ಉಡುಪಿ | ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಉಡುಪಿ, ನ.29: ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದು, ಮಧುಮೇಹ ಸೇರಿದಂತೆ ಕಾಯಿಲೆಯಿಂದ ಬಳಲುತ್ತಿದ್ದ ಸುಧಾಕರ (52) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬಡಾನಿಡಿಯೂರು ಗ್ರಾಮದ ಪಂಡರಿನಗರದಲ್ಲಿರುವ ತನ್ನ ಮನೆಯಯಲ್ಲಿ ಫ್ಯಾನ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





