Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಆ.19ರಂದು ಪ್ರತಿಕೋದ್ಯಮ...

ಉಡುಪಿ: ಆ.19ರಂದು ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ16 Aug 2023 2:46 PM IST
share
ಉಡುಪಿ: ಆ.19ರಂದು ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ

ಉಡುಪಿ, ಆ.16: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ, ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಇದರ ಪ್ರಾಯೋಜಕತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರವನ್ನು ಆ.19ರಂದು ಬೆಳಗ್ಗೆ 10ಗಂಟೆಗೆ ಉಡುಪಿ ನಾಯರ್‌ಕೆರೆಯ ಐಎಂಎ ಭವನದಲ್ಲಿ ಆಯೋಜಿಸಲಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕಾರ್ಯಾಗಾರವನ್ನು ಮಲ್ಪೆ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಉದ್ಘಾಟಿಸಲಿರುವರು. ಛಾಯಾಚಿತ್ರ ಪ್ರದರ್ಶನವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಅಧ್ಯಕ್ಷ ಜನಾರ್ದನ ಕೊಡವೂರು, ಹಳೆ ಕ್ಯಾಮೆರಾಗಳ ಪ್ರದರ್ಶನವನ್ನು ಉದ್ಯಮಿ ಶ್ರೀಶ ನಾಯಕ್ ಪೆರ್ಣಂಕಿಲ ಉದ್ಘಾಟಿಸಲಿರುವರು ಎಂದರು.

ಫೋಟೋಗ್ರಫಿ ಕಾರ್ಯಾಗಾರವನ್ನು ಉದಯವಾಣಿಯ ಛಾಯಾಚಿತ್ರ ಪತ್ರಕರ್ತ ಅಸ್ಟ್ರೋ ಮೋಹನ್, ನುಡಿಚಿತ್ರ ಕಾರ್ಯಾಗಾರವನ್ನು ಮಂಗಳೂರು ವಿಜಯ ಕರ್ನಾಟಕ ಹಿರಿಯ ಉಪಸಂಪಾದಕ ಸುಶೀಲೇಂದ್ರ ಕುಟುಪಾಡಿ ನಡೆಸಿಕೊಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು.

ಈ ಕಾರ್ಯಾಗಾರದಲ್ಲಿ ಉಡುಪಿ ಅಜ್ಜರಕಾಡು ಮಹಿಳಾ ಪ್ರಥಮ ದರ್ಜೆ ಕಾಲೇಜು, ಉಡುಪಿ ಎಂಜಿಎಂ ಕಾಲೇಜು, ಕಾರ್ಕಳ ಎಂಪಿಎಂ ಕಾಲೇಜು ಮತ್ತು ಕುಂದಾಪುರ ಭಂಡಾರ್‌ಕಾರ್ಸ್‌ ಕಾಲೇಜಿನ ಪತ್ರಿಕೋದ್ಯಮ ವಿಭಾಗದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿರುವರು.

ಛಾಯಾಚಿತ್ರ ಪ್ರದರ್ಶನದಲ್ಲಿ ನಮ್ಮ ಸಂಘದ ಸದಸ್ಯರು ತೆಗೆದ 20ಕ್ಕೂ ಅಧಿಕ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಅಲ್ಲದೆ ಸಂಘದ ಸದಸ್ಯರ ಸಂಗ್ರಹದಲ್ಲಿರುವ ಹಳೆಯ ವಿಡಿಯೋ ಹಾಗೂ ಫೋಟೋ ಕ್ಯಾಮೆರಾಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ಅವರು ಮಾಹಿತಿ‌ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X