Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ನಾಲ್ವರ ಹತ್ಯೆ ಪ್ರಕರಣ; ಆದಷ್ಟು...

ಉಡುಪಿ: ನಾಲ್ವರ ಹತ್ಯೆ ಪ್ರಕರಣ; ಆದಷ್ಟು ಬೇಗ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ ಯಜಮಾನ ನೂರ್ ಮುಹಮ್ಮದ್

"ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧನಿದ್ದೇನೆ"

ವಾರ್ತಾಭಾರತಿವಾರ್ತಾಭಾರತಿ14 Nov 2023 1:51 PM IST
share
ಉಡುಪಿ: ನಾಲ್ವರ ಹತ್ಯೆ ಪ್ರಕರಣ; ಆದಷ್ಟು ಬೇಗ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದ ಯಜಮಾನ ನೂರ್ ಮುಹಮ್ಮದ್

ಉಡುಪಿ, ನ.14: ನನ್ನ ಪತ್ನಿ ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ತನಿಖೆಗೆ ನಾನು ದಿನ 24ಗಂಟೆಗಳ ಕಾಲವೂ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧನಿದ್ದೇನೆ. ಪೊಲೀಸರು ಕ್ಷಿಪ್ರಗತಿಯಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವ ಮೂಲಕ ನಮಗೆ ನ್ಯಾಯ ಒದಗಿಸಬೇಕು ಎಂದು ನೂರ್ ಮುಹಮ್ಮದ್ ಒತ್ತಾಯಿಸಿದ್ದಾರೆ.

ನೇಜಾರು ಸಮೀಪದ ತೃಪ್ತಿ ಲೇಔಟ್‌ನಲ್ಲಿರುವ ತನ್ನ ಮನೆಯಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಪ್ರಕರಣದ ತನಿಖಾಧಿಕಾರಿಗಳಿಗೆ ನನ್ನ ಬಳಿ ಇರುವ ಎಲ್ಲ ರೀತಿಯ ಮಾಹಿತಿಗಳನ್ನು ನೀಡಿದ್ದೇನೆ. ನನ್ನ ಮತ್ತು ಮಕ್ಕಳ ನಾಲ್ಕು ಮೊಬೈಲ್‌ಗಳನ್ನು ಅವರಿಗೆ ಒಪ್ಪಿಸಿದ್ದೇನೆ. ಅದರಲ್ಲಿ ಏನಾದರೂ ಸುಳಿವು ಸಿಗಬಹುದು ಎಂಬ ಕಾರಣಕ್ಕೆ ಅದನ್ನು ಪೊಲೀಸರಿಗೆ ನೀಡಿದ್ದೇನೆ. ನನ್ನ ಮತ್ತು ಮಗ ಮೊಬೈಲ್‌ಗಳನ್ನು ಪೊಲೀಸರು ನಿನ್ನೆ ಸಂಜೆ ವಾಪಾಸ್ಸು ಕೊಟ್ಟಿದ್ದಾರೆ. ಮೊಬೈಲ್‌ನಲ್ಲಿ ಪೊಲೀಸರಿಗೆ ಕೆಲವು ಮಾಹಿತಿ ದೊರೆತಿದೆ ಎಂಬುದು ತಿಳಿದುಬಂದಿದೆ ಎಂದರು.

ಕೌಟುಂಬಿಕ ಕಲಹ ಇಲ್ಲ

ಕೆಲವು ಮಾಧ್ಯಮಗಳಲ್ಲಿ ಈ ಕೊಲೆಗೆ ಕೌಟುಂಬಿಕ ಕಲಹ ಕಾರಣ ಎಂಬುದಾಗಿ ಸುದ್ದಿ ಬಂದಿದ್ದು, ಅದನ್ನು ಕೇಳಿ ನನಗೆ ಆಘಾತ ಆಗಿದೆ. ಅದರಲ್ಲಿ ಯಾವುದೇ ರೀತಿಯ ಸತ್ಯಾಂಶ ಇಲ್ಲ. ಎಲ್ಲವೂ ಸುಳ್ಳು ಎಂದು ನೂರ್ ಮುಹಮ್ಮದ್ ಸ್ಪಷ್ಟಪಡಿಸಿದರು.

ನಾನು ಮದುವೆಯಾಗಿ 30 ವರ್ಷಗಳಾಗಿವೆ. 15 ವರ್ಷಗಳ ಕಾಲ ನನ್ನ ಹೆಂಡ್ತಿ ಮತ್ತು ಮಕ್ಕಳು ನನ್ನ ಜೊತೆ ರಿಯಾದ್‌ನಲ್ಲಿಯೇ ಇದ್ದರು. ಕಳೆದ ರಂಝಾನ್ ಹಬ್ಬದ ಸಂದರ್ಭ ನಾವೆಲ್ಲ ಮಕ್ಕಾ ಮದೀನದಲ್ಲಿ ಉಮ್ರಾ ಮಾಡಿ ಹಬ್ಬ ಆಚರಿಸಿ ಊರಿಗೆ ಬಂದಿದ್ದೇವೆ. ಮತ್ತೆ 15ದಿನಗಳಲ್ಲಿ ಅವರು ವಾಪಾಸ್ಸು ಸೌದಿಗೆ ಬರಲು ಸಿದ್ಧರಾಗಿದ್ದರು. ಈ ದುರ್ಘಟನೆ ನಡೆದಿರುವುದರಿಂದ ನಾನು ತುರ್ತಾಗಿ ಬರುವಂತಾಯಿತು ಎಂದು ಅವರು ತಿಳಿಸಿದರು.

ಮಕ್ಕಳ ಮದುವೆಗೆ ಯೋಜನೆ

ನನ್ನ ಮಗಳು ಐನಾಝ್ ಏರ್ ಇಂಡಿಯಾದಲ್ಲಿ ಗಗನಸಖಿಯಾಗಿದ್ದು ಬೆಳಗ್ಗೆ 11ಗಂಟೆಗೆ ಅವಳಿಗೆ ದುಬೈ ಹೋಗಲು ಇತ್ತು. ಸೌದಿಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ನನ್ನ ದೊಡ್ಡ ಮಗಳು ಮಂಗಳೂರಿನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಳು. ಒಂದು ವರ್ಷದ ಶಿಕ್ಷಣ ಮುಗಿದ ಮಾಡಿದ ಬಳಿಕ ಮತ್ತೆ ಸೌದಿಗೆ ಹೋಗುವ ಯೋಜನೆ ಅವಳಿಗೆ ಇತ್ತು ಎಂದು ನೂರ್ ಮುಹಮ್ಮದ್ ಹೇಳಿದರು.

ಮುಂದಿನ ವರ್ಷ ಮನೆಗೆ ಪೈಂಟ್ ಮಾಡಿ ದೊಡ್ಡ ಮಗ ಮತ್ತು ಮಗಳಿಗೆ ಮದುವೆ ಮಾಡುವ ಯೋಜನೆ ಕೂಡ ನನ್ನ ಮುಂದೆ ಇತ್ತು ಎಂದು ಅವರು ತಿಳಿಸಿದರು. ಕೊಲೆಯಾದ ಮಾಹಿತಿ ಸಿಕ್ಕದ ಕೂಡಲೇ ಹೊರಡಲು ಸಿದ್ಧನಾದೆ. ಆದರೆ ನೇರ ವಿಮಾನ ಸಿಗಲಿಲ್ಲ. ಬಳಿಕ ನಮ್ಮ ಮೆನೇಜರ್ ವ್ಯವಸ್ಥೆ ಮಾಡಿ ಕೊಟ್ಟರು. ಅದಕ್ಕಾಗಿ ರಿಯಾದ್‌ನಿಂದ ರಸ್ತೆಯ ಮೂಲಕ ದಮಾಮ್‌ಗೆ, ದಮಾಮ್‌ನಿಂದ ಬೆಹೆರೈನ್ ಬಂದು, ಅಲ್ಲಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್‌ನಲ್ಲಿ ನೇರವಾಗಿ ಇಲ್ಲಿಗೆ ಬಂದೆ ಎಂದು ಅವರು ಮಾಹಿತಿ ನೀಡಿದರು.

ಹಣಕಾಸಿನ ವಿಚಾರ ಸಾರ್ವಜನಿಕವಾಗಿ ಹೇಳಲ್ಲ

ಹಣಕಾಸಿನ ವಿಚಾರದ ಬಗ್ಗೆ ನಾನು ಸಾರ್ವಜನಿಕವಾಗಿ ಏನು ಹೇಳಲು ಬಯಸುವುದಿಲ್ಲ. ನನ್ನ ಖಾಸಗಿ ಜೀವನದಲ್ಲಿ ಏನೇ ನಷ್ಟವಾದರೂ ಅದು ನನಗೆ ಎಂದು ನೂರ್ ಮುಹಮ್ಮದ್ ತಿಳಿಸಿದರು.

ಪೊಲೀಸ್ ಇಲಾಖೆ ಆದಷ್ಟು ಬೇಗ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನಮಗೆ ನ್ಯಾಯ ಒದಗಿಸಿಕೊಡಬೇಕು. ಇಲ್ಲಿನ ಸುತ್ತಮುತ್ತಲಿನ ಜನ ಭಯ ಭೀತರಾಗಿದ್ದಾರೆ. ನೆರೆಮನೆಯಲ್ಲಿರುವ ನನ್ನ ಪತ್ನಿಯ ಅಣ್ಣನ ಮನೆಯವರು ಇಲ್ಲಿ ಇರಲು ಭಯ ಪಡುತ್ತಿದ್ದಾರೆ ಎಂದರು.

ಮಗನನ್ನು ಹೊರಗಡೆ ಕಳುಹಿಸಲು ಹೆದರಿಕೆಯಾಗುತ್ತಿದೆ. ನಮ್ಮ ಹಿಂದೆ, ನಮ್ಮ ಸುತ್ತಮುತ್ತ ಯಾರಿದ್ದಾರೆ ನಮಗೆ ಗೊತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X