Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Udupi | ಯಕ್ಷಗಾನದಿಂದ ಭಾಷೆ, ಆರೋಗ್ಯ,...

Udupi | ಯಕ್ಷಗಾನದಿಂದ ಭಾಷೆ, ಆರೋಗ್ಯ, ಭವಿಷ್ಯಕ್ಕೆ ಒಳಿತು : ಎಂ.ಎಲ್.ಸಾಮಗ

‘ಯಕ್ಷಪಥ -ಚಿಣ್ಣರ ಯಕ್ಷ ಹೆಜ್ಜೆ’ ಕಲಿಕಾ ಶಿಬಿರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Oct 2026 5:36 PM IST
share
Udupi | ಯಕ್ಷಗಾನದಿಂದ ಭಾಷೆ, ಆರೋಗ್ಯ, ಭವಿಷ್ಯಕ್ಕೆ ಒಳಿತು : ಎಂ.ಎಲ್.ಸಾಮಗ

ಉಡುಪಿ : ಯಕ್ಷಗಾನದಂತಹ ಅದ್ಭುತ ಕಲೆ ಜಗತ್ತಿನಲ್ಲಿ ಎಲ್ಲೂ ಇಲ್ಲ. ಇದರಲ್ಲಿ ನೃತ್ಯ, ವೇಷಭೂಷಣ, ಗಾಯನ ಹಾಗೂ ಮಾತುಗಾರಿಕೆಯ ಅಪೂರ್ವ ಸಂಗಮವಿದೆ. ಈ ಕಲೆಯಿಂದ ಶರೀರ ಮತ್ತು ಬುದ್ಧಿಗೆ ಉತ್ತಮ ಕಸರತ್ತು ಸಿಗಲಿದ್ದು, ಆರೋಗ್ಯಕ್ಕೂ ಇದು ಬಹಳ ಒಳ್ಳೆಯದು ಎಂದು ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಎಲ್.ಸಾಮಗ ಹೇಳಿದ್ದಾರೆ.

ಸುಮನಸಾ ಕೊಡವೂರು ಸಂಸ್ಥೆಯ ರಜತ ಸಂಭ್ರಮದ ಸರಣಿ ಕಾರ್ಯಕ್ರಮಗಳ ಅಂಗವಾಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಯಕ್ಷರಂಗದ ಸವ್ಯಸಾಚಿ ದಿವಂಗತ ಜಯಂತ್ ಕುಮಾರ್ ತೋನ್ಸೆ ಸ್ಮರಣೆಯಲ್ಲಿ ಕೊಡವೂರು ವಿಪ್ರಶ್ರೀ ಕಲಾಭವನದಲ್ಲಿ ಆಯೋಜಿಸಲಾದ ಯಕ್ಷಪಥ -ಚಿಣ್ಣರ ಯಕ್ಷ ಹೆಜ್ಜೆ’ ಕಲಿಕಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇಂದು ಜಗತ್ತಿನಾದ್ಯಂತ ಯಕ್ಷಗಾನ ತಂಡಗಳಿದ್ದು, ಈ ಕಲೆಯನ್ನು ಕರಗತ ಮಾಡಿಕೊಂಡರೆ ವಿದೇಶಗಳಲ್ಲೂ ಅವಕಾಶ ಸಿಗಲಿದೆ. ನಿಮ್ಮ ಭವಿಷ್ಯಕ್ಕೂ ಒಳ್ಳೆಯದು. ಯಕ್ಷಗಾನ ಕಲಿಕೆಯಿಂದ ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಮತ್ತು ಚಂದವಾಗಿ ಮಾತನಾಡಲು ಸಾಧ್ಯವಾಗುತ್ತದೆ ಎಂದರು.

ವಿದ್ಯಾರ್ಥಿಗಳು ಬಹಳ ಆಸಕ್ತಿಯಿಂದ ಯಕ್ಷಗಾನ ಕಲಿಯಬೇಕು. ಹಿಂದಿನ ದಿನ ಕಲಿಸಿದ್ದನ್ನು ಸ್ವತಃ ಅಭ್ಯಾಸ ಮಾಡಿ, ಗುರುಗಳಿಂದ ಕೇಳಿ ತಿಳಿದುಕೊಳ್ಳಿ. ಯಕ್ಷಗಾನದಲ್ಲಿ ಕಥೆಗಳನ್ನು ತಿಳಿಯುವುದರಿಂದ ಅಜ್ಜಿ-ಅಮ್ಮ ಕಥೆ ಹೇಳುವ ಅಗತ್ಯವೇ ಬರುವುದಿಲ್ಲ. ಕೇವಲ ಒಂದು ಪ್ರದರ್ಶನ ನೀಡಿ, ಫೋಟೋ ಹಾಕಿಕೊಂಡು ಕಲಿಕೆಯನ್ನು ನಿಲ್ಲಿಸಬಾರದು. ಇತರರ ಅಭಿನಯವನ್ನು ಗಮನಿಸುತ್ತಾ ಯಕ್ಷ ಕಲಿಕೆಯನ್ನು ನಿರಂತರವಾಗಿ ಮುಂದುವರಿಸಬೇಕು ಎಂದು ಅವರು ತಿಳಿಸಿದರು.

ಶಿಬಿರದ ಗುರುಗಳಾದ ಶೈಲೇಶ್ ತೀರ್ಥಹಳ್ಳಿ, ಸಂಸ್ಥೆಯ ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು, ಗೌರವಾಧ್ಯಕ್ಷ ಎಂ.ಎಸ್.ಭಟ್, ಸಂಚಾಲಕ ಭಾಸ್ಕರ್ ಪಾಲನ್ ಹಾಗೂ ಶಿಬಿರದ ಸಂಯೋಜಕ ಅಕ್ಷತ್ ಅಮೀನ್, ಕಾರ್ಯದರ್ಶಿ ಚಂದ್ರಕಾಂತ್ ಕುಂದರ್ ಉಪಸ್ಥಿತರಿದ್ದರು.

Tags

HealthLanguageYakshaganaUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X