ಉಡುಪಿ: ಮಹಿಳೆ ನಾಪತ್ತೆ

ಉಡುಪಿ, ನ.7: ಕಾಪು ತಾಲೂಕು ಕೊಪ್ಪಲಂಗಡಿ ಫ್ಲಾಟ್‌ವೊಂದರಲ್ಲಿ ವಾಸವಿದ್ದ ನೂರ್‌ಬಾನು (35) ಎಂಬ ಮಹಿಳೆ ಅಕ್ಟೋಬರ್ 29ರಂದು ಮಧ್ಯಾಹ್ನದ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 2 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, 2526709, ಕಾರ್ಕಳ ಉಪವಿಭಾಗ ಪೊಲೀಸ್ ಉಪಾಧೀಕ್ಷಕರ ಕಛೇರಿ ದೂ.ಸಂಖ್ಯೆ: 08258- 231333, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820- 2572333, ಮೊ.ನಂ: 9480805431, ಕಾಪು ಪೊಲೀಸ್ ಠಾಣೆ ಉಪ ನಿರೀಕ್ಷಕರು ದೂ.ಸಂಖ್ಯೆ: 0820-2551033, ಮೊ.ನಂ: 9480805449 ಅನ್ನು ಸಂಪರ್ಕಿಸಬಹುದು ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





