ಉಡುಪಿ: ಕೃಷ್ಣ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.
ಬಳಿಕ ಅವರು ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಅಡುಗೆ ಕೋಣೆ(ಪಾಯದ ಕೋಣೆ)ಯನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ಉಡುಪಿ ಶಾಸಕ ಯಶಪಾಲ್ ಸುವರ್ಣ ಹಾಗೂ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ,ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.
Next Story






