Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ...

ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನ: ಉಡುಪಿ ಡಿಸಿ

ವಾರ್ತಾಭಾರತಿವಾರ್ತಾಭಾರತಿ19 Nov 2025 7:54 PM IST
share
ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕಾ ಅಭಿಯಾನ: ಉಡುಪಿ ಡಿಸಿ

ಉಡುಪಿ: ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆ ಎನಿಸಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಯು ತಿದ್ದು, ಜಿಲ್ಲೆಯ ಪ್ರತಿಯೊಬ್ಬ ಪಶು ಸಾಕಾಣಿಕೆ ಮಾಡುವವರು ಲಸಿಕೆ ಹಾಕಿಸುವ ಮೂಲತ ತಮ್ಮ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ.

ಬುದವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಾನುವಾರುಗಳಿಗೆ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಕಳೆದ ನವೆಂಬರ್ 3ರಿಂದ ಡಿಸೆಂಬರ್ 2ರವರೆಗೆ ಎಲ್ಲಾ ಜಾನುವಾರುಗಳಿಗೆ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕೆ ನೀಡಲಾಗುತ್ತಿದೆ. ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಕಟ್ಟೆಚ್ಚರ ವಹಿಸುವುದರೊಂದಿಗೆ ಯಾವುದೇ ಜಾನುವಾರು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.

ಕಳೆದ ಏಳನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 2,05,518 ಜಾನುವಾರುಗಳಿಗೆ ಲಸಿಕೆ ನೀಡುವ ಗುರಿ ಹೊಂದಿದ್ದು, ಇದರಲ್ಲಿ 1,93,496 ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇ.96ರಷ್ಟು ಪ್ರಗತಿ ಸಾಧಿಸಲಾಗಿದೆ. ಇದೀಗ ಎಂಟನೇ ಸುತ್ತಿಗೆ 1,93,496 ಜಾನುವಾರುಗಳಿಗೆ ಲಸಿಕೆಯ ಗುರಿ ನಿಗದಿಯಾಗಿದ್ದು, ಈವರೆಗೆ 88,556 ಜಾನುವಾರುಗಳಿಗೆ ಲಸಿಕೆ ಹಾಕಿಸಲಾಗಿದೆ.ಅಭಿಯಾನದ ಕೊನೆಗೆ ಪ್ರತಿಶತಃ ನೂರರಷ್ಟು ಪ್ರಗತಿಯಾಗಿರಬೇಕು ಎಂದು ಸ್ವರೂಪ ಟಿ.ಕೆ. ಹೇಳಿದ್ದಾರೆ.

ಲಸಿಕಾ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ 2,28,350 ಡೋಸ್ ಲಸಿಕೆ ಲಭ್ಯವಿದೆ. ಲಸಿಕಾ ಕಾರ್ಯದ ಸಂದರ್ಭದಲ್ಲಿ ಉತ್ಪತ್ತಿಯಾಗುವ ಜೀವವೈದ್ಯ ತ್ಯಾಜ್ಯ ಗಳನ್ನು ನಿಯಮಾನುಸಾರ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಎಂದ ಜಿಲ್ಲಾಧಿಕಾರಿ, ಜಿಲ್ಲೆಯ ಎಲ್ಲಾ ಗ್ರಾಮಗಳ ಜಾನುವಾರುಗಳಿಗೆ ಲಸಿಕಾ ಚುಚ್ಚುಮದ್ದು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು.

ಪಶುವೈದ್ಯರು, ತಾಂತ್ರಿಕ ಸಿಬ್ಬಂದಿ, ಕೆ.ಎಂ.ಎಫ್ ಸಿಬ್ಬಂದಿ, ಮೈತ್ರಿ ಕಾರ್ಯಕರ್ತರು, ಪಶು ಸಖಿಯರು ಹಾಗೂ ಇತರೆ ತರಬೇತಿ ಹೊಂದಿದ ಒಟ್ಟು 268 ಸಿಬ್ಬಂದಿಗಳನ್ನು ಲಸಿಕಾ ಕಾರ್ಯಕ್ಕೆ ನಿಯೋಜಿಸಲಾಗಿದ್ದು, ಇವರುಗಳು ಮನೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ಕೇಳಿದ ಮಾಹಿತಿ ಗಳನ್ನೆಲ್ಲಾ ನೀಡಿ ಸಹಕರಿಸುವಂತೆ ಜಿಲ್ಲಾದಿಕಾರಿ ತಿಳಿಸಿದರು.

ಸಭೆಯಲ್ಲಿ ಪಶುವೈದ್ಯಕೀಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ, ಮಂಗಳೂರು ಕೆ.ಎಂ.ಎಫ್ ಉಪ ವ್ಯವಸ್ಥಾಪಕ ಡಾ.ಮಾಧವ ಐತಾಳ್, ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯ ಕಾಪು, ಉಡುಪಿ, ಬೈಂದೂರು, ಹೆಬ್ರಿ, ಕುಂದಾಪುರ, ಕಾರ್ಕಳ ಹಾಗೂ ಬ್ರಹ್ಮಾವರ ತಾಲೂಕು ಮತ್ತು ಉಡುಪಿ ಪಾಲಿಕ್ಲಿನಿಕ್‌ನಲ್ಲಿ ತಲಾ ಒಂದರಂತೆ ಒಟ್ಟು 8 ಪಶು ಸಂಜೀವಿನಿ ಅಂಬುಲೆನ್ಸ್ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತೀ ಚಿಕಿತ್ಸಾ ಘಟಕದ ವಾಹನದಲ್ಲಿ ಪಶುವೈದ್ಯರು, ಪಶುವೈದ್ಯ ಸಹಾಯಕ ಹಾಗೂ ವಾಹನ ಚಾಲಕರು ನೇಮಕಗೊಂಡಿದ್ದಾರೆ. ಈ ವಾಹನಗಳ ಮೂಲಕ 2025ರ ಜುಲೈನಿಂದ ಸೆಪ್ಟಂಬರ್‌ವರೆಗೆ ಒಟ್ಟು 4611 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿದೆ.

-ಡಾ.ಎಂ.ಸಿ ರೆಡ್ಡಪ್ಪ, ಉಪನಿರ್ದೇಶಕ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X