Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ಹೃದಯಾಘಾತದಿಂದ ಯಕ್ಷಗಾನ ಕಲಾವಿದ...

Udupi | ಹೃದಯಾಘಾತದಿಂದ ಯಕ್ಷಗಾನ ಕಲಾವಿದ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ20 Nov 2025 12:45 PM IST
share
Udupi | ಹೃದಯಾಘಾತದಿಂದ ಯಕ್ಷಗಾನ ಕಲಾವಿದ ಮೃತ್ಯು

ಉಡುಪಿ: ರಂಗಸ್ಥಳದಲ್ಲಿ ವೇಷ ನಿರ್ವಹಿಸಿ ಚೌಕಿಗೆ ಮರಳಿ ಬಣ್ಣ ತೆಗೆಯುವ ಮೊದಲೇ ಮಹಿಷಾಸುರ ಪಾತ್ರಧಾರಿ ತೀವ್ರ ಹೃದಯಾಘಾತ ದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ರಾತ್ರಿ ಕುಂದಾಪುರದ ಸೌಡದ ಸಮೀಪ ಮಂದಾರ್ತಿ ಮೇಳದ ಯಕ್ಷಗಾನ ಪ್ರದರ್ಶನದ ವೇಳೆ ನಡೆದಿದೆ.

ಮಂದಾರ್ತಿ ಶ್ರೀದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಎರಡನೇ ಮೇಳದ ಪ್ರದರ್ಶನ ನಿನ್ನೆ ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಮಾಲಾಡಿಯಲ್ಲಿ ನಡೆದಿದ್ದು, ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ನೆಮ್ಮಾರ್ (51) ಮಹಿಷಾಸುರ ಪಾತ್ರ ನಿರ್ವಹಿಸಿ ಚೌಕಿಗೆ ಬಂದು ಹೃದಯಾಘಾತದಿಂದ ಕುಸಿದು ಮೃತಪಟ್ಟ ಕಲಾವಿದ.

ಬುಧವಾರ ಮಧ್ಯ ರಾತ್ರಿ ಬಳಿಕ ಕುಂದಾಪುರದ ಸೌಡ ಸಮೀಪ ಈ ಘಟನೆ ನಡೆದಿದೆ. 2ನೇ ಮೇಳದ ಪ್ರತಿಭಾನ್ವಿತ ಕಲಾವಿದರಾದ ಈಶ್ವರ ಗೌಡ ಶೃಂಗೇರಿ ತಾಲೂಕಿನ ನೆಮ್ಮಾರ್ ನಿವಾಸಿ. ಈಶ್ವರ ಗೌಡ ಅವರು ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿ ಚೌಕಿಗೆ ಬಂದು ಸಂಪೂರ್ಣ ವೇಷ ಕಳಚುವ ಮೊದಲೇ ಹೃದಯಾಘಾತದಿಂದ ಕುಸಿದಿದ್ದಾರೆ. ಸಹಕಲಾವಿದರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗಾಗಲೇ ಅವರು ಇಹಲೋಕ ತ್ಯಜಿಸಿದ್ದರು. ಈಶ್ವರ ಗೌಡ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಲಾವಿದ ಈಶ್ವರ ಗೌಡರು ಶಿವರಾಜಪುರ, ಮೇಗರವಳ್ಳಿ, ಮಡಾಮಕ್ಕಿ, ಅಮೃತೇಶ್ವರೀ, ಮಂದಾರ್ತಿ ಮೇಳಗಳಲ್ಲಿ ಸುಮಾರು ಮೂರು ದಶಕಗಳಿಂದ ಕಲಾಸೇವೆ ಮಾಡುತ್ತಾ ಬಂದಿದ್ದು, ಪೌರಾಣಿಕ ಪಾತ್ರಗಳನ್ನು ಸಮರ್ಥವಾಗಿ ರಂಗದಲ್ಲಿ ಪ್ರಸ್ತುತಗೊಳಿಸುವ ಕಲಾಸಿದ್ಧಿ ಪಡೆದಿದ್ದರು.

ಈಶ್ವರ ಗೌಡರ ನಿಧನಕ್ಕೆ ಉಡುಪಿ ಯಕ್ಷಗಾನ ಕಲಾರಂಗ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X