗಿ ಅಕ್ರಮ ಪ್ರವೇಶ ಮಾಡಿ ಯುವಜನ ಮತ್ತು ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಸರಿನಲ್ಲಿ ಕಾಯ್ದಿರಿಸಿದ ಈ ಜಮೀನನ್ನು ಸಮತಟ್ಟು ಮಾಡಿದ್ದರು. ಅಲ್ಲದೆ ಫೆ.28ರಂದು ಉಡುಪಿ ಕೋಟಿ ಚೆನ್ನಯ್ಯ ಕಂಬಳ ಸಮಿತಿಯ ಶಂಕುಸ್ಥಾಪನೆ ಮತ್ತು ಪೊಸ್ಟರ್ ಅನಾವರಣ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ಸ್ಥಳೀಯರು ಮತ್ತು ಕಂಬಳ ಸಮಿತಿಯ ಪದಾಧಿಕಾರಿಗಳ ನಡುವೆ ಹಾಗೂ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕದಡುವ ಸಾಧ್ಯತೆ ಇರುವುದರಿಂದ ಉಡುಪಿ ಜಿಲ್ಲಾಧಿಕಾರಿ ಇಂದು ಬೆಳಗ್ಗೆ ಈ ಸ್ಥಳದಲ್ಲಿ ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸಿದ್ದರು.

ಆದರೂ ಆರೋಪಿಗಳು ಅಕ್ರಮಕೂಟ ಸೇರಿಕೊಂಡು ಉಡುಪಿ ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘಿಸಿ ಧ್ವನಿವರ್ಧಕ ಪರವಾನಿಗೆ ಇಲ್ಲದೇ ನಿರ್ಬಂಧಿತ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿ ಸ್ಥಳವನ್ನು ಅಗೆದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕೋಟಿ ಚೆನ್ನಯ್ಯ ಕಂಬಳ ಸಮತಿಯ ಶಂಕುಸ್ಥಾಪನೆ ಮತ್ತು ಪೊಸ್ಟರ್ ಅನಾವರಣ ಕಾರ್ಯಕ್ರಮವನ್ನು ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.












Tags

UdupiKambalafoundationstonelaidviolationprohibitoryorder
share
ವಾರ್ತಾಭಾರತಿ
ವಾರ್ತಾಭಾರತಿ
Next Story
X