Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾದಕ ದ್ರವ್ಯ ಸೇವನೆ ನಿಯಂತ್ರಣಕ್ಕೆ...

ಮಾದಕ ದ್ರವ್ಯ ಸೇವನೆ ನಿಯಂತ್ರಣಕ್ಕೆ ಕ್ಯೂಆರ್ ಕೋಡ್‌ ವ್ಯಾಪಕವಾಗಿ ಬಳಸಿ: ಉಡುಪಿ ಡಿಸಿ ಸ್ವರೂಪ ಟಿ.ಕೆ. ಸಲಹೆ

ವಾರ್ತಾಭಾರತಿವಾರ್ತಾಭಾರತಿ6 Nov 2026 7:38 PM IST
share
ಮಾದಕ ದ್ರವ್ಯ ಸೇವನೆ ನಿಯಂತ್ರಣಕ್ಕೆ ಕ್ಯೂಆರ್ ಕೋಡ್‌ ವ್ಯಾಪಕವಾಗಿ ಬಳಸಿ: ಉಡುಪಿ ಡಿಸಿ ಸ್ವರೂಪ ಟಿ.ಕೆ. ಸಲಹೆ

ಉಡುಪಿ, ನ.6: ಜಿಲ್ಲೆಯಲ್ಲಿ ಮಾದಕ ದ್ರವ್ಯ ಸೇವನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅನಾಮಧೇಯವಾಗಿ ಮಾಹಿತಿ ನೀಡಲು ಪೊಲೀಸ್ ಇಲಾಖೆ ಅಭಿವೃದ್ಧಿ ಪಡಿಸಿರುವ ಕ್ಯೂಆರ್ ಕೋಡ್ ಎಲ್ಲಾ ಕಡೆಗಳಲ್ಲಿ ವ್ಯಾಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಬೇಕು. ಮಾದಕ ವಸ್ತುಗಳ ಮಾರಾಟ, ಸಾಗಾಟ / ಸೇವನೆ ಕಂಡುಬಂದಲ್ಲಿ ಈ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ ಗೌಪ್ಯವಾಗಿ ಮಾಹಿತಿ ಹಂಚಿಕೊಳ್ಳಬಹುದು. ಮಾಹಿತಿ ಹಂಚಿಕೊಂಡವರ ಗೌಪ್ಯತೆಯನ್ನು ಕಟ್ಟುನಿಟ್ಟಾಗಿ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಶುಕ್ರವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಎನ್‌ಸಿಓಆರ್‌ಡಿ (ನಾರ್ಕೊ ಕೋ ಆಡಿನೇಶನ್ ಸೆಂಟರ್) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸುವಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಮಾದಕ ವಸ್ತುಗಳ ಮಾರಾಟ, ಬಳಕೆ ಮತ್ತಿತರ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಮಾಹಿತಿ ಸಂಗ್ರಹಕ್ಕೆ ಅಭಿವೃದ್ಧಿ ಪಡಿಸಿರುವ ಕ್ಯೂಆರ್ ಕೋಡ್ ಮೂಲಕ ಮಾಹಿತಿ ಹಂಚಿ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಮಾದಕ ವಸ್ತುಗಳ ಬಳಕೆಯಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗಿ ಆರ್ಥಿಕ ನಷ್ಟದ ಜೊತೆಗೆ ಭವಿಷ್ಯದ ಜೀವನ ದುಸ್ತರವಾಗುವುದು. ಆದ್ದರಿಂದ ಪ್ರತಿಯೊಬ್ಬರೂ ಇವುಗಳಿಂದ ದೂರವಿರ ಬೇಕು. ಯುವಜನರು ಇಂತಹ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳದಂತೆ ನೋಡಿಕೊಳ್ಳ ಬೇಕು. ಸಮಾಜದಲ್ಲಿ ಇಂತಹ ದುಶ್ಚಟಗಳಿಗೆ ಕಡಿವಾಣ ಹಾಕಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದರು.

ಮೆಡಿಕಲ್ ಶಾಪ್‌ಗಳ ಮೇಲೆ ನಿಗಾ: ಔಷಧಿ ಅಂಗಡಿಗಳಲ್ಲಿ ಅಮಲು ಬರಿಸುವ ಔಷಧಿಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುವ ಹಾಗಿಲ್ಲ. ‘ವೈದ್ಯರ ನಿರ್ದೇಶನವಿಲ್ಲದೇ ಔಷಧ ಮಾರಾಟ ನಿಷೇಧ’ ಎಂಬ ಸೂಚನಾ ಫಲಕ ಗಳನ್ನು ಪ್ರತಿಯೊಂದು ಮೆಡಿಕಲ್ ಶಾಪ್‌ಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಔಷಧಿ ಅಂಗಡಿಗಳ ಸಿಸಿಟಿವಿ ನಿರಂತರವಾಗಿ ಚಾಲನೆ ಯಲ್ಲಿರಬೇಕು. ಜೊತೆಗೆ ಸಿಸಿಟಿಟಿ ಫೂಟೇಜ್‌ಗಳ ಸಂಗ್ರಹ ಕನಿಷ್ಠ ಮೂರು ತಿಂಗಳವರೆಗೆ ಕಾಪಿಡುವಂತೆ ನೋಡಿಕೊಳ್ಳಬೇಕು. ಔಷಧ ನಿಯಂತ್ರಕರು ಹಾಗೂ ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮವಹಿಸಬೇಕು ಎಂದು ಸ್ವರೂಪ ಟಿ.ಕೆ. ನುಡಿದರು.

ಶಾಲಾ-ಕಾಲೇಜುಗಳ ವಸತಿ ನಿಲಯಗಳಲ್ಲಿ ರಕ್ತ ತಪಾಸಣೆ ನಡೆಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಶೈಕ್ಷಣಿಕ ಸಂಸ್ಥೆಗಳಲ್ಲಿ ಕಡಿಮೆ ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಅವರಿಗೆ ಮತ್ತು ಅವರ ಪೋಷಕರಿಗೆ ಆಪ್ತ ಸಮಾಲೋಚನೆ ನೀಡಬೇಕು. ಮೆಡಿಕಲ್ ಶಾಪ್‌ಗಳಲ್ಲಿ ಸಂದೇಹಾಸ್ಪದವಾಗಿ ಕೆಮ್ಮಿನ ಔಷಧಿ ಖರೀದಿಸುವವರ ಬಗ್ಗೆ ನಿಗಾ ಇಡಬೇಕು ಎಂದರು.

ಮಾದಕ ದ್ರವ್ಯ ಸೇವನೆ ಮತ್ತು ಮಾರಾಟದಿಂದ ಆಗುವ ಹಾನಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಬೀದಿ ನಾಟಕ, ಸಂಗೀತ, ಕಲೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ನಡೆಸಿ ಜನರಲ್ಲಿ ಅರಿವು ಮೂಡಿಸಬೇಕು. ಜಿಲ್ಲೆಯ ಗ್ರಾಮ ಪಂಚಾಯತಿಗಳು ಗ್ರಾಮಗಳನ್ನು ತಂಬಾಕು ಮುಕ್ತವಾಗಿಸ ಬೇಕು. ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದರು.

ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೃಷಿ ಜಮೀನು, ತೋಟ ಹಾಗೂ ಕಾಡಂಚಿನಲ್ಲಿ ಗಾಂಜಾ ಬೆಳೆಗಳನ್ನು ಬೆಳೆಯುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸುತ್ತಿರಬೇಕು. ರೈಲ್ವೆ ನಿಲ್ದಾಣಗಳಲ್ಲಿ ಇವುಗಳ ಸಾಗಾಟದ ಬಗ್ಗೆ ಎಚ್ಚರವಹಿಸಬೇಕು ಜೊತೆಗೆ ಅಲ್ಲಿ ಕ್ಯೂಆರ್ ಕೋಡ್ ಬಗ್ಗೆ ಪ್ರಚಾರ ಕೈಗೊಳ್ಳಬೇಕು ಎಂದರು.

ಮಾಹೆ ಕಾಲೇಜುಗಳಲ್ಲಿ ಜಾಗೃತಿ: ಮಾಹೆ ವಿಶ್ವವಿದ್ಯಾಲಯದ ಅಡಿಯಲ್ಲಿ 25ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿದ್ದು, ಪ್ರತಿಯೊಂದು ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವಸ್ತುಗಳ ಬಳಕೆ, ಅವುಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಚ್ಚು ಆಯೋಜಿಸಬೇಕು. ಕ್ಯೂಆರ್ ಕೋಡ್‌ಗಳನ್ನು ಪ್ರತಿಯೊಂದು ಶಾಲಾ-ಕಾಲೇಜುಗಳಲ್ಲಿ ಹಾಗೂ ಹಾಸ್ಟೆಲ್‌ಗಳಲ್ಲಿ ಎದ್ದುಕಾಣುವ ಜಾಗಗಳಲ್ಲಿ ಪ್ರದರ್ಶಿಸಬೇಕು ಎಂದರು.

ಜಿಲ್ಲೆಯ ಶಾಲಾ ಕಾಲೇಜು, ಬಸ್ ನಿಲ್ದಾಣ, ಸರಕಾರಿ ಕಚೇರಿಗಳು, ಸಭಾಂಗಣಗಳು, ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳು, ಮೆಡಿಕಲ್ ಶಾಪ್‌ಗಳು ಸೇರಿದಂತೆ ಹೆಚ್ಚು ಜನರು ಸೇರುವ ಪ್ರದೇಶಗಳಲ್ಲಿ ಎದ್ದು ಕಾಣುವ ರೀತಿ ಕ್ಯೂಆರ್ ಕೋಡ್‌ನ್ನು ಪ್ರದರ್ಶಿಸಬೇಕು ಎಂದ ಅವರು, ಕಳೆದ ಸಭೆಯಲ್ಲಿ ಈ ಬಗ್ಗೆ ಸೂಚನೆ ನೀಡಲಾಗಿದ್ದರೂ ಇದರ ಅನುಷ್ಠಾನ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 4.0 ಅಭಿಯಾನದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಬಿಡುಗಡೆಗೊಳಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಡಿಹೆಚ್‌ಓ ಡಾ. ಬಸವರಾಜ್ ಹುಬ್ಬಳ್ಳಿ, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.




Tags

QR codeextensivelycontrol drugabuseUdupi DCSwaroop T.K
share
ವಾರ್ತಾಭಾರತಿ
ವಾರ್ತಾಭಾರತಿ
Next Story
X