Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ನೂತನ ಜಿಲ್ಲಾಸ್ಪತ್ರೆ...

ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾರ್ಯಾರಂಭಕ್ಕೆ ಸಿದ್ಧತೆ: ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ2 Nov 2026 2:15 PM IST
share
ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾರ್ಯಾರಂಭಕ್ಕೆ ಸಿದ್ಧತೆ: ಸಚಿವ ಖಾದರ್

ಕಾಪು, ನ.2: ನೂತನ ಉಡುಪಿ ಜಿಲ್ಲಾ ಆಸ್ಪತ್ರೆಯ ಕಾರ್ಯಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಆಸ್ಪತ್ರೆಯ ಅಗತ್ಯವಾಗಿರುವ ಪೀಠೋಪಕರಣಗಳ ಖರೀದಿಗೆ ಈಗಾಗಲೇ ಟೆಂಡರ್ ಕರೆಯಲಾಗಿದೆ. ಹೆಚ್ಚುವರಿ ಮಾನವ ಸಂಪನ್ಮೂಲದ ಅಗತ್ಯ ಕೂಡ ಇದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲು ಸೋಮವಾರ ಕಾಪುವಿಗೆ ಆಗಮಿಸಿದ ವೇಳೆ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು. ಈಗಾಗಲೇ ಈ ಕುರಿತು ಸಭೆ ಕರೆಯಲಾಗಿದೆ. ಉಡುಪಿ ಜಿಲ್ಲೆ ಮಾತ್ರವಲ್ಲ ಶಿರಸಿ ಸೇರಿದಂತೆ ನಾಲ್ಕೈದು ಜಿಲ್ಲೆಗಳ ಆಸ್ಪತ್ರೆಗಳನ್ನು ಕಾರ್ಯಾರಂಭಿಸಬೇಕಾಗಿದೆ. ಅದೇ ರೀತಿ ರಾಜ್ಯದಲ್ಲಿ 22 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡ ನಿರ್ಮಿಸಲಾಗುತ್ತದೆ. ಕೇವಲ ಕಟ್ಟಡ ನಿರ್ಮಿಸಿದರೆ ಸಾಲದು. ಅದಕ್ಕೆ ಮಾನವ ಸಂಪನ್ಮೂಲ ಕೂಡ ಒದಗಿಸಬೇಕಾಗಿದೆ. ಆ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದರು.

ಹಳೆಯ ಜಿಲ್ಲಾಸ್ಪತ್ರೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವುದು ಅನಿವಾರ್ಯ. ಹಳೆಯ ಆಸ್ಪತ್ರೆಯಲ್ಲಿರುವ ಎಲ್ಲಾ ಸೌಲಭ್ಯಗಳನ್ನು ಮುಂದುವರಿಸುವುದರ ಜೊತೆಗೆ ಹೊಸ ಸೌಲಭ್ಯಗಳನ್ನೂ ಒದಗಿಸಲಾಗುವುದು. ಯಾವುದೇ ವ್ಯವಸ್ಥೆಯನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ಸ್ವಲ್ಪ ಸಮಯ ಬೇಕಾಗುತ್ತದೆ. ಆಸ್ಪತ್ರೆ ಕಾರ್ಯಾರಂಭದ ಹಂತದಲ್ಲಿರುವಾಗ ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ಜನಸಾಮಾನ್ಯರ ಸಮಸ್ಯೆ ಹಾಗೂ ಆಡಳಿತ ವ್ಯವಸ್ಥೆಯ ಸವಾಲುಗಳೆರಡೂ ಸರಕಾರಕ್ಕೆ ಅರಿವಿದೆ ಎಂದರು.

ಹಣಕಾಸಿನ ಕೊರತೆ ಇಲ್ಲ: ರಾಜ್ಯ ಸರಕಾರದಿಂದ ಜನಸಾಮಾನ್ಯರಿಗೆ ಅಗತ್ಯವಿರುವ ಎಲ್ಲಾ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ಸರಕಾರ ಮಟ್ಟದಲ್ಲಿ ಯಾವುದೇ ಕೊರತೆಯಿಲ್ಲ. ಅದಕ್ಕೆ ಬೇಕಾದ ಆರ್ಥಿಕ ವ್ಯವಸ್ಥೆ ನಮ್ಮಲ್ಲಿದೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

ಆದರೆ ಕಬ್ಬು ಬೆಳೆಗಾರರಿಗೆ ಕೇಂದ್ರ ಸರಕಾರ ನೀಡಬೇಕಾದ ಹಣವನ್ನು ರಾಜ್ಯ ಸರಕಾರ ಭರಿಸಲು ಸಾಧ್ಯವಿಲ್ಲ ಎಂಬ ಅರ್ಥದಲ್ಲಿ ಮುಖ್ಯಮಂತ್ರಿ ಮಾತನಾಡಿದ್ದಾರೆ. ಕೇಂದ್ರ ಸರಕಾರದ ಹೊಣೆಯನ್ನು ರಾಜ್ಯ ಸರಕಾರವೇ ಹೊರಲು ಸಾಧ್ಯವೇ ಎಂಬ ಪ್ರಶ್ನೆಯನ್ನು ಮುಖ್ಯಮಂತ್ರಿಗಳು ಮುಂದಿಟ್ಟಿದ್ದಾರೆ. ಆರ್ಥಿಕವಾಗಿ ರಾಜ್ಯ ಸರಕಾರದ ಸುಭದ್ರವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ದರಪಟ್ಟಿ ಪ್ರದರ್ಶನ: ಅಧಿಕಾರಿಗಳು ಬಂದು ನೋಟೀಸ್ ನೀಡಿದ ಬಳಿಕವೇ ಯಾಕೆ ಖಾಸಗಿ ಆಸ್ಪತ್ರೆಗಳು ದರಪಟ್ಟಿ ಹಾಕಬೇಕು. ಅವರಿಗೆ ಸಾಮಾಜಿಕ ಜವಾಬ್ದಾರಿ ಇಲ್ಲವೇ? ಆಸ್ಪತ್ರೆಗಳ ಅಸೋಸಿಯೇಷನ್ ಅವರೇ ತಮ್ಮ ಸದಸ್ಯ ಆಸ್ಪತ್ರೆಗಳಿಗೆ ದರಪಟ್ಟಿ ಪ್ರದರ್ಶಿಸುವಂತೆ ಸೂಚನೆ ನೀಡಬೇಕು ಎಂದು ಸಚಿವರು ತಿಳಿಸಿದರು.

ರೋಗಿಗಳಿಗೆ ಸ್ಪಷ್ಟವಾಗಿ ಕಾಣುವ ರೀತಿಯಲ್ಲಿ ಆಸ್ಪತ್ರೆಗಳಲ್ಲಿ ದರಪಟ್ಟಿ ಪ್ರದರ್ಶಿಸಬೇಕು. ಪ್ರಮುಖ ಚಿಕಿತ್ಸಾ ಶುಲ್ಕಗಳು ಹಾಗೂ ಇತರ ಶುಲ್ಕಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಖಾಸಗಿ ಆಸ್ಪತ್ರೆಗಳು ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಸೇವೆ ನೀಡುತ್ತಿವೆ. ಆದರೆ ರೋಗಿಗಳಿಗೆ ಚಿಕಿತ್ಸಾ ವೆಚ್ಚದ ಬಗ್ಗೆ ಮೊದಲೇ ಸ್ಪಷ್ಟ ಮಾಹಿತಿ ದೊರೆಯುವುದು ಅತ್ಯಗತ್ಯ ಎಂದು ಅವರು ಹೇಳಿದರು.

‘ಆರೋಗ್ಯ ಕ್ಷೇತ್ರದಲ್ಲಿ ವಿದೇಶಿ ಹೂಡಿಕೆಗೆ ಅವಕಾಶ ನೀಡಬಾರದು. ಈ ಕ್ಷೇತ್ರದಲ್ಲಿ ವಿದೇಶಿ ಹೂಡಿಕೆ ಹೆಚ್ಚಾದರೆ ಅದರ ಹೊರೆ ಅಂತಿಮವಾಗಿ ಸಾಮಾನ್ಯ ರೋಗಿಗಳ ಮೇಲೆ ಬೀಳುವ ಸಾಧ್ಯತೆಯಿದೆ. ಇದರಿಂದ ಜನಸಾಮಾನ್ಯರಿಗೆ ಆರೋಗ್ಯ ಸೇವೆ ಪಡೆಯುವುದು ಮತ್ತಷ್ಟು ಕಷ್ಟವಾಗಬಹುದು’

-ಯು.ಟಿ.ಖಾದರ್, ಸಚಿವರು

ಯಶ್ಪಾಲ್‌ಗೆ ಹೇಳಿಕೆಗೆ ಖಾದರ್ ತಿರುಗೇಟು

ಉಡುಪಿಯ ಹೊಸ ಜಿಲ್ಲಾಸ್ಪತ್ರೆ ಕಾರ್ಯಾರಂಭ ಮಾಡದಿದ್ದರೆ ಹೋರಾಟ ನಡೆಸುವುದಾಗಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಯು.ಟಿ.ಖಾದರ್, ಪ್ರತಿಭಟನೆ ಮಾಡುವುದು ಸುಲಭ. ಆದರೆ ಸಮಸ್ಯೆ ಬಗೆಹರಿಸುವುದು ಕಷ್ಟ ಎಂದು ತಿರುಗೇಟು ನೀಡಿದರು.

ಜನರು ಶಾಸಕರನ್ನು ಆಯ್ಕೆ ಮಾಡುವುದು ಪ್ರತಿಭಟನೆ ಮಾಡುವುದಕ್ಕಾಗಿಯೇ? ಸಮಸ್ಯೆಗಳನ್ನು ಬಗೆಹರಿಸುವ ಜನಪ್ರತಿನಿಧಿಗಳು ಬೇಕು. ಸಮಸ್ಯೆಗಳನ್ನು ಹುಡುಕಿಕೊಂಡು ಹೋಗುವುದು ಶಾಸಕರಿಗೆ ಶೋಭೆಯಲ್ಲ. ಸಮಸ್ಯೆ ಎದುರಾದಾಗ ಅಧಿಕಾರಿಗಳನ್ನು ಒಟ್ಟಿಗೆ ಕೂರಿಸಿ ಪರಿಹಾರ ಕಂಡುಕೊಳ್ಳುವುದು ಜನಪ್ರತಿನಿಧಿಯ ಜವಾಬ್ದಾರಿಯಾಗಿದೆ. ಆ ರೀತಿಯ ಶಾಸಕರು ಪ್ರತಿ ಕ್ಷೇತ್ರಕ್ಕೆ ಬೇಕು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X