ಉಡುಪಿ | ನ.23ರಂದು ʼರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳುʼ ಕುರಿತು ವಿಚಾರ ಸಂಕಿರಣ

ಉಡುಪಿ, ನ.22: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ರಥಬೀದಿ ಗೆಳೆಯರು ವತಿಯಿಂದ ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು ಕುರಿತ ವಿಚಾರ ಸಂಕಿರಣವನ್ನು ನ.23ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪ ದಲ್ಲಿ ಆಯೋಜಿಸಲಾಗಿದೆ.
ಬೆಳಗ್ಗೆ 9.30ಕ್ಕೆ ಕಾರ್ಯಕ್ರಮವನ್ನು ಡಾ.ಜನಾರ್ದನ(ಸನ್ನಿ) ಮೈಸೂರು ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ನಾಟಕ ಅಕಾಡೆಮಿ ಅಧ್ಯಕ್ಷ ಡಾ.ಕೆ.ವಿ. ನಾಗರಾಜ ಮೂರ್ತಿ ವಹಿಸಲಿರುವರು. ಬಳಿಕ ವಿವಿಧ ವಿಚಾರಗಳ ಕುರಿತು ವಿಚಾರಗೋಷ್ಠಿ ನಡೆಯಲಿದ್ದು, ಸಂಜೆ 4.15ಕ್ಕೆ ಸಮಾರೋಪ ಸಮಾರಂಭ ದಲ್ಲಿ ರೆ.ಫಾ.ಆಲ್ವಿನ್ ಸೆರಾವೋ ಸಮಾರೋಪ ಭಾಷಣ ಮಾಡಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





