Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಶ್ರೀವೇದವರ್ಧನ ತೀರ್ಥರಿಂದ...

ಉಡುಪಿ: ಶ್ರೀವೇದವರ್ಧನ ತೀರ್ಥರಿಂದ ಸರ್ವಜ್ಞ ಪೀಠಾರೋಹಣ

ವಾರ್ತಾಭಾರತಿವಾರ್ತಾಭಾರತಿ18 Jan 2026 8:00 PM IST
share
ಉಡುಪಿ: ಶ್ರೀವೇದವರ್ಧನ ತೀರ್ಥರಿಂದ ಸರ್ವಜ್ಞ ಪೀಠಾರೋಹಣ
ಶೀರೂರು ಪರ್ಯಾಯಕ್ಕೆ ಹರಿದುಬಂದ ಜನಸಾಗರ

ಉಡುಪಿ: ಸಾಗರೋಪಾದಿಯಲ್ಲಿ ಹರಿದು ಬಂದ ಜನಸಾಗರದ ಸಮ್ಮುಖದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥರು ಇಂದು ಬೆಳಗಿನ ಜಾವ ತಮ್ಮ 21ರ ಹರೆಯದಲ್ಲೇ ಮೊದಲ ಬಾರಿಗೆ ಸರ್ವಜ್ಞ ಪೀಠಾ ರೋಹಣ ಮಾಡಿ ಮುಂದಿನ ಎರಡು ವರ್ಷಗಳ ಅವಧಿಗೆ ಶ್ರೀಕೃಷ್ಣನ ಪೂಜಾ ಕೈಂಕರ್ಯ ದೀಕ್ಷೆಯನ್ನು ಸ್ವೀಕರಿಸಿದರು.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಪರ್ಯಾಯದ 32ನೇ ಚಕ್ರದ ಐದನೇ ಪರ್ಯಾಯ ಇದಾಗಿದೆ. ಶೀರೂರು ಶ್ರೀಗಳು, ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಂದ ಪರ್ಯಾಯದ ಪೂಜಾಧಿಕಾರವನ್ನು ಪಡೆದರು.

ಪರ್ಯಾಯ ಮಹೋತ್ಸವದ ಸಾಂಪ್ರದಾಯಿಕತೆ ಇಂದು ಪ್ರಾತ:ಕಾಲ ಒಂದು ಗಂಟೆಗೆ ಕಾಪು ತಾಲೂಕಿನ ದಂಡ ತೀರ್ಥದಲ್ಲಿ ಶೀರೂರು ಶ್ರೀಗಳ ಪವಿತ್ರ ಸ್ನಾನದೊಂದಿಗೆ ಆರಂಭಗೊಂಡಿತ್ತು. ಬಳಿಕ 2:00ಗಂಟೆಗೆ ಉಡುಪಿ ಜೋಡುಕಟ್ಟೆ ಯಿಂದ ಅದ್ದೂರಿಯ ಪರ್ಯಾಯ ಮೆರವಣಿಗೆಯಲ್ಲಿ ಆರು ಮಠಗಳ ಏಳು ಮಂದಿ ಯತಿಗಳೊಂದಿಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದು, ಅಲ್ಲಿನ ವಿವಿಧ ವಿಧಿವಿಧಾನ, ಸಂಪ್ರದಾಯಗಳ ಬಳಿ 6ಗಂಟೆ ಸುಮಾರಿಗೆ ನಿರ್ಗಮನ ಯತಿಗಳಾದ ಪುತ್ತಿಗೆ ಶ್ರೀಗಳು ತಮ್ಮ ಶಿಷ್ಯನೊಂದಿಗೆ ಶ್ರೀಕೃಷ್ಣ ಮಠದಲ್ಲಿ ನೆರೆದ ಅಭಿಮಾನಿಗಳ, ಭಕ್ತರ ಜಯ ಘೋಷ ಹಾಗೂ ವೇದಘೋಷಗಳ ನಡುವೆ ಮುಂದಿನ ಎರಡು ವರ್ಷಗಳ ಅವಧಿಗೆ ಕೃಷ್ಣನ ಪೂಜೆ ನಡೆಸಲು ಶ್ರೀವೇದವರ್ಧನ ತೀರ್ಥರನ್ನು ಸರ್ವಜ್ಞ ಪೀಠದಲ್ಲಿ ಕುಳ್ಳಿರಿಸಿದರು.

ಶೀರೂರು ಶ್ರೀಗಳು, ಅಷ್ಟಮಠಗಳ ಪೈಕಿ ಆರು ಮಠಗಳ ಏಳು ಮಂದಿ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಜೋಡುಕಟ್ಟೆ ಯಲ್ಲಿ ಪಟ್ಟದ ದೇವರಾದ ವಿಠಲನಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿನ ಧಾರ್ಮಿಕ ವಿಧಿಗಳನ್ನು ಪೂರ್ಣಗೊಳಿಸಿದ ಬಳಿಕ ಎಲ್ಲಾ ಸ್ವಾಮೀಜಿಗಳು ಹೂವಿನಿಂದ ಅಲಂಕೃತ ಪಲ್ಲಕ್ಕಿಯಲ್ಲಿ ಕುಳಿತು ಭವ್ಯ ಮೆರವಣಿಗೆಯಲ್ಲಿ ಕೋರ್ಟು ರಸ್ತೆ, ತೆಂಕಪೇಟೆ ಮಾರ್ಗವಾಗಿ ರಥಬೀದಿಗೆ ಬಂದರು.

ಮೆರವಣಿಗೆ ರಥಬೀದಿಗೆ ಆಗಮಿಸಿದಾಗ ಎಲ್ಲಾ ಮಠಾಧೀಶರು ಪಲ್ಲಕ್ಕಿಯಿಂದ ಇಳಿದು ನೆಲಕ್ಕೆ ಹಾಸಿದ ನಡೆ ಮುಡಿಯ ಮೇಲೆ ಸಾಗಿ ಕನಕಗೋಪುರದ ಬಳಿ ಬಂದರು. ಅಲ್ಲಿ ಶೀರೂರು ಶ್ರೀಗಳು ಕನಕನ ಕಿಂಡಿಯ ಮೂಲಕ ಮೊದಲು ಕೃಷ್ಣನ ದರ್ಶನ ಮಾಡಿದರು.ಬಳಿಕ ಅವರು ಚಂದ್ರಮೌಳೀಶ್ವರ ಮತ್ತು ಅನಂತೇಶ್ವರ ದೇವಸ್ಥಾನಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ ಶ್ರೀಕೃಷ್ಣ ಮಠ ಪ್ರವೇಶಿಸಿದರು.

ಶ್ರೀಮಠದ ಪ್ರವೇಶ ದ್ವಾರದಲ್ಲಿ ಶೀರೂರು ಶ್ರೀಗಳನ್ನು ಆತ್ಮೀಯವಾಗಿ ಸ್ವಾಗತಿಸಿದ ನಿರ್ಗಮನ ಪೀಠಾಧಿಪತಿ ಪುತ್ತಿಗೆ ಶ್ರೀಗಳು, ಮಠದೊಳಗೆ ಕರೆತಂದು ನವಗ್ರಹ ಕಿಂಡಿಯ ಮೂಲಕ ಅವರಿಗೆ ಕೃಷ್ಣನ ದರ್ಶನ ಮಾಡಿಸಿದರು. ಅಲ್ಲಿ ಮಠದ ದಿವಾನರು ಸ್ವಾಮೀಜಿಗಳ ಪಾದಪೂಜೆ ಮಾಡಿದರು.

ಪುತ್ತಿಗೆ ಶ್ರೀಗಳು, ಶೀರೂರು ಶ್ರೀಗಳನ್ನು ಸರ್ವಜ್ಞ ಪೀಠದ ಮೇಲೆ ಕುಳ್ಳಿರಿಸುವ ಮೂಲಕ ಪರ್ಯಾಯ ಪೀಠಕ್ಕೇರಿಸಿ ದರು. ಬಳಿಕ ಗರ್ಭಗುಡಿ ಯೊಳಗೆ ಕರೆತಂದು ಮಠದ ಪಟ್ಟದ ದೇವರನ್ನು ಕೃಷ್ಣನ ಎದುರು ಇಟ್ಟು ಪೂಜೆಯ ಸಂಕೇತವಾದ ಅಕ್ಷಯ ಪಾತ್ರೆ, ಗರ್ಭಗುಡಿಯ ಕೀಲಿಕೈ ಹಾಗೂ ಸಟುಗವನ್ನು ಶೀರೂರು ಶ್ರೀಗಳಿಗೆ ಹಸ್ತಾಂತರಿಸಿ ದರು. ಇಲ್ಲಿಗೆ ಪರ್ಯಾಯದ ಪ್ರಮುಖ ವಿಧಿಗಳು ಮುಕ್ತಾಯಗೊಂಡವು.

ಮುಂದಿನ ಧಾರ್ಮಿಕ ವಿಧಿಗಳು ಬಡಗು ಮಾಳಿಗೆಯಲ್ಲಿ ನಡೆದವು. ಅಲ್ಲಿ ವಿಶೇಷವಾಗಿ, ತುಂಬಾ ಆಕರ್ಷಕವಾಗಿ ನಿರ್ಮಿಸಲಾಗಿದ್ದ ಅರಳುಗದ್ದುಗೆಯಲ್ಲಿ ಸಾಂಪ್ರದಾಯಿಕ ದರ್ಬಾರ್ ಹಾಗೂ ಅಷ್ಟ ಮಠಾಧೀಶರಿಗೆ ಮಾಲಿಕೆ ಮಂಗಳಾರತಿ ನಡೆಯಿತು. ಇದಾದ ಬಳಿಕ ಕೊಂಬು ಕಹಳೆ, ಚಂಡೆ, ವೇದಘೋಷಗಳ ನಡುವೆ ಎಲ್ಲಾ ಮಠಾಧೀಶರು ಮೆರವಣಿಗೆಯಲ್ಲಿ ಪರ್ಯಾಯ ದರ್ಬಾರು ನಡೆಯುವ ರಾಜಾಂಗಣಕ್ಕೆ ಬಂದರು.

ರಾಜಾಂಗಣದಲ್ಲಿ ಶೀರೂರು ಮಠದ ಮೊದಲ ಯತಿಗಳಾದ ಶ್ರೀವಾಮನ ತೀರ್ಥರ ಹೆಸರಿನ ವೇದಿಕೆಯನ್ನು ವಿಜಯನಗರದ ಹಂಪಿನ ಕಲಾವೈಭವದಲ್ಲಿ ನಿರ್ಮಿಸಲಾಗಿದ್ದು, ಇದರಲ್ಲಿ ಸಾರ್ವಜನಿಕರೊಂದಿಗೆ ನಡೆಯುವ ಪರ್ಯಾಯ ದರ್ಬಾರ್ ಏಳು ಮಠಗಳ ಎಂಟು ಮಂದಿ ಯತಿಗಳ ಉಪಸ್ಥಿತಿಯಲ್ಲಿ ಆರಂಭಗೊಂಡಿತು.

ಪರ್ಯಾಯ ಶ್ರೀವೇದವರ್ಧನ ತೀರ್ಥರೊಂದಿಗೆ ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥರು, ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥರು, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭ ತೀರ್ಥರು, ಸೋದೆ ಮಠದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀಈಶಪ್ರಿಯ ತೀರ್ಥರು ಹಾಗೂ ಪಲಿಮಾರು ಮಠದ ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರ ತೀರ್ಥರು ದರ್ಬಾರಿನಲ್ಲಿ ಭಾಗವಹಿಸಿದರು.

ಆದರೆ ಪರ್ಯಾಯದಿಂದ ನಿರ್ಗಮಿಸುತ್ತಿರುವ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ, ಕಿರಿಯ ಯತಿ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಇಲ್ಲಿ ಭಾಗವಹಿಸಲಿಲ್ಲ. ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥರು ಎಂದಿನಂತೆ ದರ್ಬಾರಿಗೆ ಗೈರುಹಾಜರಾಗಿದ್ದರು.

ಪರ್ಯಾಯ ಪೀಠಾರೋಹಣಕ್ಕೆ ತಿರುಪತಿ, ಶ್ರೀರಂಗಂ, ಕಂಚಿ, ಕುಂಭಕೋಣಂ, ಭದ್ರಾಚಲಂ, ಮಂತ್ರಾಲಯ, ಧರ್ಮಸ್ಥಳ, ಹೊರನಾಡು, ಕಟೀಲು, ಆನೆಗುಡ್ಡೆಗಳಿಂದ ಪ್ರಸಾದ ರೂಪದಲ್ಲಿ ಕಾಣಿಕೆ ಹಾಗೂ ಇತರ ವಸ್ತುಗಳನ್ನು ಅಲ್ಲಿನ ಪ್ರತಿನಿಧಿಗಳು ಅರ್ಪಿಸಿದರು.

ಪರ್ಯಾಯ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸೇರಿದಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಕೊನೆಯಲ್ಲಿ ಪರ್ಯಾಯ ಮಠದ ನೂತನ ಅಧಿಕಾರಿವರ್ಗವನ್ನು ಪ್ರಕಟಿಸಲಾಯಿತು. ಮಠದ ವತಿಯಿಂದ ಮೂವರು ವಿದ್ವಾಂಸರನ್ನು ಸನ್ಮಾನಿಸಲಾಯಿತು. ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಶಾಸಕ ಯಶಪಾಲ್ ಸುವರ್ಣ ಸ್ವಾಗತಿಸಿದರೆ, ಸಂಸ್ಕೃತ ಕಾಲೇಜಿನ ಪ್ರಾಧ್ಯಾಪಕ ಡಾ.ಅಮೃತೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.











Tags

UdupiSrivedavardhanaTheerthaascension
share
ವಾರ್ತಾಭಾರತಿ
ವಾರ್ತಾಭಾರತಿ
Next Story
X