Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಡೆಂಗಿ ಜ್ವರ, ಚಿಕುನ್‌ಗುನ್ಯ...

ಉಡುಪಿ: ಡೆಂಗಿ ಜ್ವರ, ಚಿಕುನ್‌ಗುನ್ಯ ತಡೆಗೆ ಮುಂಜಾಗ್ರತಾ ಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ20 Sep 2023 2:39 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ಡೆಂಗಿ ಜ್ವರ, ಚಿಕುನ್‌ಗುನ್ಯ ತಡೆಗೆ ಮುಂಜಾಗ್ರತಾ ಕ್ರಮಗಳು

ಉಡುಪಿ, ಸೆ.20: ಕರಾವಳಿ ಜಿಲ್ಲೆಗಳಲ್ಲಿ ಸೊಳ್ಳೆಗಳಿಂದ ವ್ಯಾಪವಾಗಿ ಹರಡುತ್ತಿರುವ ಸಾಂಕ್ರಾಮಿಕ ಡೆಂಗಿ ಹಾಗೂ ಚಿಕನ್‌ ಗುನ್ಯ ರೋಗದ ತಡೆಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿ ಸಲಹೆ ನೀಡಿದೆ.

ಡೆಂಗಿ: ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಡೆಂಗಿ ಜ್ವರ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆ ಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ಸೊಳ್ಳೆ ಕಚ್ಚಿದ 5ರಿಂದ 7 ದಿನಗಳಲ್ಲಿ ಇದ್ದಕ್ಕಿದಂತೆ ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರ ತಲೆನೋವು, ಮೈಕೈ ಕೀಲು ನೋವು, ವಾಕರಿಕೆ/ ವಾಂತಿ ಇವುಗಳ ಜೊತೆಗೆ ತೀವ್ರ ಹೊಟ್ಟೆ ನೋವು, ಬಾಯಿ, ಮೂಗು ಹಾಗೂ ವಸಡುಗಳಲ್ಲಿ ರಕ್ತಸಾವದ ಗುರುತುಗಳು, ಚರ್ಮದ ಮೇಲೆ ಅಲ್ಲಲ್ಲಿ ಕೆಂಪಾದ ಗಂಧೆಗಳು / ರಕ್ತಸ್ರಾವದ ಗುರುತುಗಳು, ಕಪ್ಪು ಬಣ್ಣದ ಮಲ ವಿಸರ್ಜನೆ, ವಿಪರೀತ ಬಾಯಾರಿಕೆ, ತಣ್ಣನೆಯ ಬಿಳಿಚಿದ ಚರ್ಮ, ಜ್ಞಾನ ತಪ್ಪುವುದು, ರಕ್ತದ ಒತ್ತಡದ ಕುಸಿತ, ನಾಡಿ ಬಡಿತದ ಕುಸಿತದಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಡೆಂಗಿ ಜ್ವರಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಆದರೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾ ಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪಡೆಯದಿದ್ದಲ್ಲಿ ರೋಗ ಲಕ್ಷಣಗಳು ಉಲ್ಬಣ ಗೊಂಡು, ಡೆಂಗಿ ರಕ್ತ ಸ್ರಾವ ಜ್ವರ ಹಾಗೂ ಡೆಂಗಿ ಆಘಾತ ಜ್ವರದಿಂದ ಸಾವು ಸಂಭವಿಸಬಹುದು. ಆದ್ದರಿಂದ ಡೆಂಗಿ ಜ್ವರದ ರೋಗ ಲಕ್ಷಣಗಳು ಕಂಡು ಬಂದ ತಕ್ಷಣವೇ ಹತ್ತಿರದ ಸರಕಾರಿ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು.

ಚಿಕುನ್‌ಗುನ್ಯ: ಸೋಂಕಿತ ಈಡಿಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಚಿಕುನ್‌ಗುನ್ಯ ಸೋಂಕು ಒಬ್ಬರಿಂದ ಮತ್ತೊಬ್ಬ ರಿಗೆ ಹರಡುತ್ತದೆ. ಆದರೆ ಚಿಕನ್‌ಗುನ್ಯ ಮಾರಣಾಂತಿಕ ರೋಗವಲ್ಲ. ಇದ್ದಕ್ಕಿದ್ದಂತೆ ಜ್ವರ, ಕೀಲುಗಳಲ್ಲಿ ತೀವ್ರವಾದ ನೋವು ಮತ್ತು ಊತ ಕಾಣಿಸಿಕೊಳ್ಳುವುದು ಈ ರೋಗದ ಲಕ್ಷಣಗಳಾಗಿದ್ದು, ಚಿಕುನ್‌ಗುನ್ಯ ಸೋಂಕಿಗೆ ನಿರ್ದಿಷ್ಟವಾದ ಚಿಕಿತ್ಸೆ ಇಲ್ಲ. ಆದರೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಆದ್ದರಿಂದ, ಯಾವುದೇ ಜ್ವರವಿರಲಿ ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು.

ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತಪರೀಕ್ಷೆ ಹಾಗೂ ರೋಗಕ್ಕೆ ಚಿಕಿತ್ಸೆಯನ್ನು ನೀಡಲಾಗುತ್ತದೆ.

ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳು ಮನೆಗಳಲ್ಲಿರುವ ನೀರು ಶೇಖರಣಾ ಸಂಗ್ರಾಹಕ ಗಳಾದ ಸಿಮೆಂಟ್ ತೊಟ್ಟಿ ಗಳು, ಬ್ಯಾರೆಲ್, ಡ್ರಂ, ಹೂ ಕುಂಡಗಳ ಕೆಳಗಿನ ತಟ್ಟೆಗಳು, ಏರ್-ಕೂಲರ್, ರೆಫ್ರಿಜರೇಟರ್‌ನ ಡಿ-ಫ್ರಾಸ್ಟ್ ಟ್ರೇಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿ ಬಿಸಾಡಿದ ಒಡೆದ ಬಾಟಲಿ, ಟೈರು, ಪ್ಲಾಸ್ಟಿಕ್ ಗ್ಲಾಸ್, ಎಳೆನೀರಿನ ಚಿಪ್ಪು ಹಾಗೂ ಇತರ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾದ ಮಳೆಯ ನೀರಿನಲ್ಲಿ ಈಡಿಸ್ ಸೊಳ್ಳೆ ಗಳು ಹೇರಳವಾಗಿ ಉತ್ಪತ್ತಿಯಾಗುತ್ತವೆ.

ಮನೆಯಲ್ಲಿರುವ ಎಲ್ಲಾ ನೀರಿನ ಸಂಗ್ರಾಹಕಗಳು ಮತ್ತು ಮೇಲ್ಛಾವಣಿಯಲ್ಲಿರುವ ತೊಟ್ಟಿಯ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು, ಒಣಗಿಸಿ ನೀರನ್ನು ಮತ್ತೆ ತುಂಬಿಸಿ ಭದ್ರವಾಗಿ ಮುಚ್ಚಳಿಕೆಯಿಂದ ಮುಚ್ಚಬೇಕು. ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿನ ಒಡೆದ ಬಾಟಲಿ, ಟಿನ್, ಟೈರು ಇತ್ಯಾದಿ ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹ ವಾಗದಂತೆ ಎಚ್ಚರವಹಿಸಬೇಕು. ಘನತ್ಯಾಜ್ಯ ವಸ್ತುಗಳನ್ನು ಬೋರಲಾಗಿಡುವುದು ಮತ್ತು ಶೀಘ್ರವಾಗಿ ಸೂಕ್ತ ವಿಲೇವಾರಿ ಮಾಡಬೇಕು. ಏರ್ ಕೂಲರ್‌ಗಳಲ್ಲಿ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಬದಲಾುಸಬೇಕು.

ಯಾವಾಗಲೂ ಮೈ ತುಂಬಾ ಬಟ್ಟೆ ಧರಿಸಬೇಕು. ಹಗಲು ಹೊತ್ತಿನಲ್ಲಿ ನಿದ್ರಿಸುವ/ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವಯಸ್ಸಾದವರು ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಡೆಂಗಿ ಜ್ವರ ಪೀಡಿತರೂ ಸಹ ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು.

ಜ್ವರ ಪೀಡಿತರು ಸಾಕಷ್ಟು ದ್ರವರೂಪದ ಆಹಾರಗಳನ್ನು ಸೇವಿಸುವುದ ರೊಂದಿಗೆ ಅಗತ್ಯ ವಿಶ್ರಾಂತಿಯನ್ನು ಪಡೆಯಬೇಕು. ಮನೆಯ ಕಿಟಕಿ, ಬಾಗಿಲು ಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸಬೇಕು ಜೊತೆಗೆ ಈಡಿಸ್ ಲಾರ್ವಾ ಸಮೀಕ್ಷೆ ಹಾಗೂ ಉತ್ಪತ್ತಿ ತಾಣಗಳ ಸಮೀಕ್ಷೆಗೆಂದು ಮನೆ ಭೇಟಿ ನೀಡುವ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಸ್ವಯಂಸೇವಕರು ನೀಡುವ ಸಲಹೆ - ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಶಾಲಾ ಕಾಲೇಜು, ಅಂಗನವಾಡಿ, ಸರಕಾರಿ/ಖಾಸಗಿ ಕಚೇರಿಗಳು, ಬಸ್ ಡಿಪೋ ಇತ್ಯಾದಿ ಗಳಲ್ಲಿಯೂ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ಅಗತ್ಯವಾಗಿ ನಿರ್ಮೂಲನೆ ಮಾಡಬೇಕು.

ಡೆಂಗಿ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ವೈದ್ಯ ಪದ್ಧತಿಯನ್ನು ಪಾಲಿಸದೇ ಸರಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಡೆಂಗಿ ಜ್ವರದ ಲಕ್ಷಣಗಳಿದ್ದಲ್ಲಿ ಬ್ರೂಫಿನ್ ಅಥವಾ ಇತರ ನೋವು ನಿವಾರಕಗಳನ್ನು ಸೇವಿಸಬಾರದು. ಇದರಿಂದ ರಕ್ತಸ್ರಾವವಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ.

ಡೆಂಗಿ ಜ್ವರ ಹಾಗೂ ಚಿಕುನ್‌ಗುನ್ಯ ರೋಗಗಳಿಗೆ ಭಯ ಪಡದೇ, ರೋಗಗಳ ಕುರಿತು ಎಚ್ಚರಿಕೆ ವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಆರೋಗ್ಯ ಕೇಂದ್ರ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X