Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನಗರಸಭೆ ಸಿಬ್ಬಂದಿಗೆ 10 ಲಕ್ಷ ರೂ....

ಉಡುಪಿ ನಗರಸಭೆ ಸಿಬ್ಬಂದಿಗೆ 10 ಲಕ್ಷ ರೂ. ನೀಡುವಂತೆ ಬೆದರಿಕೆ: ಮಹಿಳೆ ಸಹಿತ ಮೂವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ11 July 2026 8:07 PM IST
share
ಉಡುಪಿ ನಗರಸಭೆ ಸಿಬ್ಬಂದಿಗೆ 10 ಲಕ್ಷ ರೂ. ನೀಡುವಂತೆ ಬೆದರಿಕೆ: ಮಹಿಳೆ ಸಹಿತ ಮೂವರು ಆರೋಪಿಗಳ ಬಂಧನ

ಉಡುಪಿ, ಜು.11: ಉಡುಪಿ ನಗರಸಭೆಯ ಪೌರ ಕಾರ್ಮಿಕರ ಪ್ರಭಾರ ಮೇಲ್ವಿಚಾರಕರೊಬ್ಬರಿಗೆ 10ಲಕ್ಷ ರೂ. ಹಣ ನೀಡುವಂತೆ ಹಾಗೂ ಇಲ್ಲದಿದ್ದರೆ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸುವುದಾಗಿ ಬೆದರಿಸುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಉಡುಪಿ ನಗರ ಸಭೆಯ ಪೌರಕಾರ್ಮಿಕ ಯೋಗೀಶ್ ಪ್ರಭು, ಹೊರ ಗುತ್ತಿಗೆ ಚಾಲಕರಾದ ವಿನಯ ಕುಮಾರ್ ಮತ್ತು ಸ್ಮಿತಾ ಬಿ.ಬಂಗೇರ ಬಂಧಿತ ಆರೋಪಿಗಳು.

ಉಡುಪಿ ನಗರಸಭೆಯ ಪೌರ ಕಾರ್ಮಿಕರ ಪ್ರಭಾರ ಮೇಲ್ವಿಚಾರಕ ರಾಗಿ ಕರ್ತವ್ಯ ನಿರ್ವಹಿಸುತಿದ್ದ ಬೈಂದೂರಿನ ಯೋಗೀಶ(34) ಎಂಬವರಿಗೆ ಯೋಗೀಶ್ ಪ್ರಭು, ವಿನಯ ಕುಮಾರ್ ಮತ್ತು ಸ್ಮಿತಾ ಬಿ.ಬಂಗೇರ ಎಂಬವರು ಅವರಿಗೆ ಅನುಕೂಲವಾಗುವಂತೆ ದೈನಂದಿನ ಕರ್ತವ್ಯದಲ್ಲಿ ಅವರನ್ನು ನಿಯೋಜನೆ ಮಾಡಿಕೊಳ್ಳಬೇಕು, ಇಲ್ಲವಾದರೆ ಸ್ಮಿತಾಳನ್ನು ಬಳಸಿಕೊಂಡು ಯೋಗೀಶ್ ವಿರುದ್ಧ ಲೈಂಗಿಕ ಕಿರುಕುಳದ ಅರೋಪ ಹೊರಿಸುವುದಾಗಿ ಹೆದರಿಸುತ್ತಿದ್ದರು.

ನಂತರ 10ಲಕ್ಷ ರೂ. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ ಆರೋಪಿಗಳಿಗೆ ಯೋಗೀಶ್, 2 ಲಕ್ಷ ಹಣವನ್ನು ನಗದು ರೂಪದಲ್ಲಿ ನೀಡಿದ್ದರು. ಬಳಿಕ ಆರೋಪಿಗಳು ಉಳಿದ 8 ಲಕ್ಷ ರೂ. ಹಣವನ್ನು ನೀಡುವಂತೆ ಬೆದರಿಸಿದ್ದರು. ಹಣವನ್ನು ನೀಡಲು ನಿರಾಕರಿಸಿದ ಯೋಗೀಶ್ ವಿರುದ್ಧ ಜ.29ರಂದು ಸ್ಮಿತಾ ಹೆಸರಿನಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆ ಯಲ್ಲಿ ಲೈಂಗಿಕ ಅತ್ಯಾಚಾರ ಅರೋಪದಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಕೊಂಡಿದ್ದ ಯೋಗೀಶ್ ಅವರ ಮೊಬೈಲ್‌ಗೆ ಜೂ.30 ರಂದು ಕರೆ ಮಾಡಿದ ಆರೋಪಿಗಳು ಉಳಿಕೆ ಹಣ 8 ಲಕ್ಷ ರೂ. ನೀಡುವಂತೆ ಒತ್ತಾಯಿಸಿದರು. ಇಲ್ಲವಾದಲ್ಲಿ ಇನ್ನೊಂದು ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದರು. ಜು.6ರಂದು ಮಣಿಪಾಲ ಪೆರಂಪಳ್ಳಿ ಸರ್ಕಲ್‌ನಲ್ಲಿ ಆರೋಪಿ ಯೋಗೀಶ್ ಪ್ರಭು, ಯೋಗೀಶ್‌ಗೆ ಬೈದು ಉಳಿದ ಹಣ 8 ಲಕ್ಷ ರೂ. ಕೊಡದಿದ್ದರೆ ಪ್ರಕರಣ ದಾಖಲಿಸುವು ದಾಗಿ ಜಾತಿ ನಿಂದನೆ ಮಾಡಿ ಬೆದರಿಸಿದ್ದಾರೆಂದು ದೂರಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

UdupiMunicipalCorporationstaffthreatenedaccusewomanarrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X