Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅನೈತಿಕ ಪೊಲೀಸ್‌ಗಿರಿಯನ್ನು ಎಂದಿಗೂ...

ಅನೈತಿಕ ಪೊಲೀಸ್‌ಗಿರಿಯನ್ನು ಎಂದಿಗೂ ಸಹಿಸಲ್ಲ, ಕಠಿಣ ಕಾನೂನು ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ22 Sept 2023 7:57 PM IST
share
ಅನೈತಿಕ ಪೊಲೀಸ್‌ಗಿರಿಯನ್ನು ಎಂದಿಗೂ ಸಹಿಸಲ್ಲ, ಕಠಿಣ ಕಾನೂನು ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಅನೈತಿಕ ಪೊಲೀಸ್‌ಗಿರಿಯನ್ನು ನಾವು ಯಾವತ್ತೂ ಸಹಿಸುವುದಿಲ್ಲ. ಅದರ ವಿರುದ್ಧ ಎಲ್ಲ ರೀತಿಯ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು. ಕಾನೂನಿಗೆ ತಲೆಬಾಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ಸುಪ್ರೀಂ ಕೋರ್ಟ್‌ನ ಆದೇಶವನ್ನು ನಾವು ಪಾಲಿಸಬೇಕಾಗಿದೆ. ಇಂತಹ ಹೊತ್ತಿ ನಲ್ಲಿ ನಾವು ಮಳೆಗಾಗಿ ಪ್ರಾರ್ಥಿಸಬೇಕು. ನಮ್ಮ ರಾಜ್ಯಕ್ಕೆ ಅನ್ಯಾಯ ಆಗಬಾರದು ಎಂಬುದು ನನ್ನ ನಿಲುವು ಎಂದರು.

ಕಾಂಗ್ರೆಸ್ ಎಂದಿಗೂ ಜನಪರವಾಗಿರುತ್ತದೆ. ನಾವು ಜನರನ್ನು ಬಿಟ್ಟು ಏನು ಮಾಡುವುದಿಲ್ಲ. ನಮ್ಮ ರಾಜ್ಯದ ಮುಖ್ಯಮಂತ್ರಿ ಮೂರು ದಿನ ದೆಹಲಿಯಲ್ಲಿದ್ದು, ಸಂಬಂಧಪಟ್ಟ ನೀರಾವರಿ ಸಚಿವರನ್ನು ಭೇಟಿಯಾಗಿ ಮನನಿ ಸಲ್ಲಿಸಿ ಬಂದಿದ್ದಾರೆ. ರಾಜ್ಯ ಸರಕಾರ ಈ ಬಗ್ಗೆ ಕೈಕಟ್ಟಿ ಕುಳಿತಿಲ್ಲ. ರಾಜ್ಯದ ರೈತರ ಹಿತ ಕಾಪಾಡುವ ಜವಾಬ್ದಾರಿ ನಮ್ಮ ಮೇಲೆ ಇದೆ. ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ವಾದ ಸರಿಯಾಗಿದೆಯೋ ಮಂಡನೆ ಸರಿಯಾಗಿಲ್ಲವೋ ಎಂಬು ಚರ್ಚೆ ಅಪ್ರಸ್ತುತ. ಮುಂದೆ ಏನಾಗಬೇಕು ಎಂಬುದಷ್ಟೇ ಸದ್ಯ ಚರ್ಚಿಸಬೇಕಾಗಿದೆ ಎಂದು ಅವರು ಹೇಳಿದರು.

ಮಹಿಳಾ ಮೀಸಲಾತಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಹಿಳಾ ಮೀಸಲಾತಿ ಮಸೂದೆಯನ್ನು ತಂದ ಪ್ರಧಾನಿ ಮೋದಿ ಅವರನ್ನು ಅಭಿನಂದಿಸುತ್ತೇನೆ. ಮೊದಲಿನಿಂದಲೂ ಕಾಂಗ್ರೆಸ್ ಪಕ್ಷ ಮಹಿಳೆಯರ ಪರವಾಗಿದೆ. ಈ ಮಸೂದೆ ತರಲು ಹಲವು ಬಾರಿ ಪ್ರಯತ್ನ ಮಾಡಿತ್ತು. ಇಂತಹ ಕಾರ್ಯ ಮಾಡಲು ದೊಡ್ಡ ಶಕ್ತಿ ಹಾಗೂ ಧೈರ್ಯ ಬೇಕು. ಉಳುವವನೇ ಹೊಲದ ಒಡೆಯ ಮತ್ತು ಬ್ಯಾಂಕ್ ರಾಷ್ಟ್ರೀಕರಣ ಮಾಡಿದ ಇಂದಿರಾ ಗಾಂಧಿ ಹಾಗೂ 18ನೇ ವಯಸ್ಸಿಗೆ ಮತದಾನದ ಹಕ್ಕು ತಂದ ರಾಜೀವ ಗಾಂಧಿ ಇದೇ ರೀತಿಯ ಧೈರ್ಯವನ್ನು ಪ್ರದರ್ಶಿಸಿದ್ದರು ಎಂದರು.

‘ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಮಾತ್ರ ಬರಪೀಡಿತ ಪಟ್ಟಿಯಲ್ಲಿದೆ. ಎರಡನೇ ಪಟ್ಟಿಯಲ್ಲಿ ಉಳಿದ ತಾಲೂಕುಗಳು ಸೇರ್ಪಡೆ ಮಾಡಲಾಗುತ್ತದೆ. ಬೆಳಗಾವಿ ಜಿಲ್ಲೆಯ 14 ತಾಲೂಕುಗಳ ಪೈಕಿ 13 ತಾಲೂಕನ್ನು ಬರಪೀಡಿತ ಎಂಬುದಾಗಿ ಘೋಷಣೆ ಮಾಡಲಾಗಿದೆ. ಆದರೆ ನನ್ನ ಕ್ಷೇತ್ರ ಮಾತ್ರ ಬರಪೀಡಿತ ಎಂಬುದಾಗಿ ಘೋಷಣೆ ಆಗಿಲ್ಲ. ಅಂದರೆ ಇದರಲ್ಲಿ ಯಾವುದೇ ರಾಜಕಾರಣ ಮಾಡುತ್ತಿಲ್ಲ ಎಂಬುದು ಸ್ಪಷ್ಟ. ಎರಡನೇ ಪಟ್ಟಿಯಲ್ಲಿ ಮಳೆ ಬಾರದ ತಾಲೂಕು ಗಳನ್ನು ಕೂಡ ಬರಪೀಡಿತ ಎಂಬುದಾಗಿ ಘೋಷಣೆ ಮಾಡಲಾಗುವುದು’

-ಲಕ್ಷ್ಮೀ ಹೆಬ್ಬಾಳ್ಕರ್, ಸಚಿವರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X