ಉಡುಪಿ: ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ನಿಂದ ನ.11ರಂದು ರಕ್ತದಾನ ಶಿಬಿರ

ಉಡುಪಿ, ನ.10: ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಕೆಎಂಸಿ ಮಣಿಪಾಲ ಇದರ ಬ್ಲಡ್ ಸೆಂಟರ್ ಸಹಯೋಗದಲ್ಲಿ ನ.11ರಂದು ಉಡುಪಿ ಜಾಮಿಯಾ ಮಸೀದಿ ವಠಾರದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಗ್ಗೆ 10:30ಕ್ಕೆ ಆರಂಭಗೊಳ್ಳುವ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಲ್, ಕೆಎಂಸಿ ಮಣಿಪಾಲ ಇದರ ಬ್ಲಡ್ ಸೆಂಟರ್ ವಿಭಾಗದ ಮುಖ್ಯಸ್ಥ ಪ್ರೊ. ಡಾ.ಶಮೀ ಶಾಸ್ತ್ರಿ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ, ಉಡುಪಿ ಜಾಮಿಯಾ ಮಸೀದಿಯ ಅಧ್ಯಕ್ಷ ರಿಯಾಝ್ ಅಹ್ಮದ್, ಸಾಮಾಜಿಕ ಕಾರ್ಯಕರ್ತ ಮುನೀರ್ ಕಲ್ಯಾಡಿ, ಅಸೋಸಿಯೇಶನ್ ಅಧ್ಯಕ್ಷ ಮುನೀರ್ ಮುಹಮ್ಮದ್ ಭಾಗವಹಿಸುವರು ಎಂದು ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ವಿ.ಎಸ್.ಉಮರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





