Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಸೆ.20ರಂದು ಕೇರಳ ಕಲ್ಚರಲ್...

ಉಡುಪಿ: ಸೆ.20ರಂದು ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ವತಿಯಿಂದ ಓಣಂ ಆಚರಣೆ

ವಾರ್ತಾಭಾರತಿವಾರ್ತಾಭಾರತಿ17 Sept 2026 5:04 PM IST
share
ಉಡುಪಿ: ಸೆ.20ರಂದು ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ವತಿಯಿಂದ ಓಣಂ ಆಚರಣೆ

ಉಡುಪಿ : ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ (ರಿ) ಉಡುಪಿ ಸಂಘವು ಓಣಂ ಆಚರಣೆಯಂತಹ ಹಲವಾರು ಕಾರ್ಯಕ್ರಮಗಳನ್ನು 32 ವರ್ಷಗಳಿಂದ ಆಚರಿಸುತ್ತ ಬಂದಿದೆ. ಈ ಬಾರಿಯೂ ಕೂಡ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್ ನಲ್ಲಿ ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ 32ನೆ ವಾರ್ಷಿಕೋತ್ಸವ ಹಾಗೂ ಓಣಂ ಆಚರಣೆ ಸೆ.20 ರಂದು ವಿಜೃಂಭಣೆ ಯಿಂದ ನಡೆಯಲಿದೆ ಎಂದು ಕೆ ಸಿ ಎಸ್ ಸಿ ಕಾರ್ಯಕಾರಿ ಸಮಿತಿ ಸದಸ್ಯೆ ಡಾ ಪಾರ್ವತಿ ಐತಾಳ್ ತಿಳಿಸಿದರು.

ಉಡುಪಿ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಅರೋಗ್ಯ ಸಚಿವ ಯು ಟಿ ಖಾದರ್ , ಉಡುಪಿ ಶಾಸಕ ಯಶಪಾಲ್ ಸುವರ್ಣ, ಜಿಲ್ಲಾಧಿಕಾರಿ ಸ್ವರೂಪ ಟಿ ಕೆ, ಜಿಲ್ಲಾ ಪೊಲೀಸ್ ವರಿಸ್ಟಾಧಿಕಾರಿ ಹರಿರಾಮ್ ಶಂಕರ್, ಮಾಹೆ ಹೆಲ್ತ್ ಸೈನ್ಸ್ ಪ್ರೊ ವೈಸ್ ಚಾನ್ಸೆಲ್ಲರ್ ಡಾ ಮಾತ್ಯುಸ್ ಜಾಕೋಬ್, ನೋರ್ಕ ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಎಂ ಕೆ, ಕೇರಳ ಸಮಾಜo ಮಂಗಳೂರು ಅಧ್ಯಕ್ಷ ಟಿ ಕೆ ರಾಜನ್, ಓಣಂ ಸಮಿತಿ ಅಧ್ಯಕ್ಷ ಶಿನೋದ್ ಟಿ ಆರ್, ಕೆ ಸಿ ಎಸ್ ಸಿ ಕಾರ್ಯದರ್ಶಿ ಬಿನೇಶ್ ವಿ ಸಿ, ಕೋಶಾಧಿಕಾರಿ ಶಾಜಿ ವಿ ಕರುಣ್, ಕೆ ಸಿ ಎಸ್ ಸಿ ನಿಕಟ ಪೂರ್ವ ಅಧ್ಯಕ್ಷ ಸುಗುಣ ಕುಮಾರ್ ಎಂ ಜೆ ಎಫ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೆ ಸಿ ಎಸ್ ಸಿ ಅಧ್ಯಕ್ಷ ರಾಜನ್ ಪಿಲಿಪ್ಸ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಡಾ. ವಿನೋದ್ ವಿ ತೋಮಸ್, ಅರೋಗ್ಯ ಕ್ಷೇತ್ರದಲ್ಲಿ ಸಾಧನೆಗೈದ ಡಾ ರಾಜೇಶ್ ನಾಯರ್, ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಎಂ ಎಲ್ ಜೋಸೆಫ್, ಕಲೆ ಸಂಸ್ಕೃತಿ ಕ್ಷೇತ್ರದಲ್ಲಿ ಸಿ ಸಾಧನೆಗೈದ ಲಿಯಾಕತ್ ಅಲಿ, ಯುವ ನ್ರತ್ಯಗಾತಿ ಸಾನ್ವಿ ರಾಜೇಶ್ ರವರಿಗೆ 2026ರ ಸಾಲಿನ ಕೆ ಸಿ ಎಸ್ ಸಿ ಪಂಚರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಕೆ ಸಿ ಎಸ್ ಸಿ ಸದಸ್ಯರ ಕುಟುಂಬದ ಪಿ ಯು ಸಿ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡುವ ಮೂಲಕ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದೆ.

ಅಶಕ್ತರಿಗೆ ಧನ ಸಹಾಯ, ಕೇರಳದಿಂದ ಇಲ್ಲಿಗೆ ಬಂದು ದಾರಿ ತಪ್ಪಿದವರನ್ನು ಊರಿನವರೊಂದಿಗೆ ಸೇರಿಸುವ ಸಹಾಯ ಮತ್ತು ಅಗತ್ಯ ಬಂದಾಗ ಹಲವಾರು ರೀತಿಯ ಸಹಾಯಗಳನ್ನು ಮಾಡುತ್ತಿದೆ. ಮಲೆಯಾಳಂ ಮಿಶನ್ ಮೂಲಕ ಮಲೆಯಾಳ ಭಾಷೆಯನ್ನು ಕಲಿಸುವ ವ್ಯವಸ್ಥೆ, ಕೇರಳ ಸರಕಾರವು ಪರವೂರಿನಲ್ಲಿ ನೆಲೆಸಿದವರಿಗೆ ನೀಡುವ ನೋರ್ಕಾ ಮೂಲಕ ನೀಡುವ ಹೆಲ್ತ್ ಇನ್ಶುರೆನ್ಸ್ ಅನ್ನು ಈ ಬಾರಿ ಸಂಘದ ಸದಸ್ಯರ ಕುಟುಂಬಗಳಿಗೆ ಪಡೆಯುವ ವ್ಯವಸ್ಥೆಯನ್ನು ಸಂಘದ ಮುಖಂತರ ನೀಡುವ ವ್ಯವಸ್ಥೆ ಮಾಡಲಾಗುವುದು. ಎಪ್ಪತ್ತು ಮತ್ತು ಎಪ್ಪತ್ತಕ್ಕಿಂತ ಹೆಚ್ಚು ವಯಸ್ಸಾದ ಜತೆ ಜತೆಯಾಗಿ ಉಲ್ಲಾಸದಿಂದ ಬದುಕುವ ವ್ಯವಸ್ಥೆ ಮಾಡಲು "ಸೂಪರ್ ಸೆವೆಂಟಿ" ಎಂಬ ಒಂದು ಶಾಖೆಯನ್ನೂ ಸಂಘವು ಸದಾ ಕಾಲ ಲವಲವಿಕೆಯಿಂದ ಕೂಡಿರಲು ಹಾಗೂ ನಮ್ಮ ಯುವ ಸಮುದಾಯ ಸಮಾಜ ಸೇವಾ ಚಟುವಟಿಕೆ ತೊಡಗಿಸಿಕೊಳ್ಳಲು ಪೂರಕವಾಗಿ "ಯೂಥ್ ವಿಂಗ" ನ್ನು ಆರಂಭಿಸುತ್ತಿದೆ.

ಸಮಾರಂಭದಲ್ಲಿ ವಿಶೇಷ ಆಕರ್ಷಣೆಯಾಗಿ ಸೆಲೆಬ್ರಿಟಿ ಮಲಯಾಳಂ ನಟ ರಾಜೇಶ್ ಹೆಬ್ಬಾರ್ ಭಾಗವಹಿಸಲಿದ್ದು, ಕಲಾ ಭವನ್ ರಾಜೇಶ್ ನೇತೃತ್ವದಲ್ಲಿ ಕಿರುತೆರೆಯ ಪ್ರಸಿದ್ಧ ಗಾಯಕರಿಂದ ಆರ್ಕೆಸ್ಟ್ರಾ ನಡೆಯಲಿದೆ.

ಕೆ ಸಿ ಎಸ್ ಸಿ ಕುಟುಂಬ ಸದಸ್ಯರಿಂದ ಸ್ವಾಗತ ನ್ರತ್ಯ, ಪುಷ್ಪಾoಜಲಿ, ತಿರುವಾದಿರ ಕಳಿ, ಭರತನಾಟ್ಯ, ಮೋಹಿನಿಯಟ್ಟo, ಫುಷನ್ ಡಾನ್ಸ್, ಕೊಯಿತು ಪಾಟ್ಟು ಡಾನ್ಸ್, ಕೈಕೊಟ್ಟಿಕಲಿ, ಮಹಾಭಾರತ ಥೀಮ್, ಸಿನೆಮಾಟಿಕ್ ಡಾನ್ಸ್ ನಡೆಯಲಿದೆ. ಕಾಲೇಜು ವಿದ್ಯಾರ್ಥಿನಿಯರಿಗಾಗಿ "ಅತ್ತಾಪೂಕಲಂ" ಹೂವಿನ ರಂಗೋಲಿ ಸ್ಪರ್ಧೆ ನಡೆಯಲಿದೆ.

ಬೆಳಿಗ್ಗೆ 10ರಿಂದ 12.30 ರವರೆಗೆ ಮಿತ್ರ ಹಾಸ್ಪಿಟಲ್ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಲಿದೆ. ಮಧ್ಯಾಹ್ನ ಓಣo ಸದ್ಯ-ಅಂದರೆ ಕೇರಳದ ಅಪರೂಪದ ಖಾದ್ಯ ಪದಾರ್ಥಗಳ ಭರ್ಜರಿ ಭೋಜನವಿದೆ ಎಂದರು

ಪತ್ರಿಕಾಗೋಷ್ಠಿಯಲ್ಲಿ ಕೆ ಸಿ ಎಸ್ ಸಿ ಅಧ್ಯಕ್ಷ ರಾಜನ್ ಫಿಲಿಪ್ಸ್, ಕೆ ಸಿ ಎಸ್ ಸಿ ಓಣಂ ಸಮಿತಿ ಅಧ್ಯಕ್ಷ ಶಿನೋದ್ ಟಿ ಆರ್, ಕೆ ಸಿ ಎಸ್ ಸಿ ಕಾರ್ಯದರ್ಶಿ ಬಿನೇಶ್ ವಿ ಸಿ,ಕಾರ್ಯಕಾರಿ ಸಮಿತಿ ಅಧ್ಯಕ್ಷ ಮೊಹಮ್ಮದ್ ಶರೀಫ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X