Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಟ್ರೋಲ್ ಆರ್ಮಿ ವಿರುದ್ಧ ಟ್ರುತ್ ಆರ್ಮಿ...

ಟ್ರೋಲ್ ಆರ್ಮಿ ವಿರುದ್ಧ ಟ್ರುತ್ ಆರ್ಮಿ ಬಳಸುವುದು ಇಂದಿನ ಅಗತ್ಯ: ಯೋಗೇಂದ್ರ ಯಾದವ್

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ವತಿಯಿಂದ ಸಮಾನ ಮನಸ್ಕರ ಸಭೆ

ವಾರ್ತಾಭಾರತಿವಾರ್ತಾಭಾರತಿ19 Aug 2023 9:52 PM IST
share
ಟ್ರೋಲ್ ಆರ್ಮಿ ವಿರುದ್ಧ ಟ್ರುತ್ ಆರ್ಮಿ ಬಳಸುವುದು ಇಂದಿನ ಅಗತ್ಯ: ಯೋಗೇಂದ್ರ ಯಾದವ್

ಉಡುಪಿ: ಇವತ್ತು ಮೊಬೈಲ್‌ನಲ್ಲಿ ವಾಟ್ಸಪ್‌ನಂತಹ ಸಾಧನಗಳಿಂದ ಈ ದೇಶದಲ್ಲಿ ದ್ವೇಷ ಹಬ್ಬಿಸಲಾಗುತ್ತಿದೆ. ಆದುದರಿಂದ ನಾವು ಈ ದೇಶದಲ್ಲಿ ಸಂವಹನದ ಮುಖಾಂತರವೇ ದ್ವೇಷ ಅಳಿಸುವ ಕಾರ್ಯ ಮಾಡಬೇಕು. ಈ ಸುಳ್ಳಿನ ಸಾಮ್ರಾಜ್ಯ ಮುರಿಯಲು ಸಂವಹನ ಸಾಧನವನ್ನು ಉಪಯುಕ್ತ ರೀತಿಯಲ್ಲಿ ಬಳಸಬೇಕು. ಟ್ರೋಲ್ ಆರ್ಮಿಯ ವಿರುದ್ಧ ಟ್ರುತ್ (ಸತ್ಯದ) ಆರ್ಮಿ ಬಳಸಬೇಕಾಗಿದೆ ಎಂದು ನವದೆಹಲಿ ಸ್ವರಾಜ್ ಇಂಡಿಯಾ ಮುಖಂಡ ಹಾಗೂ ರಾಜಕೀಯ ತಜ್ಞ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಉಡುಪಿಯ ಮಣಿಪಾಲ್ ಇನ್ ಹೊಟೇಲ್ ಸಭಾಂಗಣದಲ್ಲಿ ಇಂದು ನಡೆದ ಸಮಾನ ಮನಸ್ಕರ ಸಭೆಯಲ್ಲಿ 'ದೇಶದ ಭವಿಷ್ಯಕ್ಕಾಗಿ ನಾವು' ವಿಷಯದ ಕುರಿತು ಅವರು ಮಾತನಾಡುತ್ತಿದ್ದರು.

ಬಿಜೆಪಿ ಆರ್‌ಎಸ್‌ಎಸ್ ದ್ವೇಷ ರಾಜಕಾರಣದಲ್ಲಿ ಯಶಸ್ವಿಯಾಗಲು ನಮ್ಮ ವೈಫಲ್ಯ ಕೂಡ ಇದೆ. ನಾವು ಕಳೆದ 70 ವರ್ಷದಲ್ಲಿ ಮಾಡಿದ್ದೇನು ಎಂಬುವುದನ್ನು ಪ್ರಶ್ನಿಸಬೇಕು. ಆ ಕುರಿತು ಅವಲೋಕಿಸಬೇಕಾದ ಅಗತ್ಯವಿದೆ. ನಾವು ಹಲವು ತಪ್ಪುಗಳನ್ನು ಮಾಡಿದ್ದೇವೆ. ದೊಡ್ಡ ದೊಡ್ಡ ಜಾತ್ಯಾತೀತರು ಇಂಗ್ಲಿಷ್ ನಲ್ಲಿ ಮಾತನಾಡುತ್ತಾರೆ. ಇಲ್ಲಿನ ಜನರ ಭಾಷೆಯಲ್ಲಿ ಮಾತನಾಡಬೇಕಾಗಿದೆ‌ ಎಂದರು.

ನಮ್ಮ ದೊಡ್ಡ ಸಂಪತ್ತಾದ ರಾಷ್ಟ್ರೀಯವಾದವನ್ನು ಅವರಿಗೆ ಬಿಟ್ಟು ಕೊಟ್ಟೆವು. ಇವತ್ತು ಅವರು ನಮಗೆ ಅಂದೋಲನ ಜೀವಿಯೆಂದು ಹಂಗಿಸುತ್ತಾರೆ. ಸ್ವಾತಂತ್ರ್ಯಕ್ಕಾಗಿ ಮಡಿಯದ ಜನ ಇಂದು ಸ್ವಾತಂತ್ರ್ಯದ ಹಕ್ಕುದಾರರಾಗಿ ಮುಂದೆ ಬರು ತ್ತಾರೆ. ಇದಕ್ಕೆ ನಾವೆ ಹೊಣೆಗಾರರಾಗಿದ್ದೇವೆ. ಮತ್ತೆ ನಾವು ಆ ರಾಷ್ಟ್ರೀಯವಾದವನ್ನು ವಾಪಸು ಪಡೆಯಬೇಕು ಎಂದು ಅವರು ತಿಳಿಸಿದರು.

2024 ಹೋರಾಟ ಮಾತ್ರ ನಮ್ಮ ಎದುರು ಇರುವುದಲ್ಲ, ಇಂದು ದೀರ್ಘ ಕಾಲದ ಹೋರಾಟ ನಮ್ಮ ಬಳಿ ಸ್ವಾತಂತ್ರ್ಯ ಆಂದೋಲನದ ಇತಿಹಾಸ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಇದೆ‌. ಇದು ಮುಂದಿನ ಮಕ್ಕಳ ಭವಿಷ್ಯ ಉಳಿಸುವ ಸಮಯವಾಗಿದೆ. ನಾವು ಏನನ್ನು ಉದ್ವೇಗದಿಂದ ಮಾಡದೆ ಸಂಯಮದಿಂದ ದೇಶ ಕಟ್ಟುವ ಕೆಲಸ ಮಾಡಬೇಕಾಗಿದೆ. ಈ ದೇಶವನ್ನು ಉಳಿಸುವ ಪ್ರಯತ್ನ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು‌ ಹೇಳಿದರು.

ಇವತ್ತು ಹರಡುತ್ತಿರುವ ದ್ವೇಷ ನೈಸರ್ಗಿಕ ಕ್ರಿಯೆಯಲ್ಲ. ಇದು ಸಾಮಾನ್ಯವೂ ಅಲ್ಲ. ಇದನ್ನು ಮಾಡಿಸಲಾಗುತ್ತಿದೆ. ಇದರ ಹಿಂದೆ ರಾಜಕೀಯ ಇದೆ. ಆದ್ದರಿಂದ ನಾವು ರಾಜಕೀಯದಿಂದ ಹಿಂದೆ ಸರಿಯುವಂತಿಲ್ಲ. ನಾವು ರಾಜಕೀಯವನ್ನು ಸರಿ ಪಡಿಸುವ ಪ್ರಯತ್ನದ ಭಾಗವಾಗಿ ಸಕ್ರಿಯರಾಗಬೇಕಾದ ಅವಶ್ಯಕತೆ ಇದೆ ಎಂದರು.

ನಾವು ರಾಜಕೀಯವನ್ನು ನಿರ್ಲಕ್ಷ್ಯ ಮಾಡದೆ ಇದರ ಕಡೆ ಗಮನ ಹರಿಸಬೇಕು. ರಾಜಕೀಯದ ಕಡೆ ನಾವು ಹೆಜ್ಜೆ ಇಡದೆ ಈ ಕೆಲಸ ಮಾಡಲು ಸಾಧ್ಯವಿಲ್ಲ. ಇವತ್ತು ನಮ್ಮ ಮಕ್ಕಳ ಭವಿಷ್ಯ ರಾಜಕೀಯದಿಂದ ನಿರ್ಧಾರವಾಗುತ್ತಿದೆ. ಗೂಂಡಾಗಳು ರಾಜಕೀಯಕ್ಕೆ ಬರುತ್ತಿರುವ ಈ ಕಾಲಘಟ್ಟದಲ್ಲಿ ಒಳ್ಳೆಯ ಜನರು ಇದರತ್ತ ಮುಖ ಮಾಡಬೇಕು ಎಂದು ಅವರು ತಿಳಿಸಿದರು.

ಅಂಕಣಕಾರ, ಅಝೀಂ ಪ್ರೇಮ್ ಜಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎ.ನಾರಾಯಣ ಬೆಂಗಳೂರು ಮಾತನಾಡಿ, ರಾಜಕೀಯ ಎಂಬುದು ಕೇವಲ ಚುನಾವಣೆಗೆ ಸಿಮೀತವಾಗಿಲ್ಲ ಎಂಬುದು ಪ್ರಸ್ತುತ ವಿದ್ಯಾಮಾನ ನೋಡಿದರೆ ಅರ್ಥವಾಗುತ್ತದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳು ಗೆದ್ದರೂ ಈಗಾಗಲೆ ಹಬ್ಬಿದ ದ್ವೇಷ ಅಳಿಸಲು ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಪ್ರಯತ್ನದ ಭಾಗವಾಗಿ ನಾವು ಇನ್ನಷ್ಟು ಕಾರ್ಯ ಪ್ರವೃತರಾಗಬೇಕು. ನಮ್ಮಲ್ಲಿಯೇ ಪರಿಹಾರಗಳನ್ನು ನಾವು ಕಂಡು ಕೊಳ್ಳಬೇಕು ಎಂದರು.

2019ರ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪ್ರಮಾಣದಲ್ಲಿ ಗೆದ್ದರೂ ಸಿಕ್ಕ ಮತ ಪ್ರಮಾಣ ಶೇ.36 ಮಾತ್ರ. ಇವರೆಲ್ಲ ಆ ಪಕ್ಷ ದ್ವೇಷ ರಾಜಕಾರಣ ಮಾಡುತ್ತಿದೆ ಎಂಬ ಕಾರಣಕ್ಕೆ ಮತ ಹಾಕುತ್ತಿಲ್ಲ. ಅದೇ ರೀತಿ ಮತ ಹಾಕದವರಲ್ಲಿ ದೊಡ್ಡ ಸಂಖ್ಯೆ ಬಿಜೆಪಿ ದ್ವೇಷ ರಾಜಕೀಯ ಮಾಡುತ್ತಿದೆ ಎಂಬ ಕಾರಣಕ್ಕೆ ಹಾಕಿಲ್ಲ. ಆದುದರಿಂದ ಬಿಜೆಪಿಗೆ ಮತ ಹಾಕದ ಜನರನ್ನು ಈ ಕುರಿತು ಜಾಗೃತಗೊಳಿಸಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದರು.

ದ್ವೇಷ ರಾಜಕಾರಣ ತಿರಸ್ಕರಿಸುವ ದೊಡ್ಡ ಜನ ಸಮೂಹ ಸೃಷ್ಟಿಯಾಗುವವರೆಗೆ ಈ ವಾತಾವರಣ ಬದಲಾಯಿಸಲು ಸಾಧ್ಯವಾಗುದಿಲ್ಲ. ಆದರೆ ನಾವು ಸಂವಿಧಾನದ ಆಶಯ ತಿಳಿಸುವಲ್ಲಿ ಸೋತಿದ್ದೇವೆ. ಈ ದೇಶ ದೇಶವಾಗಿ ಉಳಿಯಲು ಸಂವಿಧಾನದ ಪ್ರಾಧಾನ್ಯತೆಯನ್ನು ಜನರಿಗೆ ತಿಳಿಸಬೇಕಾಗಿದೆ. ಇಲ್ಲದಿದ್ದರೆ ಅವರು ಹೇಳುವ ವಿಚಾರದಲ್ಲಿ ಈ ದೇಶ ಉಳಿಯುವುದಿಲ್ಲ ಎಂದರು.

ಬಿಜೆಪಿಯವರು ಇಡೀ ಸಿದ್ಧಾಂತವನ್ನು ಪೊಳ್ಳು ವಾದದ ಮೇಲೆ ಕಟ್ಟಿದ್ದಾರೆ. ಇದು ಹೆಚ್ಚು ದಿನ ಬಾಳುವುದಿಲ್ಲ. ಅವರಲ್ಲಿ ಸುಳ್ಳು ಇದ್ದರೆ ನಮ್ಮಲ್ಲಿ‌ ಸತ್ಯ ಇದೆ. ಆದುದರಿಂದ ಇವರ ದ್ವೇಷದ ರಾಜಕಾರಣದ ವಿರುದ್ಧ ನಾವು ಸತ್ಯ ಮತ್ತು ಸಂವಿಧಾನವನ್ನು ಅಸ್ತ್ರವಾಗಿ ಬಳಸಬೇಕು. ಸಂವಿಧಾನದ ಮೌಲ್ಯವನ್ನು ಹೊಸ ತಲೆಮಾರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ಅವರು ಹೇಳಿದರು.

ಎದ್ದೇಳು ಕರ್ನಾಟಕ ಸಂಯೋಜನಾ ಸಮಿತಿಯ ಸದಸ್ಯ ಅಕ್ಬರ್ ಅಲಿ ಸಮಾರೋಪ ಭಾಷಣ ಮಾಡಿದರು. ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ದಸಂಸ ಮುಖಂಡರಾದ ಮಂಜುನಾಥ್ ಗಿಳಿಯಾರ್, ಹಿರಿಯ ಚಿಂತಕ ಪ್ರೊ.ಫಣಿರಾಜ್, ಫಾ.ವಿಲಿಯಂ ಮಾರ್ಟಿಸ್, ಲೂವಿಸ್ ಲೋಬೊ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕ ಸಯ್ಯದ್ ಫರೀದ್ ವಂದಿಸಿದರು. ಯಾಸೀನ್ ಕೋಡಿಬೆಂಗ್ರೆ ಕಾರ್ಯಕ್ರಮ ನಿರೂಪಿಸಿದರು.

"ದೇಶದ ನೂಹ್ ಭಾಗದಲ್ಲಿ ಎರಡು ಸಮುದಾಯಗಳ ನಡುವೆ ಹಿಂಸಾಚಾರ ನಡೆಯಿತು‌ ಎಂದು ಹೇಳಲಾಗುತ್ತದೆ. ಆದರೆ ವಾಸ್ತವಾಂಶ ಬೇರೆಯೇ ಇದೆ. ಅಲ್ಲಿ ಇವತ್ತು ಕೂಡ ಮುಸ್ಲಿಮರು ಕೃಷ್ಣನನ್ನು ದೇವಚರನೆಂದು ನಂಬುತ್ತಾರೆ. ಆ ಪ್ರದೇಶದಲ್ಲಿ ಹಿಂದು-ಮುಸ್ಲಿಮ್ ಗಲಾಟೆ ನಡೆದಿಲ್ಲ‌. ಅಲ್ಲಿ ಕೆಲವು ಗೂಂಡಾಗಳ ನಡುವೆ ಮತ್ತು ಹೊರಗಿನಿಂದ ಬಂದ ಜನರ ನಡುವೆ ಸಂಘರ್ಷವಾಯಿತು. ಅಲ್ಲಿ ನಡೆದ ಯಾತ್ರೆಯಲ್ಲಿ ಮಹಿಳೆಯರು, ಮಕ್ಕಳು ಇದ್ದರು. ಅವರ ಹಿಂದೆ ನೂರಾರು ವಾಹನದಲ್ಲಿ ರೌಡಿಗಳು ಶಸ್ತ್ರಾಗಳೊಂದಿಗೆ ಕುಳಿತ್ತಿದ್ದರು. ಯಾತ್ರೆಗೆ ಬರುವ ಮುನ್ನ ವೀಡಿಯೊಗಳನ್ನು ಹಾಕಲಾಗುತ್ತಿತ್ತು. ವ್ಯವಸ್ಥಿತವಾಗಿ ಈ ಹಿಂಸಾಚಾರ ನಡೆಸಲಾಯಿತು"

- ಯೋಗೇಂದ್ರ ಯಾದವ್, ರಾಜಕೀಯ ತಜ್ಞ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X