ಮುಕ್ತ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಉಮಾಶಂಕರ್ ಭೇಟಿ

ಉಡುಪಿ, ಜು.28: ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್ ಅವರು ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿದರು.
ಪ್ರಾದೇಶಿಕ ಕೇಂದ್ರದಲ್ಲಿ ನಡೆಯುತ್ತಿರುವ ಪ್ರವೇಶಾತಿಗಳು, ಪರೀಕ್ಷಾ ಕಾರ್ಯಗಳು, ಸಿದ್ದ ಪಾಠ ನಿರ್ವಹಣೆ ಮತ್ತು ಪ್ರವೇಶಾತಿ, ಪ್ರಚಾರ ವ್ಯವಸ್ಥೆ ಹಾಗೂ ದೂರ ಶಿಕ್ಷಣ ಕೋರ್ಸ್‌ಗಳ ಬಗ್ಗೆ ಪರಿಶೀಲನೆ ನಡೆಸಿದರು.
ಉಮಾಶಂಕರ್ ಜೊತೆ ಪ್ರಾದೇಶಿಕ ಕೇಂದ್ರದ ನಿರ್ದೇಶಕರಾದ ಡಾ.ಕೆ.ಪಿ.ಮಹಾಲಿಂಗು ಕಲ್ಕುಂದ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.
Next Story





