ಉಡುಪಿ | ಡಿ.24ರಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆ
ಉಡುಪಿ, ಡಿ.22: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಬಳಕೆದಾರರ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಡಿ.24ರಂದು ಬೆಳಗ್ಗೆ 10 ಗಂಟೆಗೆ ನಗರದ ವಾದಿರಾಜ ರಸ್ತೆಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಸಂದೀಪ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂಬಲಪಾಡಿ ಶ್ರೀಜನಾರ್ಧನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ.ವಿಜಯ ಬಲ್ಲಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ., ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸುಮೀಲ ತಿ. ಮಾಸರೆಡ್ಡಿ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





