Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಕೇರಳ ಸಮಾಜದಿಂದ ಆ.31ರಂದು ‘ಓಣಂ...

ಉಡುಪಿ | ಕೇರಳ ಸಮಾಜದಿಂದ ಆ.31ರಂದು ‘ಓಣಂ ಹಬ್ಬ’ ಆಚರಣೆ

ವಾರ್ತಾಭಾರತಿವಾರ್ತಾಭಾರತಿ30 Aug 2025 3:06 PM IST
share
ಉಡುಪಿ | ಕೇರಳ ಸಮಾಜದಿಂದ ಆ.31ರಂದು ‘ಓಣಂ ಹಬ್ಬ’ ಆಚರಣೆ

ಉಡುಪಿ, ಆ.30: ಉಡುಪಿಯ ಕೇರಳ ಕಲ್ಬರಲ್ ಆ್ಯಂಡ್ ಸೋಶಿಯಲ್ ಸೆಂಟರ್‌ನ 31ನೇ ವಾರ್ಷಿಕೋತ್ಸವ ಹಾಗೂ ಓಣಂ ಸಂಭ್ರಮ-2025 ಕಾರ್ಯಕ್ರಮವನ್ನು ಇದೇ ಆ.31ರ ರವಿವಾರ ಅಂಬಲಪಾಡಿಯ ಶ್ಯಾಮಿಲಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸುಗುಣ ಕುಮಾರ್ ತಿಳಿಸಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸುಗುಣ ಕುಮಾರ್, ಅಂದು ಬೆಳಗ್ಗೆ 8 ಗಂಟೆಯಿಂದ 9:00 ಗಂಟೆಯವರೆಗೆ ಹೂವಿನ ರಂಗೋಲಿ ಸ್ಪರ್ಧೆ ಪೂಕಳಂ ನಡೆಯಲಿದೆ. 9ರಿಂದ 11ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದು, 11ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ಹಾಗೂ ಪ್ರಶಸ್ತಿ ವಿತರಣೆ ನಡೆಯಲಿದೆ ಎಂದರು.

ಅಪರಾಹ್ನ 12:30ರಿಂದ 2:30ರವರೆಗೆ ಕೆಸಿಎಸ್‌ಸಿ ಕಲ್ಬರಲ್ ಬ್ಲಾಸ್ಟ್ ಹಾಗೂ 2:30ರಿಂದ 4:30ರವರೆಗೆ ವಿಶೇಷ ಆಕರ್ಷಣೆಯಾಗಿ ತ್ರಿಶೂರ್‌ನ ಜನನಯನ ತಂಡದಿಂದ ‘ಕೇರಳೀಯ ವೈಭವಂ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 4:30ಕ್ಕೆ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಲಿದೆ ಎಂದವರು ವಿವರಿಸಿದರು.

ಬೆಳಿಗ್ಗೆ 11:00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಮಲಯಾಳಂ ಚಲನಚಿತ್ರ ನಟ ಹಾಗೂ ಕೊಲ್ಲಂ ವಿಧಾನಸಭಾ ಕ್ಷೇತ್ರದ ಶಾಸಕ ಮುಕೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಶಾಸಕ ವಿನಯಕುಮಾರ ಸೊರಕೆ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಎಸ್ಪಿ ಹರಿರಾಂ ಶಂಕರ್, ಮಾಹೆ ಪ್ರಸನ್ನ ಪಬ್ಲಿಕ್ ಹೆಲ್ತ್ ಸ್ಕೂಲ್‌ನ ನಿರ್ದೇಶಕ ಡಾ.ಚೆರಿಯನ್ ವರ್ಗೀಸ್ ಮೊದಲಾದವರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಾದ ಡಾ.ಎ.ಗಿರಿಜ (ಆರೋಗ್ಯ ಸೇವೆ), ಹಾಜಿ ಕೆ.ಅಬ್ದುಲ್ಲ ಕುಂಜಿ ಪರ್ಕಳ (ವ್ಯಾಪಾರ), ಈಶ್ವರ್‌ ಮಲ್ಪೆ (ಸಮಾಜ ಸೇವೆ), ವಲ್ಸಾ ಜಾರ್ಜ್ (ಕೃಷಿ) ಹಾಗೂ ಕ್ಯಾಪ್ಟನ್ ವೇಣುಗೋಪಾಲನ್ ನಾಯರ್ (ರಕ್ಷಣಾ ಸೇವೆ) ಅವರಿಗೆ ಕೆಸಿಎಸ್‌ಸಿ ಪಂಚರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ವಿವರಿಸಿದರು.

ಪ್ರತಿವರ್ಷದಂತೆ ಈ ಬಾರಿಯ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳನ್ನು ಸನ್ಮಾನಿಸಲಾಗುವುದು ಎಂದು ಸುಗುಣಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಓಣಂ ಸಂಭ್ರಮ ಸಮಿತಿ ಅಧ್ಯಕ್ಷ ಶಿನೋದ್ ಟಿ.ಆರ್., ಕೆಸಿಎಸ್‌ಸಿ ಕಾರ್ಯದರ್ಶಿ ಬಿನೇಶ್ ವಿ.ಸಿ., ಉಪಾಧ್ಯಕ್ಷ ಸಂತೋಷ್ ಕುಮಾರ್, ಗಣೇಶ್ ವಕೇರಿ, ತೇಜಸ್ವಿನಿ ಮಹಿಳಾ ವಿಭಾಗದ ಅಧ್ಯಕ್ಷೆ ಶೈನಿ ಸತ್ಯಭಾಮ, ಸಮಿತಿ ಸದಸ್ಯ ಮನೋಜ್ ಕಡಬ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X