ಉಡುಪಿ | ನ.29ರಂದು ಉಪಾಧ್ಯಾಯ ದಂಪತಿ ಪ್ರಶಸ್ತಿ ಪ್ರದಾನ

ಉಡುಪಿ, ನ.26: ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಮಣಿಪಾಲ ಇವರ ಸಹಯೋಗದಲ್ಲಿ ಹಿರಿಯ ವಿದ್ವಾಂಸರಾದ ಡಾ.ಯು.ಪಿ ಉಪಾಧ್ಯಾಯ ಮತ್ತು ಡಾ. ಸುಶೀಲಾ ಪಿ. ಉಪಾಧ್ಯಾಯ ದಂಪತಿ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನ.29ರ ಶನಿವಾರ ಎಂ.ಜಿ.ಎಂ.ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ.
ಪ್ರಶಸ್ತಿಯನ್ನು ಹಿರಿಯ ಗಮಕ ವ್ಯಾಖ್ಯಾನಕಾರ ಮತ್ತು ಅಷ್ಟಾವಧಾನಿ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ಅವರಿಗೆ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ವಹಿಸಲಿದ್ದಾರೆ. ಹಿರಿಯ ವಿದ್ವಾಂಸ ಡಾ.ಎನ್.ತಿರುಮಲೇಶ್ವರ ಭಟ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಡಾ. ಪದ್ಮನಾಭ ಕೇಕುಣ್ಣಾಯ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಲಿರುವರು.
ಇದೇ ಸಂದರ್ಭದಲ್ಲಿ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಾರಕೂರು ಮೂಡುಕೇರಿ ಗಂಗಮ್ಮ ರಾಮಚಂದ್ರ ಶಾಸ್ತ್ರಿ ಸ್ಮರಣಾರ್ಥ ಉಡುಪಿ ಜಿಲ್ಲಾ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





