ಉಡುಪಿ | ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಿಂದ ಪರ್ಯಾಯ ಪುತ್ತಿಗೆ ಮಠದ ಶ್ರೀಪಾದರ ಭೇಟಿ

ಉಡುಪಿ, ನ.26: ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಅವರು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀಪಾದರನ್ನು ಗೀತಾಮಂದಿರದಲ್ಲಿ ಭೇಟಿ ಮಾಡಿ, ಜಿಲ್ಲೆಯ ಅಭಿವೃದ್ಧಿ ಹಾಗೂ ಸೌಹಾರ್ದತೆ ಬಗ್ಗೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕ್ರೈಸ್ತ ಅಭಿವೃದ್ದಿ ನಿಗಮದ ನಿರ್ದೇಶಕ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷ ಪ್ರಶಾಂತ್ ಜತ್ತನ್ನ, ಗ್ಯಾರಂಟಿ ಯೋಜನೆ ಸದಸ್ಯರಾದ ಡಾ.ಸಂತೋಷ್ ಕುಮಾರ್ ಬೈರಂಪಳಿ ಹಾಗೂ ಇತರರು ಉಪಸ್ಥಿತರಿದ್ದರು.
Next Story





