Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಮನೆ, ದೇವಸ್ಥಾನದಲ್ಲಿ ಕಳವು...

ಉಡುಪಿ | ಮನೆ, ದೇವಸ್ಥಾನದಲ್ಲಿ ಕಳವು ಪ್ರಕರಣ: ಶಿವಮೊಗ್ಗ ಮೂಲದ ಇಬ್ಬರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ15 Sept 2026 9:43 AM IST
share
ಉಡುಪಿ | ಮನೆ, ದೇವಸ್ಥಾನದಲ್ಲಿ ಕಳವು ಪ್ರಕರಣ: ಶಿವಮೊಗ್ಗ ಮೂಲದ ಇಬ್ಬರು ಆರೋಪಿಗಳ ಬಂಧನ

ಕುಂದಾಪುರ: ಅಮಾಸೆಬೈಲು ಠಾಣಾ ವ್ಯಾಪ್ತಿಯಲ್ಲಿ ನಡೆದ ವಾಸದ ಮನೆ ಕಳವು ಹಾಗೂ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದೇವಸ್ಥಾನದ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಶಿಕಾರಿಪುರ ಮೂಲದ ಇಬ್ಬರು ಆರೋಪಿಗಳನ್ನು ಉಡುಪಿ ಜಿಲ್ಲಾ ಪೊಲೀಸರ ತಂಡ ಬಂಧಿಸಿದೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಮೂಲದ ರಾಕೇಶ್‌ ಹೆಚ್. (28) ನಂದೀಶ ಎಂ(24) ಎನ್ನುವರನ್ನು ಪತ್ತೆ ಮಾಡಿ ಹುಲಿಕಲ್‌ ಘಾಟ್‌ ಸಮೀಪ ಬಂಧಿಸಿದ್ದು ಅವರಿಂದ ಕಳ್ಳತನಗೈದ 1 ಲಕ್ಷ 19 ಸಾವಿರದ 720 ರೂ. ನಗದು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

1ನೇ ಪ್ರಕರಣದ ವಿವರ: ಕುಂದಾಪುರ ತಾಲೂಕಿನ ಮಚ್ಚಟ್ಟು ಗ್ರಾಮದ ಜಾಂಬೂರು ಜೆಡ್ಡು ನೆಲ್ಲಿಗದ್ದೆ ಎಂಬಲ್ಲಿನ ಮನೆಯೊಂದರಲ್ಲಿ ಸೆ.4 ರಂದು ಮನೆಯವರು ಪ್ಯಾಕ್ಟರಿ ಕೆಲಸಕ್ಕೆ ಹೋಗಿದ್ದಾಗ ಬಾಗಿಲಿನ ಬೀಗವನ್ನು ಮುರಿದು ಗಾದ್ರೆಜ್‌ನಲ್ಲಿದ್ದ 97,000 ರೂಪಾಯಿ ನಗದು ಹಣವನ್ನು ಕಳವು ಮಾಡಿದ ಬಗ್ಗೆ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

2ನೇ ಪ್ರಕರಣದ ವಿವರ: ಶಂಕರನಾರಾಯಾಣ ಠಾಣೆ ವ್ಯಾಪ್ತಿಯ ಕುಳ್ಳುಂಜೆ ಗ್ರಾಮ ಮುಂಡುಕೋಡು ಶ್ರೀ ಜಲದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿದ್ದ ಕಾಣಿಕೆ ಹುಂಡಿಯನ್ನು ಒಡೆದು ಸುಮಾರು 35 ರಿಂದ 40 ಸಾವಿರ ಹಣವನ್ನು ಕಳವು ಮಾಡಿದ ಬಗ್ಗೆ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಶೇಷ ತಂಡ ರಚನೆ: ಆರೋಪಿಗಳ ಪತ್ತೆಯ ಕಾರ್ಯದಲ್ಲಿ ಕುಂದಾಪುರ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ವೃತ್ತ ನಿರೀಕ್ಷರಾದ ಸಂತೋಷ್‌ ಕಾಯ್ಕಣಿ ನೇತೃತ್ವದಲ್ಲಿ ಅಮಾಸೆಬೈಲು ಠಾಣಾ ಪಿಎಸ್ಐ ಭೀಮಾಶಂಕರ್‌ ಸಿನ್ನೂರ್‌, ತನಿಖಾ ಪಿಎಸ್ಐ ಸುಧಾರಾಣಿ ಟಿ., ಶಂಕರನಾರಾಯಣ ಠಾಣೆ ಪಿಎಸ್ಐ ಯೂನಸ್‌ ಗಡ್ಡೇಕರ್‌ ಅವರನ್ನೊಳಗೊಂಡ ಅಪರಾಧ ತಂಡದ ಎಎಸ್ಐ ಚಂದ್ರಶೇಖರ ಶೆಟ್ಟಿ, ಸಿಬ್ಬಂದಿಗಳಾದ ರಾಘವೇಂದ್ರ, ನವೀನ್‌ ಕುಮಾರ್‌, ಸುಧಾಕರ, ದಿನೇಶ, ಸಚಿನ್‌ ಕುಲಾಲ್‌, ಮಂಜುನಾಥ, ಜಯರಾಮ ನಾಯ್ಕ, ಚೇತನ್‌ ಕುಮಾರ್‌ ತಂಡ ಶೀಘ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X