Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ಧರ್ಮಸ್ಥಳ ಸ್ವಸಹಾಯ ಸಂಘದ...

ಉಡುಪಿ | ಧರ್ಮಸ್ಥಳ ಸ್ವಸಹಾಯ ಸಂಘದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ6 Sept 2025 12:38 PM IST
share
ಉಡುಪಿ | ಧರ್ಮಸ್ಥಳ ಸ್ವಸಹಾಯ ಸಂಘದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು

ಉಡುಪಿ, ಸೆ.4: ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಬಿಜೆಪಿ ಮುಖಂಡ ಹಾಗೂ ರಟ್ಟಾಡಿ ಶ್ರೀರಟ್ಟೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮುಖ್ಯಸ್ಥ ನವೀನ್ ಚಂದ್ರ ಶೆಟ್ಟಿ ರಟ್ಟಾಡಿ ವಿರುದ್ಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.5ರಂದು ನಡೆಯಲಿದ್ದ ಧರ್ಮಸ್ಥಳದ ಧರ್ಮ ಸಂರಕ್ಷಣಾ‌ ಯಾತ್ರೆಯ ಸಭೆಯ ಆಮಂತ್ರಣ ಪತ್ರಿಕೆ ನೀಡುವ ಕುರಿತು ರಟ್ಟಾಡಿ ಶ್ರೀರಟ್ಟೆಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮುಖ್ಯಸ್ಥ ಹಾಗೂ ಬಿಜೆಪಿ ಮುಖಂಡ ನವೀನಚಂದ್ರ ಶೆಟ್ಟಿ ರಟ್ಟಾಡಿ ಅವರಿಗೆ ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ 29ರ ಹರೆಯದ ರಟ್ಟಾಡಿ ಗ್ರಾಮದ ಮಹಿಳೆ ಸೆ.2ರಂದು ಕರೆ ಮಾಡಿದ್ದರು.

ಈ ವೇಳೆ ನವೀನ್‌ಚಂದ್ರ ಶೆಟ್ಟಿ ತಾನು ಮನೆಯಲ್ಲಿರುವುದಾಗಿ ಹೇಳಿದ್ದು, ಮಧ್ಯಾಹ್ನ 1ಗಂಟೆಯೊಳಗೆ ಮನೆಗೆ ಬರುವಂತೆ ತಿಳಿಸಿದರು. ಅದರಂತೆ ಮಹಿಳೆ ಮಧ್ಯಾಹ್ನ 12ಗಂಟೆಯ ಸುಮಾರಿಗೆ ರಟ್ಟಾಡಿ ಗ್ರಾಮದ ಮಣಿಮಕ್ಕಿ ಎಂಬಲ್ಲಿರುವ ನವೀನ್‌ಚಂದ್ರ ಶೆಟ್ಟಿಯ ಮನೆಗೆ ಹೋಗಿದ್ದು, ಅಲ್ಲಿ ನವೀನ್ ಚಂದ್ರ ಶೆಟ್ಟಿ ಜಗುಲಿಯ ಕುರ್ಚಿಯಲ್ಲಿ ಕುಳಿತ್ತಿದ್ದರು. ಈ ವೇಳೆ ಮಹಿಳೆ ಆಮಂತ್ರಣ ಪತ್ರಿಕೆಯನ್ನು ನವೀನ್‌ಚಂದ್ರ ಶೆಟ್ಟಿಯ ಕೈಗೆ ಕೊಟ್ಟಾಗ ಆತ ಮಹಿಳೆಯ ಕೈಯನ್ನು ಸ್ವರ್ಶಿಸಿ ಆಹ್ವಾನ ಪತ್ರಿಕೆ ತೆಗೆದುಕೊಂಡನು. ಇದರಿಂದ ಮಹಿಳೆಗೆ ಮುಜುಗರ ಉಂಟಾಗಿತ್ತೆಂದು ದೂರಿನಲ್ಲಿ ತಿಳಿಸಲಾಗಿದೆ.

ನಂತರ ಮಹಿಳೆ ಹೊರಡಲು ಸಿದ್ಧರಾದಾಗ ನವೀನ್‌ಚಂದ್ರ ಶೆಟ್ಟಿ ಎರಡು ನಿಮಿಷ ನಿಲ್ಲುವಂತೆ ಒತ್ತಾಯಿಸಿ, ಮಹಿಳೆ ಕುಳಿತ ಸೋಪಾದ ಪಕ್ಕದಲ್ಲಿ ಬಂದು ಕುಳಿತು, ಮಹಿಳೆಯನ್ನು ಹತ್ತಿರಕ್ಕೆ ಎಳೆದುಕೊಂಡು ಕೆನ್ನೆಗೆ ಮುತ್ತು ಕೊಟ್ಟಿರುವುದಾಗಿ ದೂರಲಾಗಿದೆ. ಇದರಿಂದ ಗಾಬರಿಗೊಂಡ ಮಹಿಳೆ ಅಲ್ಲಿಂದ ತಕ್ಷಣ ಎದ್ದು ಹೊರ ಬರುತ್ತಿರುವಾಗ, ನವೀನ್‌ಚಂದ್ರ ಶೆಟ್ಟಿ, ವಾಪಾಸು ಮನೆಗೆ ಬರುವಂತೆ ಹೇಳುತ್ತಾ ಹಿಂಬಾಲಿಸಿಕೊಂಡು ಬಂದಿರುವುದಾಗಿ ದೂರಲಾಗಿದೆ.

ಆರೋಪಿ ಬಂಧನಕ್ಕೆ ಸಿಪಿಎಂ ಆಗ್ರಹ :

ಅಮಾಸೆಬೈಲು ಮಾಜಿ ತಾಲೂಕು ಪಂಚಾಯತ್ ಸದಸ್ಯ ಹಾಗೂ ಧರ್ಮಸ್ಥಳ ಯೋಜನೆಯ ಜನಜಾಗೃತಿ ಸಮಿತಿಯ ಉಡುಪಿ ಜಿಲ್ಲಾ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ನವೀನ್ ಚಂದ್ರಶೆಟ್ಟಿ ಅಮಾಸೆಬೈಲು ಧರ್ಮಸ್ಥಳ ಸಂಘದ ಸದಸ್ಯೆಯನ್ನು ಧರ್ಮ ರಕ್ಷಣೆಯ ಕೆಲಸದ ಮೇಲೆ ಶುಕ್ರವಾರ ಮನೆಗೆ ಕರೆಯಿಸಿ ಮಾನಭಂಗಕ್ಕೆ ಯತ್ನಿಸಿರುವುದನ್ನು ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ಖಂಡಿಸಿದೆ.

ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ಆರೋಪಿ ನವೀನ್ ಚಂದ್ರಶೆಟ್ಟಿ ಪರ ನಿಂತು ಪಂಚಾಯಿತಿ ಮಾಡಲು ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿರುವುದು ತಿಳಿದುಬಂದಿದೆ. ಇದು ಖಂಡನೀಯವಾಗಿದ್ದು, ಆರೋಪಿ ನವೀನ್ ಚಂದ್ರ ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿದೆ. ಸ್ವತಃ ಸಂತ್ರಸ್ತ ಮಹಿಳೆಯೇ ದೂರು ನೀಡಿರುವುದರಿಂದ ತಕ್ಷಣವೇ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಬೇಕು. ಆ ಮೂಲಕ ಮಹಿಳೆಗೆ ನ್ಯಾಯ ಒದಗಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X