Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ - ಲಡಾಕ್ 3300 ಕಿಮೀ ದೂರ ಸೈಕಲ್...

ಉಡುಪಿ - ಲಡಾಕ್ 3300 ಕಿಮೀ ದೂರ ಸೈಕಲ್ ಯಾತ್ರೆ !

ವಾರ್ತಾಭಾರತಿವಾರ್ತಾಭಾರತಿ27 Sept 2025 7:49 PM IST
share
ಉಡುಪಿ - ಲಡಾಕ್ 3300 ಕಿಮೀ ದೂರ ಸೈಕಲ್ ಯಾತ್ರೆ !
ಕುಂದಾಪುರದ ಯುವಕನ ಅಪ್ರತಿಮ ಸಾಧನೆ: 11 ತಿಂಗಳ ಸೈಕಲ್ ಪಯಣ

ಉಡುಪಿ, ಸೆ.27: ಪರಿಸರ ಉಳಿಸಿ ಎಂಬ ಸಂದೇಶದೊಂದಿಗೆ ಉಡುಪಿಯಿಂದ ಲಡಾಕ್ ವರೆಗೆ 3300 ಕಿಮೀ ಯಾತ್ರೆಯನ್ನು ಸತತ 11 ತಿಂಗಳು ಸೈಕಲ್‌ನಲ್ಲಿ ಪ್ರಯಾಣಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ ಕುಂದಾಪುರ ತಾಲೂಕು ಕಮಲಶಿಲೆ ಹಳ್ಳೀಹೊಳೆ ಸಮೀಪದ ಪಾರ್ವತಿ ಮತ್ತು ಶೇಷು ಬೋವಿ ದಂಪತಿಯ ಪುತ್ರ ದಿನೇಶ್ ಬೋವಿ ಇದೀಗ ಹುಟ್ಟೂರಿಗೆ ಮರಳಿದ್ದಾರೆ.

ಅಪ್ರತಿಮ ಸಾಧನೆ ತೋರಿ ಊರಿಗೆ ಮರಳಿದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ದಿನೇಶ್ ಅವರಿಗೆ ಶನಿವಾರ ಕಾಲೇಜಿನ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು. ಈ ವೇಳೆ ಮಲ್ಪೆ ಪೊಲೀಸ್ ಠಾಣೆಯ ಎಸ್ಸೈ ಅನಿಲ್ ಕುಮಾರ್, ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಜಯರಾಮ ಶೆಟ್ಟಿಗಾರ್, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಆಲನ್ ಲೂವಿಸ್, ಶೇಖರ ಗುಜ್ಜರಬೆಟ್ಟು, ಶಾಲೆಟ್ ಮಥಾಯಸ್, ಶಿಕ್ಷಕ ರಕ್ಷಕ ಸಂಘದ ಗಣೇಶ್ ಮೇಸ್ತ ಹಾಗೂ ಇತರರು ಉಪಸ್ಥಿತರಿದ್ದರು.

ಇವರು 2024ರ ಅ.15ರಂದು ಉಡುಪಿಯಿಂದ ಸೈಕಲ್ ಮೂಲಕ ಲಡಾಖ್ ಗೆ ಪ್ರಯಾಣ ಬೆಳೆಸಿದ್ದು 2025ರ ಸೆ.15ರಂದು ಲಡಾಖ್ ತಲುಪುವುದರ ಜೊತೆ ಸತತ 330 ದಿನಗಳ ಸೈಕಲ್ ಯಾತ್ರೆಯನ್ನು ಸಂಪೂರ್ಣಗೊಳಿಸಿ ದ್ದಾರೆ. ಸೈಕಲ್ ಮೂಲಕ ಅವರು 8 ರಾಜ್ಯಗಳಿಗೆ ಭೇಟಿ ನೀಡಿದ್ದಾರೆ.

ಕರ್ನಾಟಕದಿಂದ ಆರಂಭಗೊಂಡು, ಗೋವಾ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಪಂಜಾಬ್, ಹರಿಯಾಣ ಮೂಲಕವಾಗಿ ಜಮು ಕಾಶ್ಮೀರ ತಲುಪಿದ್ದಾರೆ. 11 ತಿಂಗಳಿಗಿಂತ ಬೇಗ ತಲುಪ ಬಹುದಾಗಿದ್ದರೂ, ಕಾಶ್ಮೀರದ ಥಾಂಗ್ ಗ್ರಾಮದ ರಸ್ತೆ ವರ್ಷದಲ್ಲಿ 6 ತಿಂಗಳು ಮಾತ್ರ ತೆರೆದಿದ್ದು, ಅದಕ್ಕಾಗಿ 1 ತಿಂಗಳು ಮುಂಬೈಯಲ್ಲಿ ವಿಶ್ರಾಂತಿ ಮಾಡಿದ್ದರೆ, 3 ತಿಂಗಳು ಗುಜರಾತಿನಲ್ಲಿ ತಂಗಿದ್ದರು. ಲಡಾಖ್‌ನ ಛಾಂಗ್ ಭಾರತದ ಗಡಿಗ್ರಾಮ ವಾಗಿದ್ದು ಅದರ ಆಚೆ ಪಾಕಿಸ್ಥಾನ ಭೂಪ್ರದೇಶ ಕಾಣಿಸುತ್ತದೆ.

11 ತಿಂಗಳ ಸೈಕಲ್ ಪ್ರಯಾಣದಲ್ಲಿ ಆಹಾರಕ್ಕೆ ಹೆಚ್ಚಿನ ಖರ್ಚಾಗಿದ್ದು ಪ್ರಯಾಣದ ಸಂಪೂರ್ಣ ವೆಚ್ಚ ಸುಮಾರು 1.5 ಲಕ್ಷ ರೂ. ಆಗಿದ್ದು, ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವಾ ದಾನಿಗಳ ಹಾಗೂ ಹಳೆ ವಿದ್ಯಾರ್ಥಿಗಳ ಸಹಕಾರದಿಂದ ಭರಿಸಿದ್ದಾರೆ. ಸ್ವತಃ ಸೈಕಲಿಸ್ಟ್ ಆಗಿರುವ ವಿನ್ಸೆಂಟ್ ಆಳ್ವಾ ಸೈಕಲ್ ಸಹ ಕೊಡುಗೆಯಾಗಿ ನೀಡಿ, ತನ್ನ ವಿದ್ಯಾರ್ಥಿಗೆ ಪ್ರೋತ್ಸಾಹಿಸಿದ್ದಾರೆ.

‘ಜೊತೆಯಾದ ನಾಯಿ ಚಾರ್ಲಿ’

ದಿನೇಶ್ ಸೈಕಲ್ ಪ್ರಯಾಣದ ವೇಳೆ ಕರ್ನಾಟಕ - ಗೋವಾ ಗಡಿಭಾಗದಲ್ಲಿ ತಂಗಿದ್ದಾಗ ಬೀದಿ ಬದಿಯಲ್ಲಿದ್ದ ಹೆಣ್ಣು ನಾಯಿ ಮರಿಯೊಂದು ಇವರಿಗೆ ಸಿಕ್ಕಿದ್ದು, ಅದಕ್ಕೆ ಆಹಾರ ನೀಡಿದ್ದು ಬಳಿಕ ಅದನ್ನು ಜೊತೆಯಲ್ಲಿ ಕರೆದುಕೊಂಡು ಲಡಾಕ್‌ಗೆ ಸೈಕಲಿನಲ್ಲಿಯೇ ಪ್ರಯಾಣ ಬೆಳೆಸಿದ್ದಾರೆ. ದಿನೇಶ್ ಜೊತೆ ನಾಯಿ ಕೂಡ 326 ದಿನಗಳ ಕಾಲ ಸಂಚಾರ ಮುಗಿಸಿದೆ. ಅಲ್ಲಿಂದ ಆ ನಾಯಿಯೊಂದಿಗೆ ಅವರು ಊರಿಗೆ ವಾಪಾಸಾಗಿದ್ದು ಮನೆಗೆ ಕೊಂಡೊಯ್ದಿದ್ದಾರೆ.

"ರಸ್ತೆಯಲ್ಲಿ ಸಿಕ್ಕವರಿಗೆ ಪರಿಸರ ಉಳಿಸಿ ಅನ್ನುವ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಈ ಯಾತ್ರೆ ಕೈಗೊಂಡಿದ್ದೆ. ಈ ಹಿಂದೆ ಉಡುಪಿ ಯಿಂದ ಧರ್ಮಸ್ಥಳ ಕಾಲ್ನಡಿಗೆ ಮಾಡಿದ್ದೆ. ಅದಾದ ಬಳಿಕ ಉಡುಪಿಯಿಂದ ಕನ್ಯಾಕುಮಾರಿಗೆ 1.500 ಕಿ.ಮೀ. ದೂರವನ್ನು (21 ದಿನಗಳ ಕಾಲ) ಸೈಕಲ್ನಲ್ಲಿ ಕ್ರಮಿಸಿದ್ದೆ. ಮನೆಯವರು, ಕಾಲೇಜಿನವರ ಸಹಕಾರದಿಂದ ಇದು ಸಾಧ್ಯವಾಯಿತು"

-ದಿನೇಶ್ ಬೋವಿ, ಸೈಕಲ್ ಸಾಧಕ

"ನಮ್ಮ ಕಾಲೇಜಿನ, ನನ್ನ ವಿದ್ಯಾರ್ಥಿ ಇಂದು ಈ ಸಾಧನೆ ಮಾಡಿರುವುದು ಅತೀವ ಖುಷಿ ತಂದಿದೆ. ಸತತ 11 ತಿಂಗಳುಗಳ ತನ್ನ ಸೈಕಲ್ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ನಮ್ಮ ಕಾಲೇಜಿನಲ್ಲಿ ಇಂತಹ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತೇವೆ. ಇಂತಹ ಸಾಧನೆ ಮಾಡುವ ಯಾವುದೇ ವಿದ್ಯಾರ್ಥಿ ಗಳಿದ್ದಲ್ಲಿ ಅವರಿಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧರಿದ್ದೇವೆ".

-ಡಾ|ವಿನ್ಸೆಂಟ್ ಆಳ್ವಾ, ಪ್ರಾಂಶುಪಾಲರು





share
ವಾರ್ತಾಭಾರತಿ
ವಾರ್ತಾಭಾರತಿ
Next Story
X