Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ28 Oct 2023 8:45 PM IST
share
ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಉಡುಪಿ, ಅ.28: ಮಹರ್ಷಿ ವಾಲ್ಮೀಕಿ ಅವರ ಆದರ್ಶ, ಚಿಂತನೆಗಳ ಪಾಲನೆಯಿಂದ ವ್ಯಕ್ತಿತ್ವದಲ್ಲಿ ಸಕಾರಾತ್ಮಕ ಬದಲಾ ವಣೆ ಸಾಧ್ಯ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಭಿಪ್ರಾಯಪಟ್ಟಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಒಬ್ಬ ಬೇಟೆಗಾರನ ಕುಟುಂಬದಲ್ಲಿ ಜನಿಸಿದ್ದರೂ, ನಂತರದಲ್ಲಿ ವ್ಯಕ್ತಿತ್ವದ ಬದಲಾವಣೆಯಿಂದಾಗಿ ಹಲವಾರು ಆದರ್ಶ ಪುರುಷರಲ್ಲಿ ಇವರು ಒಬ್ಬರಾಗಿದ್ದಾರೆ ಎಂದರು. ಪರಿಶಿಷ್ಟ ಪಂಗಡದ ವರ್ಗದವರಿಗೆ ಸರಕಾರ ಹಲವಾರು ಕಾರ್ಯ ಕ್ರಮಗಳನ್ನು ಜಾರಿಗೆ ತಂದಿದ್ದು, ಅನುಷ್ಟಾನಗೊಳಿಸಲಾದ ಯೋಜನೆ ಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಬೇಡನಾಗಿದ್ದ ವಾಲ್ಮೀಕಿ ಮಹರ್ಷಿ ಯಾಗಿ ಬದಲಾವಣೆ ಯಾಗಿದ್ದು, ಇಂತಹ ವ್ಯಕ್ತಿತ್ವದ ಬದಲಾವಣೆಯನ್ನು ಅವರಲ್ಲಿ ಕಾಣಬಹುದಾ ಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಅಸಾಧಾರಣ ಕೆಲಸವನ್ನು ಇವರು ಮಾಡಿದ್ದಾರೆ ಎಂದರು.

ಒಂದು ಕ್ರೌಂಚ ಪಕ್ಷಿಗಳ ಚಿಕ್ಕ ಘಟನೆ ಬೇಡನಾಗಿದ್ದ ಇವರ ಬದುಕನ್ನೇ ಬದಲಾಯಿಸಿತು. ಆ ಮಾನವೀಯ ಸ್ಪರ್ಶವನ್ನು ಅವರ ಜೀವನದಲ್ಲಿ ಅಳವಡಿಸಿಕೊಂಡು, ಆ ಮೂಲಕ ಇಡೀ ಜಗತ್ತಿಗೆ ರಾಮಾಯಣ ಕೃತಿಯನ್ನು ಕೊಡುಗೆಯಾಗಿ ನೀಡು ತ್ತಾರೆ. ಇವರ ರಾಮಾಯಣ ಕೃತಿ ವಿವಿಧ ರೂಪಗಳಲ್ಲಿ ಸಾವಿರಾರು ಭಿನ್ನ ರಾಮಾಯಣದ ರೂಪಗಳನ್ನು ಜಾನಪದಗಳಲ್ಲಿ ನಾವು ಇಂದಿಗೂ ಕಾಣಬಹುದಾಗಿದೆ ಎಂದರು.

ಮಹರ್ಷಿ ವಾಲ್ಮೀಕಿ ಕುರಿತು ಲೇಖಕಿ ಡಾ. ರೇಖಾ ವಿ ಬನ್ನಾಡಿ ಉಪನ್ಯಾಸ ನೀಡಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರಿಗೆ ಅಕ್ಷರಜ್ಞಾನ ಇಲ್ಲದ ಸಂದರ್ಭದಲ್ಲಿಯೂಅಕ್ಷರವನ್ನು ಕಲಿತು ಮಹಾನ್ ಗ್ರಂಥವಾದ ರಾಮಾಯಣ ವನ್ನು ರಚಿಸಿ ದರು. ಅನೇಕ ಮಾನವಿಯ ಮೌಲ್ಯಗಳನ್ನು ರಾಮಾಯಣದಲ್ಲಿ ಪ್ರತಿಪಾದಿಸಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ವಿವಿಧ ಸಾಧಕರನ್ನು ಹಾಗೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾ ಯಿತು. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ದೂದ್‌ಪೀರ್ ಸ್ವಾಗತಿಸಿ, ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು. ವಿಶ್ವನಾಥ್ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X