ಉಡುಪಿ | ರಸ್ತೆ ಅಪಘಾತ: ಕಾಂಗ್ರೆಸ್ ಹಿರಿಯ ನಾಯಕಿ ಲೀನಾ ಮಥಾಯಸ್ ಮೃತ್ಯು

ಶಿರ್ವ, ಮೇ 12: ಶಿರ್ವ ಗ್ರಾಮದ ಇರ್ಮಿಜಿ ಚರ್ಚ್ ಬಳಿ ಇರುವ ರೇಚಲ್ ರೆಸ್ಟೊರೆಂಟ್ ಬಳಿ ಮೇ 11ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಸಂಜೆ 7.15ರ ಸುಮಾರಿಗೆ ಬೆಳ್ಮಣ್ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕಾರು ಅತೀವೇಗ ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಬದಿಗೆ ಚಲಾಯಿಸಿಕೊಂಡು ಬಂದು, ಅಲ್ಲೇ ನಿಂತಿದ್ದ ಲೀನಾ ಮಥಾಯಸ್ ರಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10:22ರ ಸುಮಾರಿಗೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದ ಇವರು, ರಾಜ್ಯ ಮಹಿಳಾ ಕಾಂಗ್ರೆಸ್ ನ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಶಿರ್ವ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯೆಯಾಗಿದ್ದರು.
Next Story





