ಉಡುಪಿ | ಸ್ಪೀಕ್ ಸ್ಮಾರ್ಟ್, ಸ್ಪೀಕ್ ಕಾನ್ಫಿಡೆಂಟ್ ಕಾರ್ಯಾಗಾರ

ಉಡುಪಿ, ನ.30: ಹಿರಿಯಡ್ಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ವಿಭಾಗ ಮತ್ತು ಐಕ್ಯುಎಸಿ ಸಹಯೋಗದಲ್ಲಿ ಸ್ಪೀಕ್ ಸ್ಮಾರ್ಟ್, ಸ್ಪೀಕ್ ಕಾನ್ಫಿಡೆಂಟ್ ಕುರಿತು ಶನಿವಾರ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ತೆಂಕನಿಡಿಯೂರು ಸರಕಾರಿ ಪ್ರಥಮದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಸಂವಹನ ಕಲೆಯನ್ನು ಬೆಳೆಸಿಕೊಳ್ಳಲು ಅನುಕೂಲವಾಗುವಂತೆ ಹಲವು ಚಟುವಟಿಕೆಗಳನ್ನು ನಡೆಸಿದರು. ಅಲ್ಲದೆ, ನಿರಂತರ ಅಭ್ಯಾಸದ ಮೂಲಕ ಇಂಗ್ಲೀಷ್ ಭಾಷಾ ಪ್ರಾವೀಣ್ಯತೆಯನ್ನು ಪಡೆದುಕೊಳ್ಳಲು ಸಾಧ್ಯ ಎಂಬುದನ್ನು ವಿವರಿಸಿದರು.
ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಅಧ್ಯಕ್ಷತೆಯನ್ನು ವಹಿಸಿದ್ದರು. ಐಕ್ಯುಎಸಿ ಸಂಚಾಲಕ ಡಾ.ಲಿತಿನ್ ಬಿ.ಎಂ., ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಚಾಲಕಿ ಡಾ.ಸೌಮ್ಯಲತಾ ಪಿ., ಆಂಗ್ಲಭಾಷಾ ವಿಭಾಗ ಮುಖ್ಯಸ್ಥೆ ನಿಶ್ಚಿತ ಎಸ್.ಹೋಬಳಿದಾರ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಸಿತೀಕ್ಷಾ ಸ್ವಾಗತಿದರು. ವೈಷ್ಣವಿ ಅತಿಥಿ ಪರಿಚಯ ಮಾಡಿದರು. ಸುಹಾ ವಂದಿಸಿದರು. ದಿವ್ಯಾಶ್ರೀ ಕಾರ್ಯಕ್ರಮ ನಿರೂಪಿಸಿದರು.





