ಉಡುಪಿ: ಡಿ.21ರಂದು ಪೋಲಿಯೊ ಲಸಿಕಾ ಕಾರ್ಯಕ್ರಮ

ಉಡುಪಿ, ಡಿ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿ.21ರಂದು ಬೆಳಿಗ್ಗೆ 8:00 ಗಂಟೆಗೆ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಸಂಸದರು, ಶಾಸಕರು, ಜನಪ್ರತಿನಿಧಿಗಳು, ಆಡಳಿತ ಪ್ರಮುಖರು ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story





