ಉಡುಪಿ | ಹಿರಿಯರಡೆಗೆ ನಮ್ಮ ನಡಿಗೆ ಕಾರ್ಯಕ್ರಮದಡಿಯಲ್ಲಿ ಪ್ರೊ.ಅ.ಸುಂದರಗೆ ಸನ್ಮಾನ

ಉಡುಪಿ, ಡಿ.7: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಿರಿಯರಡೆಗೆ ನಮ್ಮ ನಡಿಗೆ ಕಾರ್ಯಕ್ರಮದಡಿಯಲ್ಲಿ ಕರ್ನಾಟಕ ಪುರಾತತ್ವ ರತ್ನ ಪ್ರೊ.ಅ.ಸುಂದರ ಅವರನ್ನು ಸನ್ಮಾನಿಸಲಾಯಿತು.
ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು. ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಹಿರಿಯ ಪತ್ರಕರ್ತರಾದ ಜಯರಾಮ ಅಡಿಗ, ಮೊಗೇರಿ, ನೀಲಾವರ ಶ್ರೀಮಹಿಷ ಮರ್ದಿನಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅನುಷಾ, ಕಸಾಪ ಮಾಧ್ಯಮ ಪ್ರತಿನಿಧಿ ನರಸಿಂಹಮೂರ್ತಿ ಮಣಿಪಾಲ, ಕೊ.ಚಂದ್ರಶೇಖರ ನಾವಡ, ಸುಂದರ ಅವರ ಪುತ್ರ ಅನಂತ ಅಡಿಗ, ಆದಿತ್ಯ, ನಿವೃತ್ತ ಶಿಕ್ಷಕಿ ಸೀತಾಲಕ್ಷ್ಮೀ ಮೊದಲಾದವರು ಉಪಸ್ಥಿತರಿದ್ದರು.
Next Story





