Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ನಿಟ್ಟೂರು ಶಾಲಾ 125ನೇ...

Udupi | ನಿಟ್ಟೂರು ಶಾಲಾ 125ನೇ ವರ್ಷಚಾರಣೆ ಕರಸೇವೆಯೊಂದಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ2 Oct 2026 9:47 PM IST
share
Udupi | ನಿಟ್ಟೂರು ಶಾಲಾ 125ನೇ ವರ್ಷಚಾರಣೆ ಕರಸೇವೆಯೊಂದಿಗೆ ಚಾಲನೆ

ಉಡುಪಿ : ತಾಂಗದಗಡಿಯ ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪ್ರಸಕ್ತ ವರ್ಷ125ನೇ ವರ್ಷದ ಸಂಭ್ರಮಾಚರಣೆಗೆ ಕರಸೇವೆಯ ಮೂಲಕ ಗಾಂಧಿ ಜಯಂತಿ ಆಚರಣೆಯೊಂದಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ಶ್ರೀವೆಂಕಟರಮಣ ದೇವಸ್ಥಾನದ ಅರ್ಚಕ ಕೆ.ನವೀನ್ ಐತಾಳ್ ಪ್ರಾರ್ಥನಾ ವಿಧಿಯನ್ನು ನೆರವೇರಿಸಿದ ಬಳಿಕ ಕರಸೇವೆಯ ಮೂಲಕ ಹಳೆಯ ಮಾಡಿನ ಹಂಚುಗಳನ್ನು ತೆಗೆದು ಅವುಗಳನ್ನು ವ್ಯವಸ್ಥಿತವಾಗಿ ನಿಗದಿತ ಸ್ಥಳಕ್ಕೆ ವರ್ಗಾಯಿಸುವ ಕಾರ್ಯ ನಡೆಯಿತು.

ಕಟ್ಟಡದ ನಿರ್ಮಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಸದಾನಂದ ನಾಯಕ್ ಮಾತನಾಡಿ, 125ನೇ ವರ್ಷಾಚರಣೆಯ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಮಂಡಳಿ ಹಾಗೂ ಅಭಿಮಾನಿ ಬಳಗ ಜೊತೆಯಾಗಿ ಸೇರಿ ಅತ್ಯಂತ ವಿಜೃಂಭಣೆಯಿಂದ ಆಚರಣೆಗೆ ನಿರ್ಣಯಿಸಲಾಗಿದೆ. ಇದರ ಪ್ರಯಕ್ತ ಶಿಥಿಲಾವಸ್ಥೆಯಲ್ಲಿ ಇರುವ ಕಟ್ಟಡವನ್ನು ನವೀಕರಣ ಮಾಡುವ ಚಿಂತನೆ ನಡೆಸಲಾಗಿದೆ. ಅಲ್ಲದೆ ಶಾಲೆ ಅತ್ಯಾಧುನಿಕ ಮಾದರಿ ಶೌಚಾಲಯನ್ನು ನಿರ್ಮಾಣ, ಶಿಕ್ಷಣದ ಗುಣಮಟ್ಟ ಹೆಚ್ಚಳ ಹಿನ್ನಲೆಯಲ್ಲಿ ಗೌರವ ಶಿಕ್ಷಕರನ್ನು ನೇಮಿಸಿ ಅವರ ವೇತನಕ್ಕಾಗಿ ಪ್ರತ್ಯೇಕ ನಿಧಿ ರಚನೆ, ಇದಾದ ಬಳಿಕ ಶಾಲೆಯ ಹಿಂಬಂದಿಯಲ್ಲಿ ಪ್ರತ್ಯೇಕ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣದ ಚಿಂತನೆಯಿದೆ ಎಂದರು.

ಶಾಲಾ ಮುಖ್ಯೋಪಾಧ್ಯಾಯರಾದ ಸಂತೋಷ್ ಕರ್ನೆಲಿಯೋ ಮಾತನಾಡಿ, 1901ರಲ್ಲಿ ನಮ್ಮ ಹಿರಿಯರಿಂದ ಈ ಶಾಲೆ ಆರಂಭಗೊಂಡಿದ್ದು, 125ನೇ ವರ್ಷಗಳಿಗೆ ಕಾಲಿಟ್ಟಿದೆ. ಹಿರಿಯರ ಸೇವೆ ಮತ್ತು ಶಾಲೆಯ ಅಭಿವೃದ್ಧಿಗೆ ಕಾರಣರಾದ ಪ್ರತಿಯೊಬ್ಬರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇವೆ. ಶಾಲೆಯ ಅಭಿವೃದ್ಧೀಯಲ್ಲಿ ಹಳೆವಿದ್ಯಾರ್ಥಿ ಸಂಘದ ಪಾತ್ರ ವಿಶೇಷವಾಗಿದ್ದು ಪ್ರಸ್ತುತ ಸಂಘಕ್ಕೆ 60 ವರ್ಷಗಳು ಪೂರ್ಣಗೊಂಡಿದೆ. ಹಳೆ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಮಂಡಳಿ, ಅಭಿಮಾನಿಗಳ ನೆರವು ಮತ್ತು ಸಹಕಾರದಿಂದ 125 ವರ್ಷಗಳ ಆಚರಣೆ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

125 ವರ್ಷದ ಸಂಭ್ರಮಾಚರಣೆಗೆ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಗಳ ದಿನಾಚರಣೆಯ ದಿನದಂದು ಚಾಲನೆ ನೀಡಲು ನಿರ್ಧರಿಸಲಾಗಿದೆ. ಕರಸೇವೆಯ ಮೂಲಕ ಹಳೆಯ ಮಾಡಿನ ಹಂಚುಗಳನ್ನು ತೆಗೆದು ಅವುಗಳನ್ನು ವ್ಯವಸ್ಥಿತವಾಗಿ ನಿಗದಿತ ಸ್ಥಳಕ್ಕೆ ವರ್ಗಾಯಿಸುವ ಕಾರ್ಯ ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯ ಹಳೆ ವಿದ್ಯಾರ್ಥಿಗಳು ಇದರಲ್ಲಿ ಕೈಜೋಡಿಸಿದ್ದಾರೆ. ಕನ್ನಡ ಮಾಧ್ಯಮ ಶಾಲೆಯನ್ನು ಉಳಿಸಿ ಬೆಳೆಸುವಲ್ಲಿ ಹಳೆ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಮಂಡಳಿ, ಅಭಿಮಾನಿಗಳು ಸಹಕಾರ ನೀಡುತ್ತಿರುವುದು ಅಭಿಮಾನದ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯ ಡೆನಿಸ್ ಕರ್ನೆಲಿಯೋ, ಸಂಘದ ಅಧ್ಯಕ್ಷ ರಮೇಶ್ ಎಸ್.ಬಾರಿತ್ತಾಯ, ಟ್ರಸ್ಟ್ ಅಧ್ಯಕ್ಷ ಯು.ಜೆ ಮಹಮ್ಮದ್ ಹನೀಫ್, ವಿಶೇಷ ಸಮಿತಿ ಪ್ರಧಾನ ಕಾರ್ಯದರ್ಶಿ ಅಮ್ಮುಂಜೆ ಸದಾನಂದ ನಾಯಕ್, ಸಮಿತಿಯ ಪದಾಧಿಕಾರಿಗಳಾದ ಚಂದ್ರಕಾಂತ್ ಕೆ ಎನ್, ಕೃಷ್ಣ ಶ್ರೀಧರನ್, ಕೆ.ಹರೀಶ್ ಆಚಾರ್ಯ, ಬಾಲಚಂದ್ರ ಗಾಂಸ್ಕರ್, ಕಮಲಾಕ್ಷ ಶೇಟ್, ಗೋಡ್ ಫ್ರಿಡಿಸಿಲ್ವಾ, ವಿನಯ್ ಕುಮಾರ್, ರಘುರಾಮ್ ಆಚಾರ್ಯ, ಹಯವದನ ಭಟ್, ತ್ರಿವೇಣಿ ರಘುರಾಮ ಆಚಾರ್ಯ, ಚಂದ್ರಕಾಂತ್ ಯು., ಎಸ್ ರಾಮಚಂದ್ರ ನಾಯಕ್, ದುರ್ಗಾಪ್ರಸಾದ್, ಪ್ರದ್ಯುಮ್ನ ಗಿರಿಧರ ಆಚಾರ್ಯ, ಶೇಖರ ಪಿ, ಗಣೇಶ್ ಕುರ್ಮಾ, ಅಬೂಬರ್ಕ್ಕ ಸಿದ್ದಿಕ್, ಸುನೀಲ್ ಗುಂಡಿಬೈಲು, ಅನಿಲ್ ಗುಂಡಿಬೈಲು, ಸಮಿತಾ, ಕವಿತಾ ಶೆಟ್ಟಿ, ಸರೋಜಿನಿ, ಜಯ ಆಚಾರ್ಯ, ಪೂರ್ಣಿಮಾ ಆಚಾರ್ಯ, ಸುನೀತಾ ಆಚಾರ್ಯ, ಶೋಭಾ ಆಚಾರ್ಯ ಉಪಸ್ಥಿತರಿದ್ದರು

Tags

schoolUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X