Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ವಿಶೇಷ ಚೇತನ ಮಕ್ಕಳಿಗೆ...

ಉಡುಪಿ | ವಿಶೇಷ ಚೇತನ ಮಕ್ಕಳಿಗೆ ಪ್ರೋತ್ಸಾಹ ಅಗತ್ಯ: ಶ್ಯಾಮಲ ಸಿ.ಕೆ.

ವಾರ್ತಾಭಾರತಿವಾರ್ತಾಭಾರತಿ6 Dec 2025 6:02 PM IST
share
ಉಡುಪಿ | ವಿಶೇಷ ಚೇತನ ಮಕ್ಕಳಿಗೆ ಪ್ರೋತ್ಸಾಹ ಅಗತ್ಯ: ಶ್ಯಾಮಲ ಸಿ.ಕೆ.
ಜಿಲ್ಲಾ ಮಟ್ಟದ ಬೋಚಿ ಸ್ಪರ್ಧೆ ಉದ್ಘಾಟನೆ

ಉಡುಪಿ, ಡಿ.6: ದೈಹಿಕ ನ್ಯೂನ್ಯತೆಯಿಂದ ಬಳಲುತ್ತಿರುವ ವಿಶೇಷ ಚೇತನರು ಉತ್ತಮ ಸಾಧನೆಗಳ ಮೂಲಕ ದೇಶದ ಕೀರ್ತಿ ಹೆಚ್ಚಿಸಿದ್ದಾರೆ. ಇಂತವರಿಗೆ ಮಾನಸಿಕ ಸ್ಥೆರ್ಯ ತುಂಬುವ ಕೆಲಸ ಪ್ರತಿಯೊಬ್ಬರಿಂದ ಆಗಬೇಕು ಎಂದು ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ಯಾಮಲ ಸಿ.ಕೆ. ಹೇಳಿದ್ದಾರೆ.

ಪಾಂಬೂರು ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಲಯನ್ಸ್ ಕ್ಲಬ್, ಬಂಟಕಲ್ ಜಾಸ್ಮಿನ್ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಬೋಚಿ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ವಿಶೇಷ ಚೇತನರಿಗೆ ಅನುಕಂಪ ತೋರಿಸುವ ಬದಲು ಅವಕಾಶ ಕಲ್ಪಿಸಿಕೊಟ್ಟರೆ ಅವರಲ್ಲಿ ಇರುವ ಸಾಮರ್ಥ್ಯ ಏನೆಂಬುದನ್ನು ಸಾಬೀತು ಪಡಿಸಲು ಸಾಧ್ಯವಿದೆ. ವಿಶೇಷ ಚೇತನ ಮಕ್ಕಳಿಗೆ ಸರಕಾರ ಕೂಡ ಬೆಂಬಲ ನೀಡುತ್ತಿದೆ. ವಿಶೇಷ ಚೇತನ ಮಕ್ಕಳಿಗೆ ನಿರಂತರ ಪ್ರೋತ್ಸಾಹದ ಮೂಲಕ ಅವರಿಗೆ ಆಸಕ್ತಿ ಇರುವ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಅವಕಾಶ ನೀಡಬೇಕು. ಜಿಲ್ಲೆಯಲ್ಲಿ ಆಟಿಸಂ ಮಕ್ಕಳಿಗಾಗಿ ವಿಶೇಷ ಪಾರ್ಕ್ ನಿರ್ಮಾಣಕ್ಕೆ ಜಿಲ್ಲಾ ಪಂಚಾಯತ್ ವತಿಯಿಂದ ಚಿಂತನೆ ನಡೆಸಲಾಗಿದೆ ಎಂದರು.

ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ರತ್ನ ಮಾತನಾಡಿ, ವಿಶೇಷ ಚೇನತ ಮಕ್ಕಳಿಗೆ ಸಾಮಾನ್ಯ ಮಕ್ಕಳಂತೆ ಕ್ರೀಡೆ ಹಾಗೂ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹ ನೀಡಿದಾಗ ಅವರಲ್ಲಿ ಕೂಡ ಇತರ ಸಾಮಾನ್ಯ ಮಕ್ಕಳಿಗೆ ಕಡಿಮೆ ಇಲ್ಲ ಎನ್ನುವಂತಹ ಆತ್ಮ ವಿಶ್ವಾಸ ಮೂಡುವಂತಾಗುತ್ತದೆ ಎಂದು ತಿಳಿಸಿದರು.

ಲಯನ್ಸ್ ಜಿಲ್ಲೆ 317 ಸಿ ಇದರ ಎಂ.ಎನ್.ಹೆಗ್ಡೆ, ಬೆಳ್ಳೆ ಪಂಚಾಯತ್ ಅಧ್ಯಕ್ಷ ದಿವ್ಯ ವಿ.ಆಚಾರ್ಯ ಶುಭ ಹಾರೈಸಿದರು. ಬಂಟಕಲ್ ಜಾಸ್ಮಿನ್ ಅಧ್ಯಕ್ಷೆ ಜುಲಿಯಾನಾ ರೀಟಾ ಮೊನಿಸ್, ಮಾನಸ ಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ವಿನ್ನಿ ಗೊನ್ಸಾಲ್ವಿಸ್, ಸಹಕಾರ್ಯದರ್ಶಿ ಮೇರಿ ಡಿಸೋಜ, ಕೋಶಾಧಿಕಾರಿ ಜೊಸೇಫ್ ಎಫ್.ನೊರೊನ್ಹಾ ಟ್ರಸ್ಟಿಗಳಾದ ಡಾ.ಎಡ್ವರ್ಡ್ ಲೋಬೊ, ಹೆನ್ರಿ ಮಿನೇಜಸ್ ಮೊದಲಾದವರು ಉಪಸ್ಥಿತರಿದ್ದರು.

ಮಾನಸ ಟ್ರಸ್ಟ್ ಅಧ್ಯಕ್ಷ ಜೋನ್ ಮಾರ್ಟಿಸ್ ಸ್ವಾಗತಿಸಿದರು. ಕಾರ್ಯದರ್ಶಿ ಡಾ.ಜೆರಾಲ್ಡ್ ಪಿಂಟೊ ವಂದಿಸಿದರು. ಹೇಮಲತಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X