Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಗ್ರಾಮ ಆಡಳಿತಾಧಿಕಾರಿಗಳಿಂದ...

ಉಡುಪಿ: ಗ್ರಾಮ ಆಡಳಿತಾಧಿಕಾರಿಗಳಿಂದ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ26 Sept 2024 9:59 PM IST
share
ಉಡುಪಿ: ಗ್ರಾಮ ಆಡಳಿತಾಧಿಕಾರಿಗಳಿಂದ ಮುಷ್ಕರ

ಉಡುಪಿ, ಸೆ.26: ಉಡುಪಿ ಜಿಲ್ಲೆಯಲ್ಲಿರುವ 175 ಮಂದಿ ಗ್ರಾಮ ಆಡಳಿತಾಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆ ಈಡೇರಿಸುವಂತೆ ಸರಕಾರವನ್ನು ಒತ್ತಾಯಿಸಿ ಉಡುಪಿ ಮಿನಿ ವಿಧಾನಸೌಧದ ಎದುರು ಇಂದಿನಿಂದ ಅನಿರ್ಧಿಷ್ಟಾವಧಿ ಮುಷ್ಕರ ಪ್ರಾರಂಭಿಸಿದ್ದಾರೆ.

ರಾಜ್ಯ ಗ್ರಾಮ ಆಡಳಿತಾಧಿಕಾರಿಗಳಿಗೆ ಸುಸಜ್ಜಿತ ಕಚೇರಿ ಹಾಗೂ ಮೂಲಭೂತ ಸೌಲಭ್ಯ, ಸೇವಾ ಸೌಲಭ್ಯ, ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸೀಮ್ ಮತ್ತು ಡೇಟಾ, ಮೊಬೈಲ್ ಆ್ಯಪ್‌ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೇರಲಾಗುವ ಒತ್ತಡವನ್ನು ನಿಲ್ಲಿಸುವ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಜಿಲ್ಲೆಯ 7 ತಾಲೂಕಿನಲ್ಲಿ ಎಲ್ಲಾ ಬಗೆಯ ಮೊಬೈಲ್ ಆ್ಯಪ್ ಹಾಗೂ ಅಪ್ಲಿಕೇಶನ್ ಸೇವೆಯನ್ನು ಸ್ಥಗಿತಗೊಳಿಸಿ ಉಡುಪಿ ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳು ಗುರುವಾರ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡರು.

ಜಿಲ್ಲೆಯಲ್ಲಿ ಸದ್ಯ ಚುನಾವಣಾ ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಆಯಾಯ ತಾಲೂಕು ಕಚೇರಿಯ ಮುಂಭಾಗ ಕಪ್ಪು ಪಟ್ಟಿ ಧರಿಸಿ ಸರಕಾರದ ವಿರುದ್ಧ ಮೌನ ಮುಷ್ಕರ ಪ್ರಾರಂಭಿಸಿದ್ದಾರೆ.

ಉಡುಪಿ ತಾಲೂಕು ಸಮಿತಿ ಅಧ್ಯಕ್ಷ ಕಾರ್ತಿಕೇಯ್ ಭಟ್ ಮಾತನಾಡಿ, ರಾಜ್ಯ ಸಮಿತಿಯ ಸೂಚನೆಯಂತೆ ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ಹಮ್ಮಿಕೊಂಡಿದ್ದು, ನಮ್ಮ ಬೇಡಿಕೆಗೆ ಸ್ಪಂದನೆ ಸಿಗದೇ ಹೋದರೆ ಸೆ. 27ರಂದು ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಬೃಹತ್ ಮಟ್ಟದಲ್ಲಿ ಮುಷ್ಕರವನ್ನು ಹಮ್ಮಿಕೊಳ್ಳಲಾ ಗುವುದು ಎಂದರು.

ಜಿಲ್ಲೆಯಲ್ಲಿ 175 ಮಂದಿ ಗ್ರಾಮ ಆಡಳಿತಾಧಿಕಾರಿಗಳಿದ್ದು, 101 ಮಂದಿ ಗ್ರಾಮ ಪಂಚಾಯಿತಿನಲ್ಲಿ ಉಳಿದ 74 ಮಂದಿ ಎಸಿ, ಡಿಸಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಬೇಡಿಕೆ ಇರುವಷ್ಟು ಸಿಬ್ಬಂದಿಗಳಿಲ್ಲ. ಕೆಲಸದೊತ್ತಡದ ನಡುವೆಯೇ ಜನರಿಗೆ ಸೇವೆಯನ್ನು ನೀಡುತ್ತಿದ್ದು, ಸರಕಾರದ ಸ್ಪಂದನೆ ಇಲ್ಲದೇ ಇರುವುದರಿಂದ ಸೆ.22ರಿಂದ ಮೊಬೈಲ್ ಆ್ಯಪ್‌ನ 21 ಸೇವೆಯನ್ನು ಸ್ಥಗಿತಗೊಳಿಸಿದ್ದೇವೆ. ನಮ್ಮ ನ್ಯಾಯಯುತವಾದ ಬೇಡಿಕೆಗೆ ಸೂಕ್ತ ಸ್ಪಂದನೆ ಸಿಗದೇ ಹೋದರೆ ಹೋರಾಟ ಇನ್ನಷ್ಟು ತೀವ್ರವಾಗಲಿದೆ ಎಂದರು.

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ನಿಗದಿಪಡಿಸಬೇಕು. ಗುಣಮಟ್ಟದ ಟೇಬಲ್, ಕುರ್ಚಿ, ಗೂಗಲ್ ಕ್ರೋಮ್ ಬುಕ್/ಲ್ಯಾಪ್‌ಟಾಪ್, ಪ್ರಿಂಟರ್, ಸ್ಕ್ಯಾನರ್ ಸಹಿತ ಮೂಲಭೂತ ಸೌಲಭ್ಯ ನೀಡಬೇಕು. ಸೇವಾ ವಿಷಯಗಳಿಗೆ ಸಂಬಂಸಿ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿದರು.

ಉಡುಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷೆ ರೇಷ್ಮಾ, ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಡಿ.ಎಚ್., ಹಿರಿಯ ಗ್ರಾಮ ಲೆಕ್ಕಾಧಿಕಾರಿ ಸುಧಾಕರ್, ಗುರುಪ್ರಸಾದ್, ಪುನೀತ್ ಸಹಿತ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X