ಉಡುಪಿ | ಎಂಜಿಎಂ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

ಉಡುಪಿ, ನ.30: ಉಡುಪಿ ಎಂಜಿಎಂ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಕಾಲೇಜಿನ ಮುದ್ದಣ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು.
ಮುಖ್ಯ ಅತಿಥಿಯಾಗಿ ಅದಮಾರು ಮಠ ಶಿಕ್ಷಣ ಒಕ್ಕೂಟದ ಉಪ ಆಡಳಿತಾಧಿಕಾರಿ ಪ್ರೊ.ಪುಂಡರೀಕಾಕ್ಷ ಕೊಡಂಚ ಮಾತನಾಡಿ, ಜಾಗತಿಕ ಆಗು-ಹೋಗುಗಳ ತಲ್ಲಣ ಮತ್ತು ವಿದ್ಯಾರ್ಥಿಗಳು ಹಾಗೂ ಪೋಷಕರು ಇದನ್ನು ಅರಿತುಕೊಳ್ಳಬೇಕಾದ ಅನಿವಾರ್ಯತೆಯನ್ನು ಸವಿಸ್ತಾರವಾಗಿ ತಿಳಿಸಿದರು.
ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ವನಿತಾ ಮಯ್ಯ, ಉಪಪ್ರಾಂಶುಪಾಲ ಡಾ.ಎಂ.ವಿಶ್ವನಾಥ್ ಪೈ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಡಾ.ನಾರಾಯಣ ಅಮೀನ್, ವಿದ್ಯಾರ್ಥಿ ಪ್ರತಿನಿಧಿಗಳಾದ ಸುಶ್ಮಿತಾ ಡಿ.ರಾವ್, ಪ್ರಣವ್ ಕಾಮತ್, ಸುಮೇಧಾ ಉಪಸ್ಥಿತರಿದ್ದರು.
ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಭೌತಶಾಸ್ತ್ರ ವಿಭಾಗದ ನೀಲಕಂಠ ದಂಡೋತಿ, ಸಮಾಜಶಾಸ್ತ್ರ ವಿಭಾಗದ ರೋಹಿತ್ ಅಮೀನ್ ಅವರನ್ನು ಅಭಿನಂದಿಸಲಾಯಿತು. ಪ್ರಾಂಶುಪಾಲೆ ಪ್ರೊ.ಮಾಲತಿ ದೇವಿ ಎ. ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿನಿ ಸುಮೇಧಾ ವಂದಿಸಿ, ಕೀರ್ತಿರಾಜ್ ಕಾರ್ಯಕ್ರಮ ನಿರೂಪಿಸಿದರು.





