Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಹತ್ಯಾಕಾಂಡ; ಊಹಾಪೋಹದ, ಚಾರಿತ್ರ್ಯ...

ಉಡುಪಿ ಹತ್ಯಾಕಾಂಡ; ಊಹಾಪೋಹದ, ಚಾರಿತ್ರ್ಯ ಹನನದ ವರದಿಗಾರಿಕೆ ಬೇಡ : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ

ಪ್ರಕರಣದ ವಿಚಾರಣೆಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 Nov 2023 8:01 PM IST
share
ಉಡುಪಿ ಹತ್ಯಾಕಾಂಡ; ಊಹಾಪೋಹದ, ಚಾರಿತ್ರ್ಯ ಹನನದ ವರದಿಗಾರಿಕೆ ಬೇಡ : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ

ಉಡುಪಿಯ ನೇಜಾರಿನಲ್ಲಿ ರವಿವಾರ ನಡೆದ ಭಯಾನಕ ಹತ್ಯಾಕಾಂಡದ ಆರೋಪಿಯನ್ನು ಉಡುಪಿ ಪೊಲೀಸರು ಎರಡು ದಿನಗಳೊಳಗೆ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉಡುಪಿ ಪೊಲೀಸರ ಈ ದಕ್ಷತೆ ಹಾಗು ಚುರುಕಿನ ಕಾರ್ಯಾಚರಣೆ ಅಭಿನಂದನಾರ್ಹವಾಗಿದೆ. ಭೀಕರ ಕಗ್ಗೊಲೆಗಳನ್ನು ನಡೆಸಿದ ಹಂತಕನನ್ನು ತಡ ಮಾಡದೇ ಬಂಧಿಸಿರುವುದರಿಂದ ನೇಜಾರು ಪರಿಸರ ಮಾತ್ರವಲ್ಲ ಇಡೀ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದ ಎಲ್ಲ ಪೊಲೀಸ್ ಸಿಬ್ಬಂದಿಗೆ ಇದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಹೊಣೆಗಾರರ ತುರ್ತು ಸಭೆ ಬಳಿಕ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಇದೇ ಸಂದರ್ಭದಲ್ಲಿ ಕೆಲವು ಚಾನಲ್ ಗಳು, ವೆಬ್ ಸೈಟ್ ಗಳು ಸಹಿತ ಮಾಧ್ಯಮದ ಕೆಲವು ವಿಭಾಗಗಳಲ್ಲಿ ಕಗ್ಗೊಲೆಯಾಗಿರುವ ಕುಟುಂಬದ ಸದಸ್ಯರ ಬಗ್ಗೆ ಕೀಳು ಅಭಿರುಚಿಯ, ಆಧಾರ ರಹಿತ ಊಹಾಪೋಹಗಳನ್ನೇ ಅಧಿಕೃತ ಸುದ್ದಿಯಂತೆ ಪ್ರಕಟಿಸುತ್ತಿರುವುದು ಅತ್ಯಂತ ಖಂಡನಾರ್ಹವಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ.

ಈಗಷ್ಟೇ ಹಂತಕನ ಬಂಧನವಾಗಿದೆ. ಆತನ ಪೂರ್ಣ ವಿಚಾರಣೆಗಾಗಿ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹತ್ಯಾಕಾಂಡದ ಹಿಂದಿನ ನಿಜವಾದ ಕಾರಣಗಳು ಪೊಲೀಸರ ಸಮಗ್ರ ತನಿಖೆ ಹಾಗು ವಿಚಾರಣೆ ಬಳಿಕವೇ ಗೊತ್ತಾಗಬೇಕಿದೆ. ಹೀಗಿರುವಾಗ ಕೆಲವು ಮಾಧ್ಯಮಗಳು ತೀರಾ ಬೇಜವಾಬ್ದಾರಿಯುತವಾಗಿ ವದಂತಿಗಳು, ಊಹಾಪೋಹಗಳನ್ನು ಆಧರಿಸಿ ತೀರಾ ಕೀಳು ಮಟ್ಟದ ಹಾಗು ಕೊಲೆಯಾದವರ ಚಾರಿತ್ರ್ಯ ಹನನವಾಗುವಂತಹ ವರದಿಗಳನ್ನು ಪ್ರಕಟಿಸುವುದು ಅತ್ಯಂತ ಖಂಡನೀಯ. ಕಾರಣ ಏನಿದ್ದರೂ ಇಂತಹದೊಂದು ಹತ್ಯಾಕಾಂಡಕ್ಕೆ ಸಮರ್ಥನೆ ಇಲ್ಲ ಎಂಬುದು ಅತ್ಯಂತ ಸ್ಪಷ್ಟವಾಗಿದೆ. ಆ ಬಗ್ಗೆ ಯಾರಿಗೂ ಯಾವುದೇ ಸಂಶಯವಿಲ್ಲ. ಹಾಗಾಗಿ ಈಗ ಪೊಲೀಸರ ವಿಚಾರಣೆ ಮುಗಿಯುವವರೆಗೆ ಎಲ್ಲರೂ ತಾಳ್ಮೆಯಿಂದ ಸಹಕರಿಸಬೇಕಾಗಿದೆ. ಈ ಸಂದರ್ಭದಲ್ಲಿ ವದಂತಿಗಳನ್ನು ಹರಡಬಾರದು. ಮಾಧ್ಯಮಗಳು ಇನ್ನಷ್ಟು ಸಂಯಮದಿಂದ ವರದಿಗಾರಿಕೆ ಮಾಡಬೇಕು. ಇಂತಹ ಆಘಾತಕಾರಿ ಘಟನೆಯನ್ನು ತಮ್ಮ ಟಿ ಆರ್ ಪಿ ಹೆಚ್ಚಿಸುವ ದಾಳವಾಗಿ ಯಾವುದೇ ಮಾಧ್ಯಮ ಬಳಸಬಾರದು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಹೇಳಿದೆ.

ಉಡುಪಿಯ ಇತಿಹಾಸದಲ್ಲೇ ನಡೆದಿರುವ ಈ ಅತ್ಯಂತ ಬರ್ಬರ ಹತ್ಯಾಕಾಂಡದ ಸಮಗ್ರ ತನಿಖೆ ನಡೆಯಬೇಕು. ಈ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಆದಷ್ಟು ಶೀಘ್ರವಾಗಿ ಮುಗಿಯಬೇಕು. ಆರೋಪಿ ಹಾಗು ಆತನ ಹಿಂದೆ ಯಾರೇ ಇದ್ದರೂ ಅವರೆಲ್ಲರಿಗೂ ಕಾನೂನು ಪ್ರಕಾರ ಅತ್ಯಂತ ಕಠಿಣ ಶಿಕ್ಷೆಯಾಗಬೇಕು. ಅದಕ್ಕಾಗಿ ಒಬ್ಬ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ರನ್ನು ಈ ಪ್ರಕರಣದ ವಿಚಾರಣೆಗೆ ಸಹಕರಿಸಲು ಸರಕಾರ ನೇಮಿಸಬೇಕು ಎಂದು ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X