Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ಜಿಲ್ಲೆಯಲ್ಲಿ ಮತದಾರರ ಪಟ್ಟಿ...

Udupi | ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಾರಂಭ

ವಾರ್ತಾಭಾರತಿವಾರ್ತಾಭಾರತಿ30 Jun 2026 9:55 PM IST
share
Udupi | ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಾರಂಭ
ಶೀರೂರುಶ್ರೀ, ಮಹಮ್ಮದ್ ಮೌಲಾಗೆ ಫಾರಂ ವಿತರಿಸಿದ ಜಿಲ್ಲಾಧಿಕಾರಿ

ಉಡುಪಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಭಾಗವಾಗಿ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳು ಇಂದಿನಿಂದ (ಮಂಗಳವಾರ) ಮತದಾರರ ಮನೆ ಮನೆಗಳಿಗೆ ಭೇಟಿ ನೀಡಿ, ದ್ವಿಪ್ರತಿಯಲ್ಲಿ ಗಣತಿ ನಮೂನೆ (ಎನುಮರೇಷನ್ ಫಾರ್ಮ್) ಅನ್ನು ವಿತರಿಸಲು ಪ್ರಾರಂಭಿಸಿದ್ದಾರೆ.

ಈ ಮೂಲಕ ಪ್ರತಿಯೊಬ್ಬ ಅರ್ಹ ಮತದಾರರ ವಿವರವನ್ನು ಇಂದಿನಿಂದ ಕಲೆ ಹಾಕಲಾಗುತಿದ್ದು, ಈ ಬಗ್ಗೆ ಸ್ವತಹ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ನಗರದ ಸರ್ಗಿ, ಕುಂಜಿಬೆಟ್ಟು, ಕಾಡಬೆಟ್ಟು, ಪಣಿಯಾಡಿ, ಶ್ರೀಕೃಷ್ಣ ಮಠ ಸೇರಿದಂತೆ ವಿವಿಧ ವಾರ್ಡ್ ಗಳ ಮನೆಗಳಿಗೆ ಭೇಟಿ ನೀಡಿ ಅಲ್ಲಿರುವ ಗಣ್ಯರಿಗೆ, ಹಿರಿಯ ನಾಗರಿಕರಿಗೆ ಗಣತಿ ನಮೂನೆಯನ್ನು ನೀಡುವ ಮೂಲಕ ಅವರಿಗೆ ಎಸ್ಐಆರ್ ಕುರಿತಂತೆ ಮಾಹಿತಿಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಎಲ್ಲಾ ಅರ್ಹ ನಾಗರಿಕರನ್ನು ಮತದಾರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದೇ ಮುಖ್ಯ ಉದ್ದೇಶವಾಗಿದೆ. ಈ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈಗಾಗಲೇ ಪೂರ್ವಸಿದ್ಧತಾ ಕಾರ್ಯಗಳ ಪ್ರಕ್ರಿಯೆಗಳು ನಡೆದಿವೆ. ಇಂದಿನಿಂದ ಜು.29ರವರೆಗೆ ಬಿಎಲ್ಒಗಳು ಮನೆ ಮನೆ ಸಮೀಕ್ಷೆಗೆ ಭೇಟಿ ನೀಡಿ, ಎನುಮರೇಷನ್ ಫಾರಂಗಳನ್ನು ನೀಡಿ, ಸಾರ್ವಜನಿಕರಿಂದ ಭರ್ತಿ ಮಾಡಲಾದ ಗಣತಿ ನಮೂನೆಗಳನ್ನು ಭಾವಚಿತ್ರ ಸಹಿತ ವಾಪಾಸು ಪಡೆಯಲಿದ್ದಾರೆ. ಅದರೊಂದಿಗೆ ಯಾವುದೇ ದಾಖಲೆಗಳನ್ನು ನೀಡಬೇಕಿಲ್ಲ. ಭರ್ತಿ ಮಾಡಿದ ಫಾರಂಗಳ ಮೇಲೆ ಮತದಾರರ ಸಹಿ ಅಥವಾ ಹೆಬ್ಬೆರಳ ಗುರುತು ಕಡ್ಡಾಯವಾಗಿ ಇರಬೇಕು. ಒಂದನ್ನು ಬಿಎಲ್ಓ ಸಹಿಯೊಂದಿಗೆ ಮತದಾರರು ಪಡೆದು ತಮ್ಮ ಬಳಿ ಇರಿಸಿಕೊಳ್ಳಬೇಕು. ಮತ್ತೊಂದನ್ನು ಬಿಎಲ್ಓಗೆ ನೀಡಬೇಕೆಂದರು.

ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಇದರ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್ 5ರಿಂದ ಸೆಪ್ಟೆಂಬರ್ 4ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇವುಗಳ ವಿಲೇವಾರಿ ಆಗಸ್ಟ್ 5ರಿಂದ ಅಕ್ಟೋಬರ್ 3ರವರೆಗೆ ನಡೆಯಲಿದೆ. ಅ.7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗುವುದು. ಅದು ಅಂತಿಮ ಮತದಾರರ ಪಟ್ಟಿಯಾಗಿರುತ್ತದೆ ಎಂದರು.

ಯಾರು ಗಣತಿ ನಮೂನೆಯನ್ನು ಭರ್ತಿ ಮಾಡಿ ಕೊಡುವುದಿಲ್ಲವೊ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದಿಲ್ಲ. ಅ.7ರ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರು ನಂತರ ಮುಂದಿನ ಜನವರಿ 1ರವರೆಗೆ ಕಾಯಬೇಕಾಗುತ್ತದೆ. ಆಗ ತಮ್ಮ ದಾಖಲೆ ಸಹಿತ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ ನೀಡಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಶೀರೂರುಶ್ರೀ, ಮಹಮ್ಮದ್ ಮೌಲಾರಿಗೆ ವಿತರಣೆ :

ಜಿಲ್ಲಾಧಿಕಾರಿಗಳು ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿ ಎನುಮರೇಷನ್ ಅರ್ಜಿಯನ್ನು ನೀಡಿದರು. ಬಳಿಕ ಸಗ್ರಿ ವಾರ್ಡ್ ನಲ್ಲಿರುವ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಮೌಲ ಅವರ ಮನೆಗೆ ತೆರಳಿ ಅವರಿಗೂ ಅರ್ಜಿ ನಮೂನೆ ವಿತರಿಸಿದರು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮೌಲಾ, ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಇಂದು ಮನೆಗೆ ಭೇಟಿ ನೀಡಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಮಾಹಿತಿ ಹಂಚಿಕೊಂಡು, ಎನುಮರೇಷನ್ ಅರ್ಜಿಯನ್ನು ನೀಡಿದ್ದಾರೆ. ಇದನ್ನು ಸಂಪೂರ್ಣ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲಾಗುವುದು. ಜೊತೆಗೆ ಮತದಾರರ ಪಟ್ಟಿಯಲ್ಲಿ ನನ್ನ ಹಾಗೂ ಕುಟುಂಬದ ಹೆಸರುಗಳು ನೋಂದಣಿಯಾಗಿದೆಯೇ ಎಂದು ಪರಿಶೀಲಿಸಿದ್ದೇನೆ. ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದರು.

ಸಗ್ರಿ ವಾರ್ಡ್ ನ ಬಿಎಲ್ಓ ಪ್ರಮೋದಾ ಮಾತನಾಡಿ, ಮತಗಟ್ಟೆ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ, ಆ ಮನೆಯ ಮತದಾರರಿಗೆ ಗಣತಿ ನಮೂನೆಯ ಎರಡೂ ಪ್ರತಿಗಳನ್ನು ನೀಡುತ್ತಿದ್ದೇವೆ. ಮತದಾರರು ಎರಡನ್ನೂ ಭರ್ತಿ ಮಾಡಿ, ಭಾವಚಿತ್ರ ಅಂಟಿಸಿ, ಸಹಿ ಮಾಡಬೇಕು. ಒಂದು ಪ್ರತಿಯನ್ನು ನಮಗೆ ನೀಡಿ, ಮತ್ತೊಂದು ಪ್ರತಿಯನ್ನು ನಮ್ಮ ಸಹಿ ಪಡೆದು ಸಂಗ್ರಹಿಸಿಟ್ಟುಕೊಳ್ಳಬೇಕು. ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ನೋಂದಾಯಿಸಿಕೊಳ್ಳುವವರೆಗೂ ಇದೇ ನಿಯಮ ಅನ್ವಯವಾಗಲಿದೆ ಎಂದರು.

ನಾವು ಮನೆಗಳಿಗೆ ಭೇಟಿ ನೀಡಿದಾಗ ಮನೆಯಲ್ಲಿ ಜನರು ಇದ್ದು, ಗಣತಿ ನಮೂನೆಗಳನ್ನು ಸ್ವೀಕರಿಸಿದರೆ ಅಂತಹ ಮನೆಗಳಿಗೆ ನೇರಳೆ ಬಣ್ಣದ ಚೌಕಾಕಾರದ ಸ್ಟಿಕ್ಕರ್ ಹಾಗೂ ಮನೆಗೆ ಬೀಗ ಹಾಕಿದ್ದರೆ ಕೆಂಪು ಬಣ್ಣದ ವೃತ್ತಾಕಾರದ ಸ್ಟಿಕ್ಕರ್ ಅಂಟಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಅಲ್ಲದೇ ಜಿಲ್ಲಾಧಿಕಾರಿಗಳು ಮೂಡುತೋನ್ಸೆ ಗ್ರಾಮದ ಶತಾಯುಷಿ (103ವರ್ಷ ಪ್ರಾಯ) ಪ್ರೆಸಿಲ್ಲಾ ಡಿಸೋಜ ಹಾಗೂ ಪಣಿಯಾಡಿ ಶಾಲೆ ಬಳಿ ಇರುವ ಶತಾಯುಷಿ (100ವರ್ಷ) ಪಿ.ಆನಂದ ರಾವ್ ಅವರ ಮನೆಗಳಿಗೂ ತೆರಳಿ ಗಣತಿ ನಮೂನೆಗಳನ್ನು ನೀಡಿ ಮಾಹಿತಿಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ತಹಶೀಲ್ದಾರ್ ಗುರುರಾಜ್ ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಮುಸ್ಲಿಂ ಒಕ್ಕೂಟದ ವತಿಯಿಂದ ಎಸ್ಐಆರ್ ಕುರಿತಂತೆ ಜಿಲ್ಲೆಯ ಏಳೂ ತಾಲೂಕುಗಳಲ್ಲಿ ಈಗಾಗಲೇ ಮಾಹಿತಿಗಳನ್ನು ನೀಡಿದ್ದೇವೆ. ಇಂದು ಶೀರೂರಿನಲ್ಲಿ ಮಾಹಿತಿ ನೀಡಲಾಗುತ್ತಿದೆ. ಪರಿಷ್ಕರಣೆ ಬಗ್ಗೆ ಸಮಗ್ರ ಮಾಹಿತಿ ಯನ್ನು ನಮ್ಮವರಿಗೆ ತಿಳಿಸಲಾಗುತ್ತಿದೆ. ನಮ್ಮ ಉದ್ದೇಶ ಒಂದೇ.... ಒಬ್ಬನೇ ಒಬ್ಬ ಅರ್ಹ ಮತದಾರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದೇ ಆಗಿದೆ.

-ಮಹಮ್ಮದ್ ಮೌಲಾ, ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ.

Tags

Udupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X