ಉಡುಪಿ | ಯುವತಿ ನಾಪತ್ತೆ

ಉಡುಪಿ, ನ.28: ಜಯಪುರ ಜಿಲ್ಲೆ ಚಡಚಣ ತಾಲೂಕು ದೇವರನಿಂಬರಗಿ ಮೂಲದ ಪ್ರಸ್ತುತ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪ್ರೇಮಾಂಜಲಿ (24) ಎಂಬ ಯುವತಿ ನ.24ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
4 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಗೆ ತಿಳಿಸುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story





