ನ.29ರಂದು ಕೇಂದ್ರ ಸಚಿವ ಕುಮಾರಸ್ವಾಮಿ ಉಡುಪಿಗೆ ಭೇಟಿ

ಉಡುಪಿ, ನ.27: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನ.29ರಂದು ಉಡುಪಿಯಲ್ಲಿ ಜರಗಲಿರುವ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭ ತೀರ್ಥರ ದ್ವಿತೀಯ ಪರ್ಯಾಯ ಪೀಠಾರೋಹಣದ ಪ್ರಥಮ ಮುಹೂರ್ತವಾದ ಬಾಳೆ ಮುಹೂರ್ತದಲ್ಲಿ ಭಾಗವಹಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಯೋಗೇಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2028ರ ಜ.18ರಂದು ಎರಡನೇ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿರುವ ಸೋದೆ ಮಠಾಧೀಶರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕೈಗೊಳ್ಳಲಿರುವ ನಾಲ್ಕು ಮುಹೂರ್ತಗಳಲ್ಲಿ ಬಾಳೆ ಮುಹೂರ್ತ ಮೊದಲನೆ ಯದು. ನ.29ರ ಬೆಳಗ್ಗೆ 7:45ಕ್ಕೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಇದು ನಡೆಯಲಿದೆ.
Next Story




