ಉಡುಪಿ | ಸಾಧಕ ಕಲಾವಿದರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ

ಉಡುಪಿ, ನ.23: ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ನೀಡುವ ಯಕ್ಷಗಾನ ಕಲಾರಂಗದ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಸವಾರಂಭವು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ರವಿವಾರ ಜರಗಿತು.
ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಹಿಸಿದ್ದರು. ಅಂಬಲಪಾಡಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ನ ಅಧ್ಯಕ್ಷ ಜಿ.ಶಂಕರ್ ಪ್ರಶಸ್ತಿ ಪ್ರದಾನ ಮಾಡಿ, ಶುಭಹಾರೈಸಿದರು.
ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕ ಎಂ.ರಾವೇಂದ್ರ ಭಟ್ ಶುಭಾಶಂಸನೆಗೈದರು. ಮುಖ್ಯ ಅತಿಥಿಗಳಾಗಿ ಕಾರ್ಕಳ ಯಕ್ಷರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ, ಬೆಂಗಳೂರು ಉದ್ಯಮಿ ಹರೀಶ್ ರಾಯಸ್, ಬೆಂಗಳೂರಿನ ಡಾ.ಕಬ್ಯಾಡಿ ಹರಿರಾಮ ಆಚಾರ್ಯ, ಮಂದಾರ್ತಿ ಕೆ.ಎಂ.ಉಡುಪ, ಟ್ರಸ್ಟ್ ನ ವಿಶ್ವಸ್ಥ ಕೆ.ಮಹೇಶ್ ಉಡುಪ, ಅಡಿಕೆ ಪತ್ರಿಕೆಯ ಪ್ರಕಾಶಕ ಡಾ.ಪಡಾರು ರಾಮಕಷ್ಣ ಶಾಸ್ತ್ರಿ, ಲೀಲಾಕ್ಷ ಬಿ.ಕರ್ಕೇರ ಉಪಸ್ಥಿತರಿದ್ದರು.
ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ಕಲಾವಿದರನ್ನು ಪರಿಚಯಿಸಿದರು. ಸದಾಶಿವ ರಾವ್ ವಂದಿಸಿದರು.





