Udupi | ಎಲ್ಐಸಿಯಿಂದ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್ಗಳ ಹಸ್ತಾಂತರ

ಉಡುಪಿ : ಸಾರ್ವಜನಿಕ ಸುರಕ್ಷತೆ ಮತ್ತು ಸಾಮಾಜಿಕ ಜವಾಬ್ದಾರಿಯ ಆಶಯದೊಂದಿಗೆ ಭಾರತೀಯ ಜೀವ ವಿಮಾ ನಿಗಮದ ಉಡುಪಿ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬ್ಯಾರಿಕೇಡ್ ಗಳನ್ನು ಹಸ್ತಾಂತರಿಸಲಾಯಿತು.
ಎಲ್ಐಸಿ ಉಡುಪಿ ವಿಭಾಗದ ಹಿರಿಯ ವಿಭಾಗೀಯ ಪ್ರಬಂಧಕ ಗಣಪತಿ ಭಟ್ ಬ್ಯಾರಿಕೇಡ್ ಗಳನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ಗಣಪತಿ ಭಟ್, ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡುವುದು, ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸುವಲ್ಲಿ ಪೊಲೀಸ್ ಇಲಾಖೆಯ ಕಾರ್ಯಗಳಿಗೆ ಸಹಕಾರ ನೀಡುವ ಉದ್ದೇಶದಿಂದ ಈ ಕೊಡುಗೆಯನ್ನು ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಎಲ್ಐಸಿಯ ಮಾರುಕಟ್ಟೆ ಪ್ರಬಂಧಕ ಗುರುರಾಜ್ ರಾವ್ ಹಾಗೂ ವಿಕ್ರಯ ಪ್ರಬಂಧಕ ದುರ್ಗಾರಾಮ್ ಶೆಣೈ ಉಪಸ್ಥಿತರಿದ್ದರು.
Next Story




